Wednesday, October 20, 2021

ಸುಳ್ಯ : ಕೆರೆಗೆ ಬಿದ್ದ ಮಗು ರಕ್ಷಣೆಗೆ ಹೋದ ತಾಯಿಯೂ ನೀರುಪಾಲು..!

ಸುಳ್ಯ :  ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಹಾಗೂ ಮಗು ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.

ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ 30 ವರ್ಷದ ಸಂಗೀತಾ ಮತ್ತು ಆಕೆಯ ಮಗು‌ ನಾಲ್ಕು ವರ್ಷದ ಅಭಿಮನ್ಯು ಮೃತ ದುರ್ದೈವಿಗಳಾಗಿದ್ದಾರೆ.

ಎರಡು ದಿನಗಳ ಹಿಂದೆ ಪೂಜೆ ನಿಮಿತ್ತ ತವರು ಮನೆಗೆ ಸಂಗೀತಾ ಬಂದಿದ್ದು, ನಾಳೆ ಮೆಲ್ಕಾರ್​ಗೆ ವಾಪಾಸ್ ಹೋಗುವವರಿದ್ದರು. ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದೆ ಎನ್ನಲಾಗಿದೆ.

ಮಗು ಕೆರೆಗೆ ಬಿದ್ದದ್ದನ್ನು ನೋಡಿದ ತಾಯಿ ಸಂಗೀತಾ ಅವರು ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ.

ಆದರೆ ಈಜುಲು ಬಾರದ ಸಂಗೀತಾ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತನ್ನ ಪ್ರಾಣವನ್ನೂ ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ.

ಸುಳ್ಯ ಅಗ್ನಿಶಾಮಕ ದಳದ ನೇತೃತ್ವದಲ್ಲಿ ಸಂಗೀತಾ ಹಾಗೂ ಮಗುವಿನ ಮೃತದೇಹಗಳನ್ನು ಮೇಲೆತ್ತಲಾಗಿದ್ದು ಸ್ಥಳಕ್ಕೆ ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...