DAKSHINA KANNADA
ಸುಳ್ಯ: ಕಳವಾದ ಬೈಕಿನ ಬಗ್ಗೆ ಕಲ್ಕುಡನಿಗೆ ಹರಕೆ ಹೇಳಲು ಹೋಗುತ್ತಿರುವಾಗಲೇ ಸಿಕ್ಕಿ ಬಿದ್ದ ಕಳ್ಳ..!
ನಿಲ್ಲಿಸಿದ್ದ ಬೈಕನ್ನು ಕದ್ದು ಮರುದಿನ ಅದೇ ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕು ಕಳಕೊಂಡವ ಹರಕೆ ಹೇಳಲು ಹೋಗುತ್ತಿದ್ದಾಗ ಆತನ ಕೈಗೆ ಸಿಕ್ಕಿಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ.
ಸುಳ್ಯ: ನಿಲ್ಲಿಸಿದ್ದ ಬೈಕನ್ನು ಕದ್ದು ಮರುದಿನ ಅದೇ ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕು ಕಳಕೊಂಡವ ಹರಕೆ ಹೇಳಲು ಹೋಗುತ್ತಿದ್ದಾಗ ಆತನ ಕೈಗೆ ಸಿಕ್ಕಿಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.
ಮೈಸೂರಿನ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿರುವ ನಿರಂಜನ್ ಆರೋಪಿ.
ಘಟನೆ ವಿವರ
ಉಬರಡ್ಕದ ಕಾರ್ತಿಕ್ ಸುಳ್ಯಕೋಡಿ ಎಂಬವರು ಪುತ್ತೂರಿನಲ್ಲಿ ಕ್ಯಾಂಪ್ಕೋ ಉದ್ಯೋಗಿಯಾಗಿದ್ದು, ಜು.25ರಂದು ಸಂಜೆ ತನ್ನ ಬೈಕ್‌ನ್ನು ಸುಳ್ಯ ಸರಕಾರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ರಾತ್ರಿ ಪಾಳಿಯ ಕೆಲಸಕ್ಕೆ ಬಸ್ ನಲ್ಲಿ ಪುತ್ತೂರಿಗೆ ತೆರಳಿದ್ದರು.
ಮರುದಿನ ಬಂದಾಗ ನಿಲ್ಲಿಸಿದ ಸ್ಥಳದಲ್ಲಿ ಬೈಕ್ ಇರಲಿಲ್ಲ.
ಈ ಪೊಲೀಸರಿಗೆ ವಿಷಯ ತಿಳಿಸಿ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಕೆಂಪು ಜಾಕೆಟ್ ಮತ್ತು ಖಾಕಿ ಪ್ಯಾಂಟ್ ಧರಿಸಿದ ವ್ಯಕ್ತಿಯೊಬ್ಬ ನಕಲಿ ಕೀ ಬಳಸಿ ಬೈಕ್ ಕೊಂಡೊಯ್ಯುತ್ತಿರುವ ದೃಶ್ಯ ಕಂಡು ಬಂತು.
ಜು. 27ರಂದು ಬೆಳಗ್ಗೆ ಕಾರ್ತಿಕ್ ಅವರು ತನ್ನ ಕುಟುಂಬಸ್ಥರ ಜೊತೆ ಕಾರಿನಲ್ಲಿ ಸುಳ್ಯದ ಕಡೆ ಬಂದು ಬೈಕ್ ಕಳವಾದ ಬಗ್ಗೆ ಕಲ್ಕುಡ ದೈವಸ್ಥಾನದಲ್ಲಿ ಹರಕೆ ಹೇಳಿಕೊಳ್ಳಲು ಮುಖ್ಯ ರಸ್ತೆ ಕಡೆ ತಲುಪಿದಾಗ ಕೆಂಪು ಜಾಕೆಟ್, ಖಾಕಿ ಪ್ಯಾಂಟ್ ಧರಿಸಿದ ವ್ಯಕ್ತಿ ಬೈಕ್‌ನಲ್ಲಿ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಹೋಗುವುದು ಕಂಡಿತು.
ಕೂಡಲೇ ಇದು ತನ್ನದೇ ಬೈಕ್ ಎಂಬುದನ್ನು ಗುರುತು ಹಿಡುದ ಕಾರ್ತಿಕ್ ಸುಳ್ಯಕೋಡಿತನ್ನ ಸಹೋದರ ಮತ್ತು ಗೆಳೆಯರಿಗೆ ವಿಷಯ ತಿಳಿಸಿದರು.
ಅದರಂತೆ ಅರಂತೋಡಿನಲ್ಲಿ ಸ್ಥಳೀಯರು ಬೈಕನ್ನು ಅಡ್ಡಗಟ್ಟಿ ವಿಚಾರಿಸಲು ಮುಂದಾದಾಗ ಅವರಿಂದ ತಪ್ಪಿಸಿಕೊಂಡು ಮುಂದೆ ಸಾಗಿದ್ದಾನೆ. ಈ ಬಗ್ಗೆ ಕಲ್ಲುಗುಂಡಿ ಪೊಲೀಸ್ ಹೊರಠಾಣೆಗೆ ವಿಷಯ ತಿಳಿಸಿ ಬೈಕ್‌ನಲ್ಲಿ ಹಿಂಬಾಲಿಸಿದರು.
ವಿಷಯ ತಿಳಿದ ಕಲ್ಲುಗುಂಡಿ ಹೊರಠಾಣೆ ಪೊಲೀಸರು ಮತ್ತು ಗೃಹರಕ್ಷಕ ಸಿಬ್ಬಂದಿ ತಕ್ಷಣ ಬ್ಯಾರಿಕೇಡ್‌ಗಳನ್ನು ರಸ್ತೆಗೆ ಅಡ್ಡವಿರಿಸಿ ಬೈಕ್ ಕಳ್ಳನನ್ನು ಹಿಡಿದು ವಿಚಾರಿಸಿದ್ದಾರೆ.
ಆ ವೇಳೆ ಆತ ಮೈಸೂರಿನ ಮೆಡಿಕಲ್ ವಿದ್ಯಾರ್ಥಿ ನಿರಂಜನ್ ಎಂದು ತಿಳಿದುಬಂದಿದೆ.
ಬೈಕ್ ಕದ್ದು ಕಾಸರಗೋಡಿನಲ್ಲಿದ್ದ ತನ್ನ ಅಜ್ಜಿಯ ಮನೆಗೆ ಹೋಗಿ ಅಲ್ಲಿಂದ ಮರುದಿನ ಮೈಸೂರಿಗೆ ಹೋಗಲೆಂದು ಹಿಂತಿರುಗುವ ವೇಳೆಗೆ ಸಿಕ್ಕಿ ಬಿದ್ದಿದ್ದಾನೆ. ಆತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
DAKSHINA KANNADA
ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.
DAKSHINA KANNADA
ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ ಭಟ್- ಪ್ರಕರಣ ದಾಖಲು..!
ಪುತ್ತೂರು: ಬಣ್ಣದ ಮಾತುಗಳಿಂದ ವಿಶ್ವಾಸಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಪ್ರಕರಣದ ಆರೋಪಿ.
ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ ನಲ್ಲಿ ಹಾಡುತ್ತಿದ್ದಳು.
2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ.
2023 ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ.
ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.
ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.
ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.
ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್‌ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್‌ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್‌ಗಾರ್ಡ್ ತಿಳಿಸಿದೆ.