Connect with us

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

DAKSHINA KANNADA

ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ

Published

on

ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.

3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.


ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.


ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Continue Reading

DAKSHINA KANNADA

“ಗಬ್ಬರ್ ಸಿಂಗ್” ಮೇ 3 ರಂದು ತೆರೆಗೆ ; ಇಂದು ವಿಡಿಯೋ ಸಾಂಗ್ ರಿಲೀಸ್..!

Published

on

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ‘ಗಬ್ಬರ್ ಸಿಂಗ್’ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಇದೀಗ ಈ ಸಿನೆಮಾದ ವಿಡಿಯೋ ಸಾಂಗ್‌ ರಿಲೀಸ್ ಆಗಿದ್ದು, ಜಸ್ಟ್‌ ರೋಲ್‌ ಫಿಲಂಸ್‌ನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸೂಜಿ ಕಣ್‌ದ ಮೋನಾಲಿಸಾ ಎಂಬ ಉತ್ತಮ ಸಾಹಿತ್ಯವನ್ನು ಹೊಂದಿರುವ ಹಾಡನ್ನು ರಿಲೀಸ್ ಮಾಡಲಾಗಿದೆ. ಹಾಡಿಗೆ ಉಮೇಶ್ ಮಿಜಾರ್ ಸಾಹಿತ್ಯ ಬರೆದಿದ್ದರೆ, ಬೋಜರಾಜ ವಾಮಂಜೂರು, ವಿಸ್ಮಯ ವಿನಾಯಕ ಹಾಗೂ ಸ್ವತಹ ಉಮೇಶ್ ಮಿಜಾರ್ ಹಾಡುಗಳನ್ನು ಹಾಡಿದ್ದಾರೆ.


‘ಗಬ್ಬರ್ ಸಿಂಗ್’ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

‘ಗಬ್ಬರ್ ಸಿಂಗ್’ ಸಿನಿಮಾ ಮೇ 3 ರಂದು ಕರಾವಳಿ ಜಿ,ಲ್ಲೆಯಾದ್ಯಂತ ತೆರೆ ಕಾಣಲಿದೆ.  ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದ್ದು,  ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ. ಸಿನಿಮಾ ಮೇ 3 ರಂದು ತೆರೆ ಕಾಣಲಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್.

 

 

Continue Reading

LATEST NEWS

Trending