Monday, May 23, 2022

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ-ಇಂದು ಶವ ಪತ್ತೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ.

ಕಾರಾಜೆ ನಿವಾಸಿ ಜಲೀಲ್ ( 55) ಮೃತಪಟ್ಟ ವ್ಯಕ್ತಿ.

ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್ ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು.

ಸ್ಥಳದಲ್ಲಿ ದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಗುರುತು ಪತ್ತೆಯಾಗಿತ್ತು. ಆದರೆ ತಡ ರಾತ್ರಿವರೆಗೂ ಹುಡುಕಿದಾಗ ವ್ಯಕ್ತಿಯ ಪತ್ತೆಯಾಗಿರಲಿಲ್ಲ.
ಇಂದು ಮುಂಜಾನೆಯಿಂದ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ಅವರು ನದಿಯಲ್ಲಿ ಈಜಾಡಿ ಹುಡುಕಿದಾಗ ನದಿಯಲ್ಲಿ ಶವ ಪತ್ತೆಯಾಗಿದೆ.

ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here

Hot Topics

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...