Saturday, November 27, 2021

ತರಕಾರಿ ಬೆಲೆಯಲ್ಲಿ ದಿಢೀರ್ ಹೆಚ್ಚಳ: ಜನ ಸಾಮಾನ್ಯ ಕಂಗಾಲು

ಬೆಂಗಳೂರು: ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ.

ಪ್ರತೀ ತರಕಾರಿ ಮೇಲೆ 10 ರಿಂದ 20 ರೂಗಳಷ್ಟು ಹೆಚ್ಚಳವಾಗಿದ್ದು,ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ.

ರಾಜ್ಯದಲ್ಲಾಗುತ್ತಿರುವ ಭಾರೀ ಮಳೆಗೆ ಬೆಳೆ ನಾಶವಾಗಿದೆ. ಜೊತೆಗೆ ನೆರೆ ರಾಜ್ಯಗಳಿಂದ, ಬರುತ್ತಿದ್ದ ಟೊಮೆಟೊ ಬರುತ್ತಿಲ್ಲ.

ಹೀಗಾಗಿ ಟೊಮೆಟೊ ಹಣ್ಣಿನ ಬೆಲೆ ಏರಿಕೆ ಕಾಣುತ್ತಿದೆ. ಮಹಾರಾಷ್ಟ್ರದಿಂದಲೂ ಈ ಬಾರಿ ಟೊಮೆಟೊ ಪೂರೈಕೆಯಾಗಿಲ್ಲ. ಮುಂದಿನ ದಿನಗಳಲ್ಲಿ ಟೊಮೆಟೊ ಬೆಲೆ 100 ರೂಪಾಯಿ ದಾಟಿದ್ರೂ ಅಚ್ಚರಿಯಿಲ್ಲ.

ದಿನ ಬಳಕೆ ಸಾಮಾಗ್ರಿಗಳ ಬೆಲೆ ಏರಿಕೆ ನಡುವೆ ಮತ್ತೊಂದು ದುಬಾರಿ ಹೊಡೆತ ಕೊಟ್ಟಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...