Connect with us

    LATEST NEWS

    ಕನ್ನಡಿಗರನ್ನು ಕೆಣಕಿದ ಸುಗಂಧಾ ಶರ್ಮ ಕೆಲಸದಿಂದ ವಜಾ..!

    Published

    on

    ಬೆಂಗಳೂರು/ಮಂಗಳೂರು: ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾ ರೀಲ್ಸ್ ಮೂಲಕ ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ರೀಲ್ಸ್ ರಾಣಿ ಸುಗಂಧಾ ಶರ್ಮಾಗೆ ಇದೀಗ ಕನ್ನಡಿಗರ ತಾಕತ್ತು ಅರ್ಥವಾಗಿದೆ. ಆಕೆ ಮಾಡುವ ಕಂಪನಿಯೇ ಆಕೆಯ ನಡತೆಯನ್ನು ಗಮನಿಸಿ ಕೆಲಸದಿಂದ ಕಿತ್ತು ಹಾಕಿದೆ.

    ಕೆಲ ದಿನಗಳ ಹಿಂದೆ ರೀಲ್ಸ್ ಮಾಡಿದ್ದ ಸುಗಂಧಾ ಶರ್ಮಾ ಉತ್ತರ ಭಾರತೀಯರು ಬೆಂಗಳೂರನ್ನು ಬಿಟ್ಟು ಹೊರಟರೆ ಬೆಂಗಳೂರು ಖಾಲಿ ಖಾಲಿಯಾಗುತ್ತೆ ಎಂದು ಕನ್ನಡಿಗರನ್ನು ಕೆಣಕಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಕನ್ನಡಿಗರು ಶರ್ಮಾಗೆ ಬೆಂಗಳೂರನ್ನು ತೊರೆಯುವಂತೆ ಓಪನ್ ಆಗಿಯೇ ಚಾಲೆಂಜ್ ಹಾಕಿದ್ದರು.

    ಶರ್ಮಾ ರೀಲ್ಸ್‌ನಲ್ಲಿ ನೀವು ಹೊರಟು ಹೋಗಿ ಎನ್ನುತ್ತಿದ್ದೀರಾ. ನಿಜವಾಗಿಯು ನಾವೆಲ್ಲರೂ ಬೆಂಗಳೂರು ತೊರೆದರೆ ನಿಮ್ಮ ನಗರ ಖಾಲಿಯಾಗುತ್ತದೆ. ನಿಮ್ಮ ಪಿಜಿಗಳು ಖಾಲಿ ಆಗುತ್ತವೆ. ನಿಮಗೆ ಹಣ ಸಂಪಾದನೆಯಾಗುವುದಿಲ್ಲ. ಕೋರಮಂಗಲದ ಎಲ್ಲ ಕ್ಲಬ್‌ಗಳು ಖಾಲಿಯಾಗುತ್ತವೆ. ಪಂಜಾಬಿ ಸಂಗೀತಕ್ಕೆ ಕುಣಿಯುವ ಚೆಂದದ ಹುಡುಗಿಯರು ಕಾಣಿಸುವುದಿಲ್ಲ. ಯೋಚಿಸಿ ಮಾತನಾಡಿ. ಉತ್ತರ ಭಾರತೀಯರು ತೊರೆಯಬೇಕು ಎನ್ನುವ ನಿಮ್ಮ ಆಸೆ ನಿಜವಾದರೆ ಬೆಂಗಳೂರಿನ ಕಳೆಯೇ ಹೋಗಿಬಿಡುತ್ತದೆ ಎಂದು ರೀಲ್ಸ್‌ನಲ್ಲಿ ಹೇಳಿದ್ದರು.

    ಕೆಲವೇ ಗಂಟೆಗಳಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ಸುಗಂಧಾ ವಿರುದ್ಧ ಸೆಲೆಬ್ರಿಟಿಗಳು ಸೇರಿದಂತೆ ಅನೇಕರು ಕಿಡಿ ಕಾರಿದ್ದರು. ಭಾಷೆ ನೆಪದಲ್ಲಿ ಜನರ ನಡುವೆ ಕಂದಕ ಸೃಷ್ಟಿಸಲು ಯತ್ನಿಸುತ್ತಿರುವ ಈಕೆಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೂ ಟ್ಯಾಗ್ ಮಾಡಿದ್ದರು.

