Connect with us

    LATEST NEWS

    ಸುಳ್ಯ: ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟು ಪರಾರಿಯಾದ ಪಾಪಿ ಗಂಡ…!

    Published

    on

    ಸುಳ್ಯ: ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಸುಳ್ಯದ ಬೀರಮಂಗಲದಲ್ಲಿ ನಡೆದಿದೆ.

    ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟು ಪತಿಯು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.


    ಸುಳ್ಯದ ಬೀರಮಂಗಲದ ಮನೆಯೊಂದರಲ್ಲಿ ಇಮ್ರಾನ್ ಎನ್ನುವಾತ ಕಳೆದ ಆರು ತಿಂಗಳಿನ ಇಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.

    ಸುಳ್ಯದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಊರಿಗೆ ತೆರಳುವುದಾಗಿ ಹೋಟೆಲ್‌ನಲ್ಲಿ ತಿಳಿಸಿದ್ದ. ಆದರೆ ಈತ ಹೋಗುವಾಗ ಪತ್ನಿಯನ್ನು ಒಟ್ಟಿಗೆ ಕರೆದುಕೊಂಡು ಹೋಗಿರಲಿಲ್ಲ. ಇದರಿಂದ ಸ್ಥಳೀಯರಲ್ಲಿ ಸಂಶಯ ವ್ಯಕ್ತವಾಗಿದೆ.

    ಆತ ತೆರಳಿ ಎರಡು ದಿನವಾದರೂ ಮನೆಯಿಂದ ಯಾರೂ ಹೊರಗಡೆ ಬಾರದೆ ಇದ್ದ ಕಾರಣ ಹೊಟೇಲ್ ಮಾಲೀಕರ ಮಾಹಿತಿಯ ಮೇರೆಗೆ ನಿನ್ನೆ ಸಂಜೆ ಪೊಲೀಸರು ಬಾಗಿಲು ಒಡೆದು ಪರಿಶೀಲನೆ ನಡೆಸಿದಾಗ ಮನೆಯ ಒಳಗೆ ಗೋಣಿ ಚೀಲದಲ್ಲಿ ಮೃತದೇಹ ಪತ್ತೆಯಾಗಿದೆ.

    ಕೆಲ ದಿನಗಳ ಹಿಂದೆ ಆ ಪರಿಸರದಲ್ಲಿ ಕಿರುಚಿದ ಶಬ್ದ ಕೇಳಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
    ಇಮ್ರಾನ್ ಪತ್ನಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ಮೃತದೇಹ ತುಂಬಿಸಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.

    ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ‌ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

    LATEST NEWS

    ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹ*ತ್ಯೆಗೆ ಯತ್ನಿಸಿದ ಮಹಿಳೆ

    Published

    on

    ಮಂಗಳೂರು/ಶ್ರೀಕಾಕುಳಂ : ಮಹಿಳೆಯೊಬ್ಬರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಉಪಮುಖ್ಯಮಂತ್ರಿ ಪವನ್​ ಕಲ್ಯಾಣ್ ಅವರ ಕ್ಯಾಂಪ್ ಕಚೇರಿ ಬಳಿ ಮಹಿಳೆಯೊಬ್ಬರು ಜೀವಾಂತ್ಯಗೊಳಿಸಲು ನಿರ್ಧರಿಸಿದ್ದರು. ಈ ಸಂದರ್ಭ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ರಕ್ಷಿಸಿದ್ದಾರೆ.


    ಶ್ರೀಕಾಕುಳಂ ಜಿಲ್ಲೆಯ ನಿವಾಸಿ, ದುರ್ಗಾದೇವಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಆಕೆ ಕ್ಯಾಂಪ್ ಆಫೀಸ್ ಬಳಿಯಿರುವ ಕಟ್ಟಡವನ್ನು ಏರಿ ಅಲ್ಲಿಂದ ಹಾರಿ ಪ್ರಾ*ಣ ಕಳೆದುಕೊಳ್ಳಲು ಯತ್ನಿಸಿದ್ದಳು.

