Connect with us

    LATEST NEWS

    ‘ ಸಾಕಷ್ಟು ನೊಂದಿದ್ದೇವೆ- ದಯವಿಟ್ಟು ಸುಳ್ಳು ಸುದ್ದಿ ಹರಡಿಸಬೇಡಿ’

    Published

    on

    ಉಡುಪಿ :  ಪ್ರಿಯತಮನಿಂದ ಪ್ರೀತಿಸಿದ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದು ತಮ್ಮ ಮಗಳನ್ನು ನಾವು ಕಳೆದುಕೊಂಡಿದ್ದೇವೆ ಈಗ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಮಗಳು ಸೌಮ್ಯಶ್ರೀ ಕುರಿತು ಇಲ್ಲಸಲ್ಲದ ಸುಳ್ಳುಸುದ್ದಿಗಳನ್ನು ಹಾಕಲಾಗುತ್ತಿದೆ ಇದರಿಂದ ನಮ್ಮ ಕುಟುಂಬದ ಮಾನ ಹರಾಜು ಹಾಕುವುದನ್ನು ದಯವಿಟ್ಟು ನಿಲ್ಲಿಸಬೇಕು ಎಂದು ಸೌಮ್ಯಶ್ರೀ ಕುಟುಂಬಿಕರು ಮನವಿ ಮಾಡಿದರು.

    ಉಡುಪಿ ಪ್ರೆಸ್‌ ಕ್ಲಬ್‌ ನಲ್ಲಿ ಸುದ್ದಿಗೋಷ್ಠಿಯಲ್ಲಿ ಸೌಮ್ಯಶ್ರೀ ಅವರ ಅಣ್ಣನ ಹೆಂಡತಿ ದೀಕ್ಷೀತಾ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ್‌ ಕುಲಾಲ್‌ ಮತ್ತು ಸೌಮ್ಯಶ್ರೀ ನಡುವೆ ಎಂಟು ವರ್ಷಗಳಿಂದ ಪ್ರೀತಿ ಇತ್ತು ಎಂದು ಹೇಳಲಾಗುತ್ತಿದೆ ಇದು ಸಂಪೂರ್ಣ ಸುಳ್ಳಾಗಿದ್ದು ಇವರಿಬ್ಬರ ನಡುವೆ ಕಳೆದ 3.5 ವರ್ಷದ ಹಿಂದೆ ಪ್ರೀತಿ ಆರಂಭವಾಗಿತ್ತು.

    ಬಳಿಕ ಈ ವಿಚಾರ ಮನೆಯಲ್ಲಿ ಗೊತ್ತಾದ ಬಳಿಕ ಸೌಮ್ಯಶ್ರೀ ಮನೆಯವರು ಒಪ್ಪಿದ್ದರೂ ಸಂದೇಶ್‌ ಮನೆಯವರು ಒಪ್ಪಿರಲಿಲ್ಲ.

    ಸಂದೇಶ್‌ ಅವರಿಗೆ ಹಲವು ಬಾರಿ ಮನವಿ ಮಾಡಿದ್ದು ಮೊದಲು ಅಣ್ಣನ ಮದುವೆ ಆಗಲಿ ಬಳಿಕ ನೋಡೋಣ ಎಂದು ಮುಂದೂಡುತ್ತಿದ್ದ.

    ಸೌಮ್ಯಶ್ರೀ ಅವರಿಗೆ ಸಂದೇಶ್‌ ಕುಲಾಲ್‌ ಫೋನ್‌ ಮಾಡಿ ಕಿರುಕುಳ ನೀಡುತ್ತಿದ್ದ. ಬಳಿಕ ಸೌಮ್ಯಶ್ರಿ ತಂದೆಯ ಜೊತೆ ಹೋಗಿ ಮಾತನಾಡಿ ಸಂದೇಶ್‌ ಗೆ ಮದುವೆಯಾಗುವಂತೆ ಕೂಡ ಒತ್ತಾಯ ಮಾಡಿದ್ದರೂ ಸಹ ಕಾರಣಗಳನ್ನು ನೀಡುತ್ತಾ ಬಂದಿದ್ದ ಎಂದು ಹೇಳಿದರು.