    ಹುಟ್ಟುಹಬ್ಬಕ್ಕೆ 2 ದಿನ ಕಡ್ಡಾಯ ರಜೆ ಘೋಷಣೆ ಮಾಡಿದ ಕಂಪೆನಿ..!

    ಈಕೆಯ ವೀಡಿಯೋ ನೋಡಿ ಕೆರಳಿದ್ದ ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ ಯುವತಿ ಕೆಲಸ ಮಾಡುವ ಕಂಪನಿಗೆ ಹೋಗಿ ವಿಚಾರಿಸಿದ್ದಾರೆ. ಈ ವೇಳೆ ಕಂಪನಿಯೇ ಕೆಲಸದಿಂದ ತೆಗೆದು ಹಾಕಿರೋದು ಬಯಲಿಗೆ ಬಂದಿದೆ. ಸದ್ಯ ಮತ್ತೊಂದು ಖಾಸಗಿ ಕಂಪನಿಯಲ್ಲಿ ಆಕೆ ಕೆಲಸ ಮಾಡುತ್ತಿದ್ದಾರೆ ಅನ್ನೋ ವಿಷ್ಯ ಗೊತ್ತಾಗಿದೆ. ಆ ಕಂಪನಿಗೂ ಭೇಟಿ ನೀಡಿ ಕೆಲಸದಿಂದ ತೆಗದುಹಾಕುವಂತೆ ಮನವಿ ಮಾಡಲಿದ್ದೇವೆ ಎಂದು ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಎಚ್ಚರಿಸಿದ್ದಾರೆ.

    FILM

    ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ “ಸ್ವಾತಂತ್ರ್ಯ ವೀರ್ ಸಾವರ್ಕರ್” ಸಿನೆಮಾ

    Published

    on

    ಮುಂಬೈ/ಮಂಗಳೂರು: ಬಾಲಿವುಡ್ ನಟ ರಣ್‌ದೀಪ್‌ ಹೂಡಾ ನಟಿಸಿ ನಿರ್ದೇಶಿಸಿರುವ ಸ್ವಾತಂತ್ರ್ಯ ವೀರ್‌ ಸಾವರ್ಕರ್‌ ಸಿನಿಮಾವೂ ಅಧಿಕೃತವಾಗಿ 2025ರ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದ್ದು, ಈ ಸಿನಿಮಾದಲ್ಲಿ ರಣ್‌ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ ನಟಿಸಿದ್ದಾರೆ.

    savarkar

    ಸಂದೀಪ್ ಸಿಂಗ್ ಅವರು ಈ ಸಿನಿಮಾದ ನಿರ್ಮಾಣ ಮಾಡಿದ್ದು, ಈ ಸಿನಿಮಾವೀಗ ಆಸ್ಕರ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ಖುಷಿಯ ವಿಚಾರವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್  ಮಾಡಿ ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

    2025ರ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ‘ಲಾಪತಾ ಲೇಡಿಸ್’ ಚಿತ್ರ

    ಕೆಲ ವಾರಗಳ ಹಿಂದಷ್ಟೇ ರಣ್‌ದೀಪ್ ಹೂಡಾ ಅವರಿಗೆ ಮುಂಬೈನಲ್ಲಿ ಪ್ರತಿಷ್ಠಿತ ಸ್ವಾತಂತ್ರ್ಯವೀರ ಸಾವರ್ಕರ್‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯ್ತು. ಸ್ವಾತಂತ್ರ್ಯ ಹೋರಾಟಗಾರ ಜೀವನಚರಿತ್ರೆಯನ್ನು ಅದ್ಭುತವಾಗಿ ತೆರೆಗೆ ತಂದಿದ್ದಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಭಾರತದ ಯುವ ಸಮೂಹದಲ್ಲಿ ಸಾಕಷ್ಟು ಪ್ರಭಾವ ಬೀರಿದ್ದ ವಿವಾದಿತ ಹಾಗೂ ಪ್ರಭಾವಶಾಲಿ ನಾಯಕ ವೀರ್ ಸಾವರ್ಕರ್ ಆಗಿದ್ದಾರೆ. ಮಾರ್ಚ್‌ 22 ರಂದು ಹಿಂದಿ ಹಾಗೂ ಮಾರಾಠಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾಗಿತ್ತು.

    Continue Reading

    bangalore

    ಆಟೋದಲ್ಲಿ ಆಫೀಸ್ ಚೇರ್; ಏನಿದು ವಿಚಿತ್ರ ?