    ಕಾರಣ ಏನು ?
    ಶ್ರೀಕಾಕುಳಂನಲ್ಲಿ ವೈಎಸ್‌ಆರ್‌ಸಿಪಿ ಪಕ್ಷದ ನಾಯಕರ ಒತ್ತುವರಿಯಿಂದ ತನ್ನ ಭೂಮಿಯನ್ನು ಕಳೆದುಕೊಂಡಿದ್ದೇನೆ ಎಂದು ಅವರು ಮಹಿಳೆ ಆರೋಪಿಸಿದ್ದಾರೆ. ಪದೇ ಪದೇ ಮನವಿ ಮಾಡಿದರೂ ಪಕ್ಷದ ಮುಖಂಡರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
    ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಭೂಕಬಳಿಕೆ ಪ್ರಕರಣಗಳ ಆರೋಪಗಳ ಕುರಿತ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಇದೀಗ ಈ ಘಟನೆ ನಡೆದಿದೆ.

    ಇದನ್ನೂ ಓದಿ : ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ

    ಇತ್ತೀಚೆಗೆ, ಗುಂಟೂರು ಜಿಲ್ಲೆಯಲ್ಲಿ ವೈಎಸ್‌ಆರ್‌ಸಿಪಿ ಪಕ್ಷದ ಕಚೇರಿಯನ್ನು ಕೆಡವಲಾಗಿತ್ತು. ವಿಶಾಖಪಟ್ಟಣಂನಲ್ಲಿ ಇನ್ನೂ ಎರಡು ಪಕ್ಷದ ಕಚೇರಿಗಳಿಗೆ ನೋಟಿಸ್ ನೀಡಲಾಗಿತ್ತು.

    Continue Reading

    LATEST NEWS

    ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಮರು ಆಯ್ಕೆ

    Published

    on

    ನವದೆಹಲಿ: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದು ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಮರು ಆಯ್ಕೆಯಾಗಿದ್ದಾರೆ.

    ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ವಿರೋಧ ಪಕ್ಷಗಳಿಗೆ ಬಿಟ್ಟು ಕೊಡಲು ಆಡಳಿತ ಪಕ್ಷ ಹಿಂದೇಟು ಹಾಕಿದ ಕಾರಣ ವಿರೋಧ ಪಕ್ಷ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್‌ ನಾಯಕ ಕೆ. ಸುರೇಶ್ ಅವರನ್ನು ಕಣಕ್ಕೆ ಇಳಿಸಿತ್ತು. ಸ್ಪೀಕರ್ ಗೆಲುವಿಗೆ ಬೇಕಾದ ಸಂಖ್ಯಾ ಬಲ ಇದ್ದರೂ ಕೂಡಾ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿ ವಿರೋಧ ಪಕ್ಷ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು.

    ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಧನದಲ್ಲಿ ಸ್ಪೀಕರ್ ಹುದ್ದೆಗಾಗಿ ಓಂ ಬಿರ್ಲಾ ಅವರನ್ನು ಸೂಚಿಸಿದ್ದರು ಹಾಗೂ . ಹಂಗಾಮಿ ಸ್ಪೀಕರ್ ಭರ್ತೃಹರಿ ಅವರು ಚುನಾವಣಾ ಪ್ರಕ್ರಿಯೆ ನಡೆಸಿ ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಘೋಷಣೆ ಮಾಡಿದ್ದಾರೆ. ನೂತನ ಸ್ಪೀಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ವಿರೋಧಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜ್‌ ವಿಶೇಷ ಗೌರವ ಸಲ್ಲಿಸಿದ್ದಾರೆ.

    Continue Reading

    DAKSHINA KANNADA

    ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ

    Published

    on

    ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ.

    ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

    ಎಲ್ಲೆಲ್ಲಿ ಆರೆಂಜ್ ಅಲರ್ಟ್?

    ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ

    ಎಲ್ಲೆಲ್ಲಿ ಯೆಲ್ಲೋ ಅಲರ್ಟ್?

    ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ

    Continue Reading

    LATEST NEWS

    Trending