    ಬಳಿಕ ಕನಿಷ್ಠ ರಿಜಿಸ್ಟರ್‌ ಮದುವೆಯಾಗುವಂತೆ ಸೌಮ್ಯಶ್ರೀ ಮನೆಯವರು ಸಂದೇಶ್‌ ಗೆ ಕೇಳಿದರೂ ಕೂಡ ಅದಕ್ಕೂ ಒಪ್ಪದೆ ಇರುವಾಗ ಸೌಮ್ಯಶ್ರೀ ಬೇಸರದಿಂದ ತನಗೆ ಈ ಹುಡುಗ ಬೇಡ ಎಂದು ಹೇಳಿದ್ದಳು.

    ಈ ನಡುವೆ ಸೌಮ್ಯಶ್ರೀ ತಂದೆಗೆ ಹೃದಯಾಘಾತವಾಗಿ 1.5 ವಾರಗಳ ಕಾಲ ಆಸ್ಪತ್ರೆಯಲ್ಲಿದ್ದು, ವೈದ್ಯರು ಮೂರು ತಿಂಗಳು ಬದುಕುತ್ತಾರೆ ಎಂದು ಹೇಳಿದ್ದರು.

    ಇದರಿಂದ ಮತ್ತೆ ಆಘಾತಗೊಂಡ ಸೌಮ್ಯಶ್ರೀ ತಂದೆಯೇ ತನಗೆ ಸರ್ವಸ್ವವಾಗಿದ್ದ ಅವರ ಕೊನೆಯ ಆಸೆ ನಮ್ಮಿಬ್ಬರ ವಿವಾಹ ಆಗಿರುವುದರಿಂದ ಮದುವೆಯಾಗೋಣ ಎಂದರೂ ಕೇಳಿರಲಿಲ್ಲ.

    ಇದರಿಂದ ಹತಾಶೆಗೊಂಡ ಸೌಮ್ಯಶ್ರೀ ತನಗೆ ಬೇರೆ ಹುಡುಗನನ್ನು ನೋಡುವಂತೆ ಮನೆಯವರಿಗೆ ಹೇಳೀದ್ದು ಅದರಂತೆ ಮನೆಯವರು ಒಳ್ಳೆಯ ಹುಡುಗನನ್ನು ನೋಡಿದ್ದು ನಿಶ್ಚಿತಾರ್ಥ ಕೂಡ ನಡೆದಿತ್ತು.

    ಇದರಿಂದ ಕೋಪಗೊಂಡ ಸಂದೇಶ್‌ ಕುಲಾಲ್‌ ವಿಪರೀತವಾಗಿ ಸೌಮ್ಯಶ್ರೀ ಗೆ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸರಗೊಂಡ ಸೌಮ್ಯಶ್ರೀ ಮನೆಯವರ ಜೊತೆ ತೆರಳಿ ಉಡುಪಿ ಮಹಿಳಾ ಠಾಣೆಯಲ್ಲಿ ಒಂದು ತಿಂಗಳ ಹಿಂದೆ ದೂರು ಕೂಡ ದಾಖಲಿಸಿದ್ದರು. ಪೊಲೀಸರು ಇಬ್ಬರನ್ನು ಕರೆಸಿ ಸಂದೇಶ್‌ ನಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರು ಎಂದು ದೀಕ್ಷಿತಾ ಹೇಳಿದರು.


    ಸಪ್ಟೆಂಬರ್‌ 20ಕ್ಕೆ ಸೌಮ್ಯಶ್ರೀಗೆ ಮದುವೆ ನಿಶ್ಚಯವಾಗಿದ್ದರಿಂದ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್‌ ಬರೋಡಾದ ಕೆಲಸ ಬಿಡಲು ನಿರ್ಧರಿಸಿದ್ದು, ಅದರಂತೆ ಅಗಸ್ಟ್‌ 30 ರಂದು ರಾಜೀನಾಮೆ ನೀಡಿ ಬ್ಯಾಂಕ್‌ ವತಿಯಿಂದ ವಿದಾಯ ಸಮಾರಂಭ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಸಂದೇಶ ಕುಲಾಲ್‌ ತನ್ನ ಬೈಕಿನಲ್ಲಿ ಬಂದು ಈ ಕೃತ್ಯವನ್ನು ಎಸಗಿದ್ದಾನೆ ಎಂದರು.

