Thursday, December 2, 2021

ಕಾರ್ಕಳ: ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಿನ್ನೆ ನಡೆದಿದೆ.
ಮೃತ ವ್ಯಕ್ತಿಯನ್ನು ನಂದಳಿಕೆ ಗ್ರಾಮದ ಮಂಜುನಾಥ ದೇವಾಡಿಗ (43) ಎಂದು ಗುರುತಿಸಲಾಗಿದೆ.


ವಾದ್ಯಗಾರಿಕೆ ಕೆಲಸ ಮಾಡುತ್ತಿದ್ದು‌ ವರ್ಷದ ಹಿಂದೆ ನಂದಳಿಕೆಯಲ್ಲಿ ಮನೆ ಮಾಡಿ ವಾಸವಾಗಿದ್ದರು. ಮನೆ ಮಾಡಿದ ಸಾಲ ಬಾಕಿ ಇರುವುದಾಗಿ ಈ ಹಿಂದೆ ತಿಳಿಸಿದ್ದು ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು.
ನ. 18 ರ ಮಧ್ಯಾಹ್ನ 2 ಗಂಟೆಗೆ ಮಿಯಾರಿನ ಮನೆಗೆ ಬಂದು ಬಜಗೋಳಿಗೆ ಹೋಗುವುದಾಗಿ ತಾಯಿಗೆ ತಿಳಿಸಿ ಹೋದವರು ವಾಪಾಸು ಮನೆಗೂ ಬಾರದೇ ನಂದಳಿಕೆಯ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಹುಡುಕಾಡಿದಾಗ ಮಿಯಾರು ಹೊಳೆಯ ಸಮೀಪ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಮಂಜುನಾಥರ ತಮ್ಮ ಕಾರ್ಕಳ ನಗರ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...