Connect with us

    DAKSHINA KANNADA

    Sullia: ಕಾಡು ಪ್ರಾಣಿ ಬೇಟೆ ವಿರುದ್ಧ ಅರಣ್ಯಾಧಿಕಾರಿಗಳ ಕಾರ್ಯಚರಣೆ – ಮಾಂಸ ವಶ..!

    Published

    on

    ತಂಡವೊಂದು ಕಾಡು ಪ್ರಾಣಿಗಳನ್ನು ಬೇಟೆಯಾಡಿ ಖಾದ್ಯ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬೇಯಿಸಿದ ಮಾಂಸ ವಶಕ್ಕೆ ಪಡೆದ ಘಟನೆ ಸುಳ್ಯ ಗಡಿ ಭಾಗದಲ್ಲಿ ನಡೆದಿದೆ.

    ಸುಳ್ಯ : ತಂಡವೊಂದು ಕಾಡು ಪ್ರಾಣಿಗಳನ್ನು ಬೇಟೆಯಾಡಿ ಖಾದ್ಯ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬೇಯಿಸಿದ ಮಾಂಸ ವಶಕ್ಕೆ ಪಡೆದ ಘಟನೆ ಸುಳ್ಯ ಗಡಿ ಭಾಗದಲ್ಲಿ ನಡೆದಿದೆ.

    ಕೊಡಗು ಸಂಪಾಜೆ ವಲಯದ ದಬ್ಬಡ್ಕದ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆ ಮಾಡಿದ್ದರು.

    ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಮೂವರು ಆರೋಪಿಗಳ ಮನೆಗಳಿಗೆ ದಾಳಿ ಮಾಡಿ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಂಡಿದ್ದಾರೆ.

    ಅರಣ್ಯಾಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಆರೋಪಿಗಳು ತಲೆಮರೆಸಿದ್ದಾರೆ.

    ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಟಿ ಪೂವಯ್ಯ ಇವರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಮಧು ಸೂದನ್ ನೇತೃತ್ವದಲ್ಲಿ, ಸಿಬ್ಬಂದಿ ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮಹಮ್ಮದ್, ಗಸ್ತು ಅರಣ್ಯ ಪಾಲಕ ಚಂದ್ರಪ್ಪ ಬಣಕಾರ್, ಕಾರ್ತಿಕ್ ಡಿ. ಹಾಗೂ ಸಿಬ್ಬಂದಿ ಮನೋಜ್, ದುರ್ಗಾ ಪ್ರಸಾದ್, ಗಗನ್, ಶರತ್, ಶಂಕರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Click to comment

    Leave a Reply

    Your email address will not be published. Required fields are marked *

    BANTWAL

    ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

    Published

    on

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

    ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.

    ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

    ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    Continue Reading

    DAKSHINA KANNADA

    ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

    Published

    on

    ಮಂಗಳೂರು : ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್ ವಾಲ ಮತ್ತು ಹಿಂದಿ ಬಿಗ್ ಬಾಸ್ 18ರ ಸ್ಪರ್ಧಿ ಸುನಿಲ್ ಪಾಟೀಲ್ ಅವರು ಮಂಗಳೂರಿಗೆ ಆಗಮಿಸುತ್ತಿದ್ದಾರೆ.

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜ. 18 ರಿಂದ 22 ರವರೆಗೆ ಐದು ದಿನಗಳ ಕಾಲ ನಗರದಲ್ಲಿ “ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್” ನಡೆಯಲಿದೆ. ಈ ಕಾರ್ಯಕ್ರಮದ ಮೊದಲ ಆಕರ್ಷಣೆಯಾಗಿ ಡಾಲಿ ಚಾಯ್ ವಾಲ ಅವರು ಭಾಗವಹಿಸಲಿದ್ದಾರೆ.

    ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ: ದಾಖಲೆಯ ಪ್ರಯಾಣಿಕರ ನಿರ್ವಹಣೆ

    ತನ್ನ ಬರುವಿಕೆಯ ಕುರಿತು ಡಾಲಿ ಚಾಯ್ ವಾಲ ಅವರು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿದ್ದು, ಜ. 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. “ಮಜಾ ಕರೇಂಗೆ..ಚಾಯ್ ಪಿಯೇಂಗೆ” ಎಂದು ಪೋಸ್ಟ್ ಮಾಡಿದ್ದಾರೆ.

    ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಡಾಲಿ ಅವರ ಚಹಾ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್ ಹಂಚಿಕೊಂಡಿದ್ದರು. ಇದಾದ ಬಳಿಕ ಡಾಲಿ ಚಯ್ ವಾಲರವರ ಖ್ಯಾತಿ ದೇಶದಾದ್ಯಂತ ಇನ್ನಷ್ಟು ಜಾಸ್ತಿಯಾಯಿತು.