    Published

    on

    ಮಂಗಳೂರು/ಬೆಂಗಳೂರು : ಬೆಂಗಳೂರಿನ ಆಟೋ ಚಾಲಕರೊಬ್ಬರು ತನ್ನಲ್ಲಿರುವ ಸ್ಮಾರ್ಟ್ವಾಚ್ನಲ್ಲಿ ಯುಪಿಐ ಕ್ಯೂಆರ್ ಕೋಡ್ ಬಳಸಿ ಗ್ರಾಹಕರಿಂದ ಆನ್ಲೈನ್ ಪೇಮೆಂಟ್ ಸ್ವೀಕರಿಸಿರುವ ಫೋಟೋ ಇತ್ತೀಚೆಗೆ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಮತ್ತೊಬ್ಬ ಆಟೋ ಚಾಲಕನ ಕ್ರಿಯೇಟಿವ್ ಐಡಿಯಾವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ತನ್ನ ಡ್ರೈವರ್ ಸೀಟನ್ನೇ ಆಫೀಸ್ ಚೇರ್ ಆಗಿ ಅಪ್ಗ್ರೇಡ್ ಮಾಡಿದ್ದ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.


    @shivaniiiiiii_ ಎಂಬ ಟ್ವಿಟರ್ ಖಾತೆಯಲ್ಲಿ ಆಟೋ ಚಾಲಕನ ಈ ಫೋಟೋ ಸೆಪ್ಟೆಂಬರ್ 23ರಂದು ಹಂಚಿಕೊಂಡಿದ್ದು, ಈ ಪೋಸ್ಟ್ ಒಂದೇ ದಿನದಲ್ಲಿ 76 ಸಾವಿರಕ್ಕೂ ಹೆಚ್ಚು ಜನರನ್ನು ತಲುಪಿದೆ. ಸದ್ಯ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.
    ಎಷ್ಟೇ ಟ್ರಾಫಿಕ್ ಇದ್ದರೂ ಕೂಡ ಆರಾಮಾಗಿ ಅಟೋದಲ್ಲಿ ಕುಳಿತುಕೊಳ್ಳಲು ಆಗುವಂತೆ ಆಫೀಸ್ ಚೇರ್ ಫಿಟ್ ಮಾಡಿರುವುದನ್ನು ಕಾಣಬಹುದು. ಸದ್ಯ ಈ ಆಟೋ ಚಾಲಕನ ಕ್ರಿಯೇಟಿವ್ ಐಡಿಯಾಗೆ ಜನರು ಪೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

    Continue Reading

    FILM

    ಲೈಂಗಿಕ ದೌರ್ಜನ್ಯ ಆರೋಪ; ಮಲಯಾಳಂ ನಟ, ರಾಜಕಾರಣಿ ಮುಕೇಶ್ ಬಂಧನ

    Published

    on

    ಕೇರಳ/ಮಂಗಳೂರು: ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ  ಕಾರಣವಾಗಿತ್ತು. ಇದೀಗ ಮತ್ತೊಂದು ಹಂತ ತಲುಪಿದ್ದು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ರಾಜಕಾರಣಿ ಮುಕೇಶ್  ಅವರನ್ನು ಬಂಧಿಸಲಾಗಿದೆ.
    ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಕೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ. ದೌರ್ಜನ್ಯ  ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ. ಬಂಧಿಸಿ ನಂತರ ಬಿಡುಗಡೆ ಮಾಡುವ ಮಾಹಿತಿಯೂ ಇದೆ. ಒಟ್ಟಿನಲ್ಲಿ ಮುಕೇಶ್ ಬಂಧನ ಇತರರಲ್ಲಿ ಆತಂಕ ಸೃಷ್ಟಿ ಮಾಡಿದೆ.
    ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಂದ ಕೂಡಲೇ ಚಲನಚಿತ್ರ ನೀತಿ ಸಮಿತಿ ರಾಜಿನಾಮೆ ಸಲ್ಲಿಸಿದ್ದಾರೆ. ಇನ್ನು ಮಲಯಾಳಂ ಚಿತ್ರರಂಗದ ನಟರುಗಳಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಇಡವೆಲ್ ಬಾಬು, ಚಂದ್ರಶೇಖರನ್ ಸೇರಿದಂತೆ ಹಲವರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.
    Continue Reading

    LATEST NEWS

    Trending