    ಸಂದೇಶ್‌ ಕುಲಾಲ್‌ ಗೆ ಕೆಟ್ಟ ಚಟಗಳಿತ್ತು ಎಂದು ಜನರು ಹೇಳುತ್ತಿದ್ದು ಘಟನೆಯ ದಿನ ಕೂಡ ಮಾದಕ ವಸ್ತು ಸೇವನೆ ಮಾಡಿರುವ ಸಂಶಯ ಇದೆ. ಆರಂಭದಿಂದ ಸಣ್ಣ ಸಣ್ಣ ವಿಷಯಗಳಿಗೆ ಕೂಡ ಸೌಮ್ಯಶ್ರೀಯಿಂದಲೇ ಹಣವನ್ನು ಖರ್ಚು ಮಾಡಿಸುತ್ತಿದ್ದ ಎಂದು ಆರೋಪಿಸಿದರು.

    ಘಟನೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ತಪ್ಪು ಮಾಹಿತಿಯನ್ನು ಹರಿಯ ಬಿಡುತ್ತಿದ್ದು ಇದರಿಂದ ನಮ್ಮ ಕುಟುಂಬ ತುಂಬಾ ನೊಂದಿದೆ. ಇನ್ನಾದರೂ ಸತ್ಯವನ್ನು ಅರಿತು ನಮ್ಮ ಕುಟುಂಬದ ಮಾನವನ್ನು ಹರಾಜು ಮಾಡುವ ಕೆಲಸ ನಿಲ್ಲಿಸುವಂತೆ ಮನವಿ ಮಾಡಿದರು.

    ಸುದ್ದಿಗೋಷ್ಠಿಯಲ್ಲಿ ಸೌಮ್ಯಶ್ರೀ ತಾಯಿ ಸುಶೀಲಾ, ಸಹೋದರ ಸುನೀಲ್‌, ಕುಟುಂಬದ ಸದಸ್ಯರಾದ ಯತೀಶ್‌, ಅಶೋಕ್‌ ಕುಮಾರ್‌ ಅಲೆವೂರು, ಸೋಮಶೇಖರ್‌ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

    Published

    on

    ಮಂಗಳೂರು/ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಈಗಾಗಲೇ ಮುಗಿದಿದ್ದು, ನಾಳೆ ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳ ಸೋಲು, ಗೆಲುವಿನ ಭವಿಷ್ಯ ನಾಳೆ ನಿರ್ಧಾರವಾಗಲಿದೆ.


    ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ನವೆಂಬರ್ 23ಕ್ಕೆ ನಿರ್ಧಾರವಾಗಲಿದ್ದು, ಈಗಾಗಲೇ ಎಕ್ಸಿಟ್ ಪೋಲ್ ಸಮೀಕ್ಷೆಯು ಬಂದಿದೆ. ಮೂರು ಕ್ಷೇತ್ರಗಳಲ್ಲಿ 2 ಕ್ಷೇತ್ರವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಒಂದರಲ್ಲಿ ಕಾಂಗ್ರೇಸ್ ಗೆಲುವು ಸಾಧಿಸಲಿದೆ ಎಂದು ಹೇಳಿದೆ.

    ಇದನ್ನೂ ಓದಿ:ಹಾಸ್ಟೆಲ್‌ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*ವು: ಮೂವರ ಬಂಧನ

    ಜಿದ್ದಾಜಿದ್ದಿನ ಕ್ಷೇತ್ರವಾದ ಚೆನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ. ಯೋಗೆಶ್ವರ್ ಸೋಲಲಿದ್ದು, ಬಿಜೆಪಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಕಾಣಲಿದ್ದಾರೆ ಎಂಬ ಲೆಕ್ಕಚಾರವಿದೆ. ಹೀಗಾಗಿ ಜೆಡಿಎಸ್ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ. ಆದರೆ ಕಾಂಗ್ರೇಸ್ ನ ಡಿಕೆ ಬ್ರದರ್ಸ್ ಗೆ ಚನ್ನಪಟ್ಟಣ ಕ್ಷೇತ್ರ ತಮ್ಮ ಪ್ರತಿಷ್ಥೆಯ ಕಣವಾಗಿದೆ.
    ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆ ಇದೆ. ಈ ಮೂಲಕ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಸ್ಪರ್ಧಿಸಿದ್ದ ಅನ್ನಪೂರ್ಣ ತುಕರಾಂ ಜಯ ಗಳಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳುತ್ತಿದೆ. ಈ ಮೂಲಕ ಕಾಂಗ್ರೆಸ್ ತನ್ನ ಭದ್ರ ಕೋಟೆಯನ್ನು ಉಳಿಸಿಕೊಂಡಂತಾಗುತ್ತದೆ.

