Connect with us

    LATEST NEWS

    ಶೀಘ್ರವೇ ಸಕ್ಕರೆ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ

    Published

    on

    ಬೆಂಗಳೂರು: ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವ ಕುರಿತು ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆಯ MSP ಪ್ರತಿ ಕೆಜಿಗೆ 31 ರೂ.ಗಳಲ್ಲಿ ಬದಲಾಗದೆ ಉಳಿದಿದೆ. ಇದು ಫೆಬ್ರವರಿ 2019 ರಲ್ಲಿ ಸ್ಥಾಪಿಸಲಾದ ದರವಾಗಿದೆ. ಆದಾಗ್ಯೂ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಆರ್ಥಿಕ ಒತ್ತಡಗಳಿಂದಾಗಿ ಉದ್ಯಮ ಸಂಸ್ಥೆಗಳು ಹೆಚ್ಚಳಕ್ಕೆ ಒತ್ತಾಯಿಸಿವೆ. ನಾವು ಹೆಚ್ಚಿಸಬೇಕೆ ಅಥವಾ ಬೇಡವೇ ಎಂಬುದನ್ನು ನಾವು ಶೀಘ್ರದಲ್ಲೇ ನಿರ್ಧರಿಸುತ್ತೇವೆ” ಎಂದು ತಿಳಿಸಿದ್ದಾರೆ.

    ಭಾರತೀಯ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಸಂಘ (ISMA) ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳ ರಾಷ್ಟ್ರೀಯ ಒಕ್ಕೂಟ (NFCSF) ಉತ್ಪಾದನಾ ವೆಚ್ಚವನ್ನು ಉತ್ತಮವಾಗಿ ಪ್ರತಿಬಿಂಬಿಸಲು ಮತ್ತು ಆರ್ಥಿಕ ಆರೋಗ್ಯವನ್ನು ಬೆಂಬಲಿಸಲು MSP ಯನ್ನು ಕೆಜಿಗೆ 39.14 ರೂ.ಗೆ ಅಥವಾ 42 ರೂ.ಗೆ. ಹೆಚ್ಚಿಸಲು ಒತ್ತಾಯಿಸುತ್ತಿವೆ.

    LATEST NEWS

    ಮಂಗಳೂರು: ಕ್ಯು ಆರ್ ಕೋಡ್ ಬದಲಿಸಿ ಪೆಟ್ರೋಲ್ ಬಂಕ್ ಸೂಪರ್‌ವೈಸರ್‌ನಿಂದ 58.85 ಲ. ರೂ ವಂಚನೆ

    Published

    on

    ಮಂಗಳೂರು: ಪೆಟ್ರೋಲ್ ಬಂಕ್‌ನ ಸೂಪರ್‌ವೈಸರ್ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯು ಆರ್ ಕೋಡ್ ಅನ್ನು ಹಾಕಿ ಬಂಕ್‌ಗೆ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.

    ಬಂಗ್ರಕೂಳೂರಿನ ರಿಲಯನ್ಸ್ ಔಟ್‌ಲೆಟ್ ಫ್ಯುಯೆಲ್ ಬಂಕ್‌ನಲ್ಲಿ ಸೂಪರ್‌ವೈಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ ಮೋಹನದಾಸ್, ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆಯ ಸಂಪೂರ್ಣ ಜವಬ್ದಾರಿ ನೋಡಿಕೊಂಡಿದ್ದ.

    ಈತ 2023ರ ಮಾ. 1ರಿಂದ ಜು. 31ರ ವರೆಗೆ ಪೆಟ್ರೋಲ್ ಬಂಕ್‌ನಲ್ಲಿ ಬಂಕ್‌ನ ಕ್ಯುಆರ್ ಕೋಡ್ ತೆಗೆದು ತನ್ನ ವೈಯಕ್ತಿಯ ಖಾತೆಯ ಕ್ಯುಆರ್ ಕೋಡ್‌ನ್ನು ಅಳವಡಿಸಿ ಗ್ರಾಹಕರಿಗೆ ಬಂಕ್‌ನದ್ದೇ ಕ್ಯುಆರ್ ಕೋಡ್ ಎಂದು ನಂಬಿಸಿ 58,85,333 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ರಿಲಯನ್ಸ್ ಔಟ್‌ಲೆಟ್ ಫ್ಯುಯೆಲ್ ಬಂಕ್‌ನ ಮ್ಯಾನೇಜರ್ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    Continue Reading

    LATEST NEWS

    ಜಾತ್ರೆಯಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ; 29 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    Published

    on

    ತಿರುವನಂತಪುರಂ: ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿದ ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ನಡೆದಿದೆ.

    ವಾದ್ಯಗಳ ಸದ್ದು, ಜನರ ಗದ್ದಲದ ನಡುವೆ ನಿಯಂತ್ರಣ ಕಳೆದುಕೊಂಡ ಪಾಕ್ಕಾತು ಶ್ರೀಕುಟ್ಟನ್ ಹೆಸರಿನ ಆನೆ, ವ್ಯಕ್ತಿಯೊಬ್ಬನನ್ನ ಎತ್ತಿ ಎಸೆದಿದೆ. ಈ ವೇಳೆ ಗುಂಪಿನಲ್ಲಿದ್ದ ಜನ ಎದ್ನೋ ಬಿದ್ನೋ ಅಂತ ಓಡಿದ್ದಾರೆ. ಕೆಲವರು ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

    ನಸುಕಿನ 2:30ರ ಸುಮಾರಿಗೆ ಮಾವುತ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರಿಂದ ಹೆಚ್ಚಿನ ಹಾನಿ ತಪ್ಪಿದೆ. ಘಟನೆಯಲ್ಲಿ ಸುಮಾರು 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

    ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ ನೂರಾರು ಮಂದಿ ನೆರೆದಿದ್ದರು. ಉತ್ಸವದಲ್ಲಿ ಕನಿಷ್ಠ ಐದು ಆನೆಗಳು ಅಲಂಕಾರಭೂಷಿತವಾಗಿ ಪಾಲ್ಗೊಂಡಿದ್ದವು. ಈ ವೇಳೆ ಹಠಾತ್ತನೆ ಜನರ ಕಡೆಗೆ ನುಗ್ಗಿದ್ದ ಪಾಕ್ಕಾತು ಶ್ರೀಕುಟ್ಟನ್ ಹೆಸರಿನ ಆನೆ ದಾಳಿ ನಡೆಸಿದೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಮೂಲಗಳ ಪ್ರಕಾರ, ಆನೆ ದಾಳಿಗೆ ಒಳಗಾದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಕೋಟಕ್ಕಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

    Continue Reading

    LATEST NEWS

    ಆಯ್ಕೆ ಸಮಿತಿಗೆ ಎಚ್ಚರಿಕೆ ನೀಡಿದ ಬಿಸಿಸಿಐ ಕಾರ್ಯದರ್ಶಿ

    Published

    on

    ಮಂಗಳೂರು/ಮುಂಬೈ : ಕಳೆದ 8 ಟೆಸ್ಟ್ ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಗೆದ್ದಿರುವ ಟೀಂ ಇಂಡಿಯಾದ ಸ್ಥಿತಿ ಚಿಂತಾಜನಕವಾಗಿದೆ.

    ನ್ಯೂಜಿಲೆಂಡ್ ವಿರುದ್ದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು ಬಿಟ್ಟುಕೊಟ್ಟಿತು. ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು 3-1 ಅಂತರದಿಂದ ಗೆದ್ದುಕೊಂಡಿತು. ಇದು ಬಿಸಿಸಿಐ ಅಸಮಾಧಾನಕ್ಕೆ ಕಾರಣವಾಗಿದ್ದು, ಆಯ್ಕೆ ಸಮಿತಿಗೆ ಸರಿಯಾದ ತಂಡವನ್ನು ಆಯ್ಕೆ ಮಾಡುವಂತೆ ಸೂಚನೆ ಕೊಟ್ಟಿದೆ. ಜಯ್ ಶಾ ಬದಲಿಗೆ ಬಿಸಿಸಿಐನಲ್ಲಿ ಕಾರ್ಯದರ್ಶಿ ಹುದ್ದೆ ಅಲಂಕರಿಸಿರುವ ದೇವಜಿತ್ ಸೈಕಿಯಾ, ಆಯ್ಕೆ ಸಮಿತಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ಶಾರುಖ್ ಪತ್ನಿ ಗೌರಿ ಮತಾಂತರ? 

    ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೀಕೆಗಳನ್ನು ಎದುರಿಸಿದ್ದರು. ಪರ್ತ್ ಟೆಸ್ಟ್ ನಲ್ಲಿ ಕೊಹ್ಲಿ ಶತಕ ಬಾರಿಸಿ ಮಿಂಚಿದರು. ಇದರ ಹೊರತಾಗಿ ಇಡೀ ಸರಣಿಯಲ್ಲಿ ಕೇವಲ 190 ರನ್ ಗಳಿಸಿದರು. ರೋಹಿತ್ ಶರ್ಮಾ ಸ್ಥಿತಿ ಅದಕ್ಕಿಂತ ಕೆಟ್ಟದಾಗಿತ್ತು. 5 ಇನ್ನಿಂಗ್ಸ್ ಗಳಲ್ಲಿ ಕೇವಲ 31 ರನ್ ಗಳಿಸಿದರು. ಸೆಪ್ಟೆಂಬರ್ ನಿಂದ ಆಡಿದ 8 ಟೆಸ್ಟ್ ಪಂದ್ಯಗಳಲ್ಲಿ ಅವರು ಕೇವಲ 164 ರನ್ ಗಳಿಸಿದ್ದಾರೆ.

    ಬಿಸಿಸಿಐನ ವಿಶೇಷ ಸಾಮಾನ್ಯ ಸಭೆ ಜನವರಿ 12 ರಂದು ನಡೆಯಲಿದೆ. ಕ್ರಿಕೆಟ್ ಜಗತ್ತಿಗೆ ತುಂಬಾ ತಪ್ಪು ಸಂದೇಶ ರವಾನೆ ಆಗುತ್ತಿದೆ. ಬಿಸಿಸಿಐ ಕ್ರಿಕೆಟ್ ಅನ್ನು ಎತ್ತರಕ್ಕೆ ಕೊಂಡೊಯ್ಯಬೇಕು. ಈಗ ಅದಕ್ಕೆ ಸಮಯ ಬಂದಿದೆ. ಆಟಗಾರರಿಗೆ ಬಿಸಿಸಿಐನ ಕಟ್ಟುನಿಟ್ಟಿನ ಸಂದೇಶ ನೀಡಬೇಕು. ಯಾವುದೇ ಆಟಗಾರ ಆಟಕ್ಕಿಂತ ಮೇಲ್ಪಟ್ಟವನಲ್ಲ. ಅದಕ್ಕೆ ಹೊಸ ತಂಡವನ್ನು ಆಯ್ಕೆ ಮಾಡುವ ಅವಶ್ಯಕತೆ ಇದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    Continue Reading

    LATEST NEWS

    Trending