DAKSHINA KANNADA
ಬೆಳ್ಳಾರೆ ಮುಸ್ಲೀಂ ಯುವಕನ ಮೇಲೆ ದಾಳಿ ಪ್ರಕರಣ : ಎಂಟು ಮಂದಿ ಆರೋಪಿಗಳ ಬಂಧನ..!
Published
2 years agoon
By
Adminಸುಳ್ಯ : ಬೆಳ್ಳಾರೆಯಲ್ಲಿ ಮುಸ್ಲೀಂ ಯುವಕನ ಮೇಲೆ ನಡೆದ ಮಾರಣಾಂತಿಕ ದಾಳಿ ಸಂಬಂಧ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು ಘಟನೆ ನಡೆದ 24 ಗಂಟೆಗಳಲ್ಲಿ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಲು ಯಶಸ್ವಿಯಾಗಿದ್ದಾರೆ.
1).ಅಭಿಲಾಷ್ 2) ಸುನೀಲ್, 3) ಸುಧೀರ್, 4) ಶಿವ, 5) ರಂಜಿತ್, 6) ಸದಾಶಿವ 7) ಜಿಮ್ ರಂಜಿತ್, 8) ಭಾಸ್ಕರ ಬಂಧಿತ ಆರೋಪಿಗಳಾಗಿದ್ದು ಎಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದಾರೆ.
ಇವರ ವಿರುದ್ಧ ಕಲಂ: 143, 147, 323, 324, 307 ಜೊತೆಗೆ 149 ಐಪಿಸಿ ಸೆಕ್ಷನ್‌ನಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ :ಜು 19ರಂದು ರಾತ್ರಿ 11 ಗಂಟೆ ಸುಮಾರಿಗೆ ಬೆಳ್ಳಾರೆಯ ಕಳಂಜ ಗ್ರಾಮದ ವಿಷ್ಣು ನಗರ ಎಂಬಲ್ಲಿ ಈ ಘಟನೆ ನಡೆದಿತ್ತು.
ಮಸೂದ್ ತಿಂಗಳ ಹಿಂದೆಯಷ್ಟೇ ಕಾಸರಗೋಡಿನಿಂದ ಕಳಂಜದಲ್ಲಿರುವ ಅಜ್ಜ ಅಬ್ಬು ಎಂಬವರ ಮನೆಗೆ ಬಂದು ನೆಲೆಸಿದ್ದು, ಇಲ್ಲೇ ಸ್ಥಳೀಯವಾಗಿ ಕೂಲಿ ಕೆಲಸ ಮಾಡಿ ಕೊಂಡಿದ್ದರೆನ್ನಲಾಗಿದೆ.
ಮಂಗಳವಾರ ಸಂಜೆ ವಿಷ್ಣು ನಗರದಲ್ಲಿ ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಲು ಮಸೂದ್ ತೆರಳಿದ್ದು, ಈ ವೇಳೆ ಅಲ್ಲಿ ಸಮೀಪದ ಅಂಗಡಿಯ ಬಳಿ ಮೈ ತಾಗಿತು ಎಂಬ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಮಾತಿನ ಚಕಮಕಿ, ಹೊಡೆದಾಟ ನಡೆದಿದೆ ಎನ್ನಲಾಗಿದೆ.
ಈ ವೇಳೆ ಸುಧೀರ್‌ಗೆ ಮಸೂದ್ ಬಾಟಲಿ ತೋರಿಸಿ ಜೀವ ಬೆದರಿಕೆ ಹಾಕಿದ್ದರೆನ್ನಲಾಗಿದೆ.
ಇದೇ ವಿಚಾರವಾಗಿ ರಾತ್ರಿ 10.30ರ ಸುಮಾರಿಗೆ ಆರೋಪಿಗಳಾದ ಸುನೀಲ್ ಹಾಗೂ ಅಭಿಲಾಷ್ ಎಂಬವರು ದೂರುದಾರ ಇಬ್ರಾಹಿಂ ಶಾನಿಫ್‌ರನ್ನು ಸಂಪರ್ಕಿಸಿ ಸುಧೀರ್ ಮೇಲೆ ಮಸೂದ್ ಹಲ್ಲೆ ನಡೆಸಿದ್ದಾನೆ, ಇದನ್ನು ರಾಜಿ ಮಾತುಕತೆ ಮೂಲಕ ಮುಗಿಸೋಣ. ಅದಕ್ಕಾಗಿ ಮಸೂದ್‌ನನ್ನು ವಿಷ್ಣು ನಗರಕ್ಕೆ ಕರೆದುಕೊಂಡು ಬರುವಂತೆ ಸೂಚಿಸಿದ್ದಾರೆ.
ಅದರಂತೆ ರಾತ್ರಿ 11 ಗಂಟೆ ಸುಮಾರಿಗೆ ಮಸೂದ್‌ರನ್ನು ಕರಕೊಂಡು ಶಾನಿಫ್ ವಿಷ್ಣು ನಗರಕ್ಕೆ ಬಂದಿದ್ದಾರೆ.
ಈ ವೇಳೆ ಎಂಟು ಮಂದಿ ಆರೋಪಿಗಳು ಏಕಾಏಕಿ ಮಸೂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆರೋಪಿ ಅಭಿಲಾಷ್ ಸೋಡಾ ಬಾಟಲಿಯಿಂದ ಮಸೂದ್ ರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಸೂದನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
BIG BOSS
ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
Published
22 minutes agoon
23/11/2024ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.
‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು
DAKSHINA KANNADA
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Published
2 hours agoon
23/11/2024By
NEWS DESK3ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.
ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.
BIG BOSS
ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ
Published
4 hours agoon
23/11/2024ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.
ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
LATEST NEWS
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Viral Video: ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು
ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ
ಜಾರ್ಖಂಡ್ನಲ್ಲಿ ಬಿಗ್ ಟ್ವಿಸ್ಟ್; ಜೆಎಂಎಂ ಮುನ್ನಡೆ – ಎನ್ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ
ಕರ್ನಾಟಕ ಉಪಚುನಾವಣೆ : ‘ಕೈ’ ಹಿಡಿದ ಮತದಾರ…ಕಮಲಕ್ಕೆ ಶಾಕ್
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- Baindooru1 day ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