    ಮುಸ್ಲಿಂ ಪ್ರಾಬಲ್ಯವಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಲಿಂಗಾಯುತರ ಮತಗಳೇ ನಿರ್ಣಾಯಕವಾಗಿದೆ. ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಬಿಜೆಪಿ ಆಭ್ಯರ್ಥಿಯಾಗಿ ಸ್ಪರ್ಧಿಸಿದರೆ, ಅವರ ವಿರುದ್ದ ಕಾಂಗ್ರೆಸ್ ನ ಯಾಸಿರ್ ಅಹಮಾದ್ ಖಾನ್ ಪಠಣ್ ಸ್ಪರ್ಧಿಸಿದ್ದಾರೆ. ಈ ಬಾರಿ ಶಿಗ್ಗಾಂವಿಯಲ್ಲಿ ಮತದಾರರು ಬಿಜೆಪಿಯತ್ತ ವಾಲಿದ್ದಾರೆ. ಆ ಮೂಲಕ ಭರತ್ ಬೊಮ್ಮಾಯಿ ಗೆಲ್ಲುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ.
    ಒಂದು ಕಡೆ ಕಾಂಗ್ರೆಸ್ ಗೆ ಈ ಉಪಚುನಾವಣೆಯ ಗೆಲುವು ಪ್ರತಿಷ್ಠೆಯ ಕಣವಾದರೆ, ಬಿಜೆಪಿ- ಜೆಡಿಎಸ್ ಗೆ ಮೂರು ಕ್ಷೇತ್ರವನ್ನು ಗೆಲ್ಲುವುದರ ಮೂಲಕ ಸರ್ಕಾರದ ವೈಫಲ್ಯವನ್ನು ತೋರಿಸುವ ಪ್ರಯತ್ನವಾಗಲಿದೆ. ಇದಕ್ಕೆಲ್ಲಾ ನಾಳೆಯ ಫಲಿತಾಂಶ ಉತ್ತರ ನೀಡಲಿದೆ.

    Continue Reading

    Baindooru

    WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ

    Published

    on

    ಉಡುಪಿ : ಚಾಲಕನ ನಿಯಂತ್ರಣ ತಪ್ಪಿ  ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿಯ  ಅಂಬಾಗಿಲು – ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.

    ಘಟನೆಯ ಸಂದರ್ಭ ಸ್ಥಳದಲ್ಲಿ ಯಾವುದೇ ವಾಹನ ಇರದೇ ಇದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿತ್ತು.

    ಇದನ್ನೂ ಓದಿ : ಶೀಘ್ರದಲ್ಲೇ ಉಬರ್‌ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?

    ಪೆರಂಪಳ್ಳಿಗೆ ತೆರಳುವ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    Continue Reading

    Baindooru

    ಶೀಘ್ರದಲ್ಲೇ ಉಬರ್‌ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?

    Published

    on

    ಬೆಂಗಳೂರು: ಇನ್ಮುಂದೆ ಟ್ರಾಫಿಕ್​​ ಸಮಸ್ಯೆಗೆ ಮುಕ್ತಿ! ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಉಬರ್‌ನಿಂದ ಹೊಸ ಯೋಜನೆ. ಹೌದು, ಬೆಂಗಳೂರು ಎಂದಾಕ್ಷಣ ತಟ್ಟನೆ ನೆನಪಾಗುವುದು ಟ್ರಾಫಿಕ್ ಜಾಮ್‌.. ಇದನ್ನು ಗಮನದಲ್ಲಿಟ್ಟುಕೊಂಡು ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಉಬರ್ ಹೊಸ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಶೀಘ್ರವೇ ಬೆಂಗಳೂರಿನಲ್ಲಿ ಉಬರ್ ಶಟಲ್ ಬಸ್ ಸೇವೆಯನ್ನು ಪರಿಚಯಿಸುತ್ತಿದೆ. ಈ ಬಗ್ಗೆ ಈಗಾಗಲೇ ಘೋಷಣೆ ಕೂಡ ಮಾಡಲಾಗಿದೆ. ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ. ದೆಹಲಿ, ಕೋಲ್ಕತ್ತಾ ಬಳಿಕ ಬೆಂಗಳೂರಿನಲ್ಲಿ ಈ ಉಬರ್ ಶಟಲ್ ಬಸ್ ಸೇವೆ ಜಾರಿಗೆ ಬರುತ್ತಿದೆ.

    ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಜಾಗತಿಕ ರೈಡ್-ಹೇಲಿಂಗ್ ಸಂಸ್ಥೆಯ ಭಾರತದಲ್ಲಿನ ಹೊಸ ಕೊಡುಗೆಯಾದ ಉಬರ್ ಷಟಲ್ ಅನ್ನು ಅವರು ಪರಿಶೀಲಿಸಿದರು.ಈಗಲೇ ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಉಬರ್ ಷಟಲ್ ಅನ್ನು ಪ್ರಾರಂಭಿಸಲಾಗಿದೆ, ಹೆಚ್ಚಿನ ಜನರು ತಮ್ಮ ಪ್ರಯಾಣಗಾಗಿ ದೊಡ್ಡ ವಾಹನಗಳಲ್ಲಿ ಕಾಯ್ದಿರಿಸಲು ಸಹಾಯ ಮಾಡುತ್ತದೆ. ಇದು ನಿಗದಿತ ಮಾರ್ಗಗಳಲ್ಲಿ ಚಲಿಸುತ್ತದೆ ಮತ್ತು ಮುಂಚಿತವಾಗಿ ಬುಕ್ ಮಾಡಿದ ಸೀಟುಗಳನ್ನು ನೀಡುತ್ತದೆ.

    ಉಬರ್ ಶಟಲ್ ಬಸ್ ಸೇವೆಯಿಂದ ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಮತ್ತು ಬೆಂಗಳೂರಿನಂತಹ ನಗರಗಳಿಗೆ ಇದು ಉತ್ತಮವಾಗಿದೆ. ಹೆಚ್ಚು ಪರಿಣಾಮಕಾರಿ ಸಾರಿಗೆ ವ್ಯವಸ್ಥೆಯನ್ನು ರಚಿಸಲು ತಂತ್ರಜ್ಞಾನ ಆಧಾರಿತ ಪರಿಹಾರಗಳ ಅಗತ್ಯವನ್ನು ಖರ್ಗೆ ಪ್ರತಿಪಾದಿಸಿದ್ದಾರೆ ಎಂದು ಉಬರ್ ಹೇಳಿಕೆಯಲ್ಲಿ ತಿಳಿಸಿದೆ.

    ಉಬರ್ ಇಂಡಿಯಾದ ಅಧ್ಯಕ್ಷ ಪ್ರಭಜೀತ್ ಸಿಂಗ್ ಅವರು ಈ ಹಿಂದೆ ಕಂಪನಿಯು “ಬೆಂಗಳೂರಿನಲ್ಲಿ ಬಸ್ ಸೇವೆಯನ್ನು ಪ್ರಾರಂಭಿಸಲು ಬಹು ಮಧ್ಯಸ್ಥಗಾರರೊಂದಿಗೆ ಸಕ್ರಿಯ ಮಾತುಕತೆ ನಡೆಸುತ್ತಿದೆ” ಎಂದು ಹೇಳಿದ್ದರು. “ಈ ರೀತಿಯ ಸೇವೆಯನ್ನು ಪ್ರಾರಂಭಿಸಲು ನಮಗೆ ನಿಯಂತ್ರಣದ ಅಗತ್ಯವಿದೆ ಮತ್ತು ಅದನ್ನು ಸ್ವೀಕರಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು. “ನಿಯಂತ್ರಕರು ನಮಗೆ ಅವಕಾಶ ಮಾಡಿಕೊಡುತ್ತಾರೆ ಎಂದು ಭಾವಿಸಿ ನಾವು ಉಬರ್ ಬಸ್ ಅನ್ನು ಬೆಂಗಳೂರಿಗೆ ತರಲು ಸಾಧ್ಯವಾಗುತ್ತದೆ ಎಂದು ಖಚಿತಪಡಿಸಿಕೊಳ್ಳುವುದು ನನ್ನ ಉತ್ಸಾಹದ ಯೋಜನೆಯಾಗಿದೆ, ಆದರೆ ಇದು ಗ್ರಾಹಕರು ಬಯಸಿದ ರೀತಿಯಲ್ಲಿ ನಾವು ತಿರುಗುತ್ತಿರುವ ಸ್ಥಳೀಕರಣದ ಪ್ರಯಾಣವನ್ನು ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಸಿಂಗ್ ಪ್ರಕಾರ, ಶಟಲ್ ಸೇವೆಯು ಹೆಬ್ಬಾಳದಿಂದ ಮತ್ತು ಹೊರವರ್ತುಲ ರಸ್ತೆಯಲ್ಲಿರುವ ಟೆಕ್ ಹಬ್‌ನವರೆಗೆ ಚಲಿಸಬಹುದು.

    Continue Reading

    LATEST NEWS

    Trending