    Continue Reading

    DAKSHINA KANNADA

    ತುಳು ಸಿನೆಮಾಗೆ ‘ಜೈ’ ಅಂದ ಸುನೀಲ್ ಶೆಟ್ಟಿ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

    Published

    on

    ಮಂಗಳೂರು : ರೂಪೇಶ್ ಶೆಟ್ಟಿ ನಿರ್ದೇಶನದ ‘ಜೈ’ ಎಂಬ ತುಳು ಸಿನೆಮಾದಲ್ಲಿ ನಟಿಸಲು ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರು ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಸುನಿಲ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ರೂಪೇಶ್ ಶೆಟ್ಟಿ ಅವರು ಹಾರ್ದಿಕವಾಗಿ ಸ್ವಾಗತಿಸಿದರು.

    ‘ಜೈ’ ಸಿನೆಮಾ ಬಿಗ್ ಬಜೆಟ್ ಸಿನೆಮಾ ಆಗಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಚಿತ್ರೀಕರಣ ಮುಗಿಸಲಾಗಿದೆ. ಜಿಲ್ಲೆಯ ಹಲವು ಖ್ಯಾತ ನಟರು ಸಿನೆಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಜನವರಿ 15 ರಿಂದ ನಡೆಯಲಿರುವ ಸಿನೆಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ಸುನಿಲ್‌ ಶೆಟ್ಟಿ ಅವರು ಭಾಗಿಯಾಗಲಿದ್ದಾರೆ. ಗಿರಿಗಿಟ್ , ಗಮ್ಜಾಲ್, ಸರ್ಕಸ್ ಚಿತ್ರದ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರ ಬಿಗ್ ಬಜೆಟ್ ಸಿನೆಮಾ ‘ಜೈ’. ಆರ್‌ ಎಸ್ ಸಿನೆಮಾಸ್ ಶೂಲಿನ್ ಫಿಲಮ್ಸ್ , ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಸಿನೆಮಾ ನಿರ್ಮಾಣವಾಗುತ್ತಿದೆ.

    ರೂಪೇಶ್ ಶೆಟ್ಟಿ ಸಿನೆಮಾಗೆ ಅ್ಯಕ್ಷನ್ ಕಟ್‌ ಹೇಳಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮೆರಾದಲ್ಲಿ ವಿನುತ್ ಕೆ. ಸಂಗೀತ ಲೋಯ್ ವೆಲೆಂಟಿನ್ ಸಲ್ಡಾನ್ಹಾ ಹಾಗೂ ಸಂಕಲನ ರಾಹುಲ್ ವಸಿಷ್ಠ ಅವರದ್ದಾಗಿದೆ. ಅನಿಲ್ ಶೆಟ್ಟಿ , ಸುಧಾಕರ ಶೆಟ್ಟಿ ಮುಗ್ರೋಡಿ ಮಂಜುನಾಥ ಅತ್ತಾವರ ಅವರು ಚಿತ್ರ ನಿರ್ಮಾಪಕರಾಗಿದ್ದಾರೆ. ಸುನಿಲ್ ಶೆಟ್ಟಿ ಮೊದಲ ಬಾರಿಗೆ ತುಳು ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತುಳು ನಮ್ಮ ತುಳುನಾಡಿನ ಭಾಷೆ. ತುಳು ಭಾಷೆಯಲ್ಲಿ ಚಿತ್ರ ನಿರ್ಮಾಣ ಮಾಡ ಬೇಕೆಂಬುದು ಬಹು ಕಾಲದ ಕನಸು. ಉತ್ತಮ ವಿಷಯದ ತುಳು ಚಿತ್ರ ಬಂದರೆ ನಟಿಸ ಬೇಕೆಂದು 2- 3 ವರ್ಷಗಳ ಹಿಂದೆ ಇಂಗಿತ ವ್ಯಕ್ತ ಪಡಿಸಿದ್ದೆ. ಇದೀಗ ಒಂದು ಅವಕಾಶ ಸಿಕ್ಕಿದೆ. ಇದು ನಾನು ಅಭಿನಯಿಸುವ ಮೊದಲ ತುಳು ಚಿತ್ರ ಎಂದರು. ತುಳುವಿನಲ್ಲಿ ಇತ್ತೀಚೆಗೆ ಉತ್ತಮ ಸಿನೆಮಾಗಳು ಬರುತ್ತಿವೆ. ಇತರ ಎಲ್ಲಾ ಭಾಷೆಗಳ ಸಿನೆಮಾಗಳಿಗೆ ಸಮಾನವಾದ ಚಿತ್ರಗಳು ತುಳುವಿನಲ್ಲಿ ಬರುತ್ತಿವೆ. ಇದು ತುಂಬಾ ಖುಷಿಯ ವಿಚಾರ ಎಂದರು.

    Continue Reading

    LATEST NEWS

    Trending