Monday, January 24, 2022

ಸುಳ್ಯ ಆಂಬ್ಯುಲೆನ್ಸ್ ಗೆ ಅಂಟಿದ ಧರ್ಮದ ಲೇಪನ..!ದೂರುದಾರರು ಸತ್ಯಪ್ರಮಾಣಕ್ಕೆ ಬರಲು ಲತೀಶ್ ಅಹ್ವಾನ :

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಂಬ್ಯುಲೆನ್ಸ್‌ ಗೆ ಇದೀಗ ಧರ್ಮದ ಲೇಪ ಅಂಟಿಕೊಂಡಿದ್ದು, ಪ್ರಕರಣ ಇದೀಗ ಪೊಲೀಸ್ ಠಾಣೆಯ ಮೆಟ್ಟಲೇರಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಿ, ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಲತೀಶ್ ಗುಂಡ್ಯ ಎಂಬವರ ಮೇಲೆ ಸುಳ್ಯ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಅಂಬೇಡ್ಕರ್ ರಕ್ಷಣಾ ವೇದಿಕೆಯ ಅಧ್ಯಕ್ಷ ಸುಂದರ ಪಾಟಾಜೆ ರವರು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪುತ್ತೂರು ವಿಭಾಗದ ಡಿ.ವೈ.ಎಸ್ಪಿ ಠಾಣೆಗೆ ದೂರು ನೀಡಿದ್ದಾರೆ.

ಖಾಸಗಿ ಆಂಬುಲೆನ್ಸ್ ಚಾಲಕ ಸುಳ್ಯದ ಶಾಂತಿನಗರ ನಿವಾಸಿ ಅಭಿಲಾಷ್ ಎಂಬುವವರ ವಿರುದ್ಧ ಸುಳ್ಳು ಆರೋಪ ಮಾಡಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ವಾಟ್ಸ್ ಅಪ್ ಗಳಲ್ಲಿ ಹರಿಬಿಟ್ಟಿರು ಆರೋಪ ಮಾಡಲಾಗಿದೆ.

ಅಭಿಲಾಷ್ ಚಲಾಯಿಸುವ ಆಂಬುಲೆನ್ಸ್ ವಾಹನ ಮುಸ್ಲಿಂ ಸಮುದಾಯದ ವ್ಯಕ್ತಿಯದ್ದಾಗಿದ್ದು, ಮುಸ್ಲಿಂ ಸಮುದಾಯದವರ ಆಂಬುಲೆನ್ಸ್ ವಾಹನವನ್ನು ಚಲಾಯಿಸಬಾರದು ಮತ್ತು ಅದರಲ್ಲಿ ಹಿಂದೂ ಸಮುದಾಯದವರ ಮೃತಶರೀರವನ್ನು ಕೊಂಡೊಯ್ಯಬಾರದು,

ಆ ರೀತಿಯಾಗಿ ಮಾಡಿದರೆ ನಿನ್ನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿರುವುದಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಎಂಬವರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ..

ದೂರುದಾರರು ಸತ್ಯಪ್ರಮಾಣಕ್ಕೆ ಬರಲು ಲತೀಶ್ ಅಹ್ವಾನ :

ಅ್ಯಂಬುಲೆನ್ಸ್ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಿ, ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಲತೀಶ್ ಗುಂಡ್ಯ ಎಂಬವರ ಮೇಲೆ ಸುಳ್ಯ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ಲತೀಶ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದು ಸತ್ಯಕ್ಕೆ ದೂರವಾದ ವಿಚಾರ ಅಂಬುಲೆನ್ಸ್ ವಿಚಾರವಾಗಿ ಕೋಮು ಭಾವನೆ ಕೆರಳಿಸುವ ಯಾವುದೇ ವಿಚಾರದಲ್ಲಿ ತಾನು ಭಾಗಿಯಾಗಿಲ್ಲ.

ತನ್ನ ವಿರುದ್ದ  ದೂರುದಾರರು ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುವು. ಈ ಬಗ್ಗೆ ತಾನು ಸುಳ್ಯ ಗಾಂಧಿನಗರದ ಕಾರ್ಣಿಕದ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಬಂದಿದ್ದು ನನ್ನ ಬಗ್ಗೆ ದೂರು ನೀಡಿದವರು ಆ ಕ್ಷೇತ್ರಕ್ಕೆ ಬಂದು ಠಾಣೆಯಲ್ಲಿ ಕೊಟ್ಟ ದೂರಿಗೆ ಬದ್ದರಾಗಿದ್ದೇವೆ ಎಂದು ಸತ್ಯ ಪ್ರಮಾಣ ಮಾಡಬೇಕೆಂದು ಅಹ್ವಾನಿಸಿದ್ದಾರೆ.

Hot Topics

ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ: ಸಾಲದಿಂದ ಬೇಸತ್ತು ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶನಿವಾರದಂದು ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್​ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ.ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಶನಿವಾರದಂದು ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...