Wednesday, May 18, 2022

ಪ್ಯಾರಾಲಿಂಪಿಕ್ಸ್‌ಗೆ ತೆರಳುವ ಕರ್ನಾಟಕ ಮೂಲದ ಜಿಲ್ಲಾಧಿಕಾರಿಗೆ ನೆರವು ನೀಡಿದ ಸಿಎಂ ಯೋಗಿ

ಟೋಕಿಯೊ: ಆಗಸ್ಟ್ 24 ರಿಂದ ಇಲ್ಲಿ ಪ್ಯಾರಾಲಿಂಪಿಕ್ಸ್ 2020 ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ಗೆ ಭಾರತದಿಂದ ತೆರಳುವ ತಂಡದಲ್ಲಿ ಒಬ್ಬ ಐಎಎಸ್ ಅಧಿಕಾರಿಯೂ ಸೇರಿದ್ದಾರೆ. ಆದರೆ, ಅವರು ಯಾವುದೇ ಪಂದ್ಯದ ಅಧಿಕಾರಿಯಾಗಿ ಅಲ್ಲಿಗೆ ಹೋಗುತ್ತಿಲ್ಲ. ಬ್ಯಾಡ್ಮಿಂಟನ್‌ ಗೆ ಅರ್ಹತೆ ಪಡೆದು, ಪದಕ ಸಾಧನೆಗಾಗಿ ತೆರಳುತ್ತಿದ್ದಾರೆ.

ಅವರು ನೋಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್, ಪ್ಯಾರಾ-ಬ್ಯಾಡ್ಮಿಂಟನ್ ಆಟಗಾರ ಸುಹಾಸ್ ಪ್ರಸ್ತುತ ವಿಶ್ವದ 3 ನೇ ಸ್ಥಾನದಲ್ಲಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಪ್ಯಾರಾಲಿಂಪಿಕ್ಸ್‌ಗೆ ಹೋಗಲು ನಿರ್ಧರಿಸಿದ್ದರು. ಅರ್ಹತೆ ಪಡೆಯಲು ಕಠಿಣವಾಗಿ ಶ್ರಮಿಸಿದ್ದರು. ಒಂದು ಕಡೆ ಜಿಲ್ಲಾಧಿಕಾರಿ ಜವಾಬ್ದಾರಿಗಳು, ಮತ್ತೊಂದೆಡೆ ಕ್ರೀಡಾಪಟುವಾಗಿ ಪದಕ ಗೆಲ್ಲುವ ಆಶಯ. ಕಳೆದ ಒಂದೂವರೆ ವರ್ಷದಿಂದ ಅವರು ಹಗಲು ಜಿಲ್ಲಾಧಿಕಾರಿಯ ಕರ್ತವ್ಯಗಳನ್ನು ನಿರ್ವಹಿಸಿದರೆ, ರಾತ್ರಿ ಹೊತ್ತು ಬ್ಯಾಡ್ಮಿಂಟನ್ ಅಭ್ಯಾಸ ಮಾಡುತ್ತಿದ್ದರು.

ಎಲ್ಲಾ ಕ್ರೀಡಾಪಟುಗಳಂತೆ, ಮುಂಬರುವ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಆಸೆಯೊಂದಿಗೆ ಸುಹಾಸ್ ರಾತ್ರಿಯಿಡೀ ಶ್ರಮಿಸುತ್ತಿದ್ದಾರೆ. ಸೋಲು, ಗೆಲುವು ನಡುವಣ ವ್ಯತ್ಯಾಸ ಅತ್ಯಂತ ತೆಳುವಾಗಿರುತ್ತದೆ. ಕೇವಲ ಒಂದು ಸೆಂಟಿಮೀಟರ್, ಮಿಲಿಮೀಟರ್‌ನಿಂದ ಅನೇಕ ಬಾರಿ ಸೋತಿದ್ದೇನೆ ಎಂದು ಸುಹಾಸ್ ಹೇಳುತ್ತಾರೆ.


2007 ರ ಬ್ಯಾಚ್ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಪ್ರಸ್ತುತ ಕೋವಿಡ್ ನಿಯಂತ್ರಣ ಸೇವೆಗಳಲ್ಲಿ ಬಿಡುವಿಲ್ಲದೆ ನಿರತರಾಗಿದ್ದಾರೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ದೆಹಲಿಯ ಗಡಿಯಲ್ಲಿರುವ ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಕರ್ನಾಟಕದ ಹಾಸನ ಜಿಲ್ಲೆಯವರಾದ ಯತಿರಾಜ್ ಬಾಲ್ಯದಿಂದಲೂ ಕ್ರೀಡೆಯ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. 2016 ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ, BWF ಟರ್ಕಿಶ್ ಓಪನ್ ಚಾಂಪಿಯನ್‌ಶಿಪ್ 2017ರಲ್ಲಿ ಪುರುಷರ ಸಿಂಗಲ್ಸ್ ಪುರುಷರ ಡಬಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಉತ್ತರ ಪ್ರದೇಶ ಅವರಿಗೆ ಯಶ್ ಭಾರತಿ ಪ್ರಶಸ್ತಿ ನೀಡಿ ಗೌರವಿಸಿದೆ.

LEAVE A REPLY

Please enter your comment!
Please enter your name here

Hot Topics

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ....

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...

MRPL ಉದ್ಯೋಗಿ ನಾಪತ್ತೆ: ಪ್ರಕರಣ ದಾಖಲು

ಸುರತ್ಕಲ್: ಎಂಆರ್‌ಪಿಎಲ್‌ನಲ್ಲಿ ಎಂಜಿನಿಯರ್ ಆಗಿದ್ದ ಸಕಲೇಶಪುರ ಮೂಲದ ಕಾಟಿಪಳ್ಳ ಶಾರದಾ ನಗರ ನಿವಾಸಿ ರಾಘವೇಂದ್ರ ಕೆ.ಆರ್ (52) ಎಂಬವರು ಮೇ 16ರಿಂದ ನಾಪತ್ತೆಯಾಗಿದ್ದಾರೆ.'ಫ್ಲೀಸ್ ತನ್ನನ್‌ನು ಹುಡುಕಬೇಡಿ' ಎಂದು ಚೀಟಿ ಬರೆದಿಟ್ಟು ಹೋಗಿದ್ದಾರೆ.ಹೋಗುವಾಗ ಬಟ್ಟೆ,...