Connect with us

    ಸಭೆಯಲ್ಲೇ ದಿಢೀರ್ ಕುಸಿದು ಬಿದ್ದ ಸುಳ್ಯ ಶಾಸಕ ಎಸ್.ಅಂಗಾರ..!ಮಂಗಳೂರು ಆಸ್ಪತ್ರೆಗೆ ದಾಖಲು..

    Published

    on

    ಸಭೆಯಲ್ಲೇ ದಿಢೀರ್ ಕುಸಿದು ಬಿದ್ದ ಸುಳ್ಯ ಶಾಸಕ ಎಸ್.ಅಂಗಾರ..!ಮಂಗಳೂರು ಆಸ್ಪತ್ರೆಗೆ ದಾಖಲು…!

    ಕಡಬ: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಪಡಿತರ ವ್ಯವಸ್ಥೆಯ  ನಿರ್ವಹಣೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಸುಳ್ಯ ಶಾಸಕ ಎಸ್.ಅಂಗಾರ ಅಸ್ವಸ್ಥಗೊಂಡ ಘಟನೆ ಕಡಬದಲ್ಲಿ ನಡೆದಿದೆ.

    ಕಡಬದಲ್ಲಿ ನಡೆದ ಅಧಿಕಾರಿಗಳು, ವರ್ತಕರು ಹಾಗೂ ಜನಪ್ರತಿನಿಧಿಗಳ ಸಭೆಯ ಬಳಿಕ ಕಡಬದ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ದಿಢೀರ್ ಅಂತ ರಕ್ತದೊತ್ತಡ ಕಡಿಮೆಯಾಗಿದೆ‌.

    ಗಾಬರಿಯಿಂದ ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

    ಶಾಸಕರು ಕ್ಷೇಮ:ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್

    ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಹೃದಯಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆ ಇಲ್ಲ. ರಕ್ತದೊತ್ತಡ ಸುಸ್ಥಿತಿಗೆ ಮರಳಿದೆ. ಹೊಟ್ಟೆ( ಉದರ)ಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅಸ್ವಸ್ಥತೆ ಉಂಟಾಗಿತ್ತು. ಉದರ ರೋಗಗಳ ತಜ್ಞರು ಚಿಕಿತ್ಸೆ ಆರಂಭಿಸಿದ್ದಾರೆ. ಯಾವುದೇ ರೀತಿಯ ಭಯ ಇಲ್ಲ ಎಂದು ಮಂಗಳೂರು ಕೆಎಂಸಿ (ಜ್ಯೋತಿ) ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅವರು ತಿಳಿಸಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ ಅತಂಕಗೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!

    Published

    on

    ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

    ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ  ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್‌ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್‌ನನ್ನು ಓಡಿಸಿಕೊಂಡು ಹೋಗಿದ್ದು  ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ.  ಇದರಿಂದ‌ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.

    ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ

    ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ.  ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.

    Continue Reading

    DAKSHINA KANNADA

    ಮಂಗಳೂರು : ಬೈಕ್‌ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿ ಸಾ*ವು

    Published

    on

    ಮಂಗಳೂರು : ಲಾರಿಯೊಂದು ಬೈಕ್‌ಗೆ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃ*ತಪಟ್ಟ ಘಟನೆ ಕುಂಟಿಕಾನ ಪ್ಲೈಓವರ್‌ನ ಮೇಲೆ ಶುಕ್ರವಾರ(ಸೆ.21) ನಡೆದಿದೆ.

    ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃ*ತಪಟ್ಟ ವಿದ್ಯಾರ್ಥಿ.  ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಎ ಓದುತ್ತಿದ್ದ ಜಾಸಿಮ್ ಶುಕ್ರವಾರ ಸಂಜೆ ಕೂಳೂರಿನಿಂದ ಕೆಪಿಟಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿ*ಕ್ಕಿ ಹೊಡೆಯಿತು ಎನ್ನಲಾಗಿದೆ.

    ಇದನ್ನೂ ಓದಿ : ನಾಲ್ಕನೇ ಮಗುವೂ ಹೆಣ್ಣಾಯಿತೆಂದು ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದ ತಂದೆ

    ಪರಿಣಾಮ ನಿಯಂತ್ರಣ ತಪ್ಪಿದ ಜಾಸಿಮ್ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀ*ರ ಗಾ*ಯಗೊಂಡ ಅವರು ಮೃ*ತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ದತ್ತಿ ಇಲಾಖೆ ದೇವಸ್ಥಾನದಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ..!

    Published

    on

    ಮಂಗಳೂರು : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದ ದತ್ತಿ ಇಲಾಖೆ ಫುಲ್ ಅರ್ಲರ್ಟ್‌ ಆಗಿದೆ. ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.

    ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ದತ್ತಿ ಇಲಾಖೆ ದೇವಸ್ಥಾನದ ಸೇವೆಗಳಿಗೆ , ದೀಪಗಳಿಗೆ, ಪ್ರಸಾದ ತಯಾರಿಗೆ ಮತ್ತು ಅನ್ನಛತ್ರದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಿದೆ.

    ತಿರುಪತಿ ದೇವಾಲಯದ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪವೇ ರವಾನೆ ಆಗುತ್ತಿದೆ. ಆದ್ರೆ ಜಗನ್‌ ರೆಡ್ಡಿಯ ಸರ್ಕಾರದ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಪೂರೈಕೆ ಮಾಡಿರಲಿಲ್ಲ. ಹೀಗಾಗಿ ತಿರುಪತಿ ಲಡ್ಡುವಿಗೆ ಬಳಕೆ ಮಾಡಿದ ತುಪ್ಪಕ್ಕೂ ನಂದಿನಿ ತುಪ್ಪಕ್ಕೂ ಯಾವುದೇ ಸಂಭಂಧ ಇಲ್ಲ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌ ಹೇಳಿದ್ದಾರೆ.

    Continue Reading

    LATEST NEWS

    Trending