Wednesday, December 1, 2021

ಸೆ. 29ರಂದು ಡಿಕೆಶಿಯನ್ನು ಸುಳ್ಯ ಕೋರ್ಟ್‌ಗೆ ಹಾಜರುಪಡಿಸಲು ಡಿಜಿ & ಐಜಿಪಿಗೆ ನೋಟಿಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಿಂದ ಡಿ.ಕೆ ಶಿವಕುಮಾರ್‌ಗೆ ವಾರಂಟ್ ಜಾರಿಯಾಗಿದೆ.

ಸೆಪ್ಟೆಂಬರ್ 29ರಂದು ಡಿಕೆ ಶಿವಕುಮಾರ್‌ ಅನ್ನು ಕೋರ್ಟ್‌ಗೆ ಹಾಜರು ಪಡಿಸುವಂತೆ ಡಿಜಿ & ಐಜಿಪಿಗೆ ನೋಟಿಸ್ ನೀಡಲಾಗಿದೆ.


ಡಿ.ಕೆ ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ವಿದ್ಯುತ್ ಸಮಸ್ಯೆ ಬಗ್ಗೆ ಬಳ್ಳಾರಿಯ ಸಾಯಿ ಗಿರಿಧರ್ ಮತ್ತು ಡಿಕೆಶಿ ಫೋನಿನಲ್ಲಿ ಮಾತನಾಡುವಾಗ ಇಬ್ಬರ ಮಧ್ಯೆ ಮಾತಿನಚಕಮಕಿ ನಡೆದಿತ್ತು.

ಆಗ ಡಿ.ಕೆ ಶಿವಕುಮಾರ್ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು.

ಡಿ.ಕೆ ಶಿವಕುಮಾರ್ ದೂರು ಆಧರಿಸಿ ಗಿರಿಧರ್ ರೈನನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣ ಸಂಬಂಧ ಸಾಕ್ಷ್ಯ ಹೇಳಲು ಡಿಕೆಶಿ ಬರಬೇಕಾಗಿತ್ತು.

ಆದರೆ ಹಲವು ಬಾರಿ ನೋಟಿಸ್ ನೀಡಿದರೂ ಹಾಜರಾಗದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ವಾರಂಟ್ ಜಾರಿ ಮಾಡಲಾಗಿದೆ.
ಏನಿದು ಪ್ರಕರಣ?
ಸ್ಥಳೀಯವಾಗಿ ನಿರಂತರ ಕಾಡುತ್ತಿದ್ದ ವಿದ್ಯುತ್ ಸಮಸ್ಯೆ ಬಗ್ಗೆ ಬೆಳ್ಳಾರೆಯ ವರ್ತಕ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ್ ರೈ 2016ರ ಫೆಬ್ರವರಿ 28ರಂದು ರಾತ್ರಿ ಅಂದಿನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಸಮಸ್ಯೆ ತಿಳಿಸಿದ್ದರು.

ಈ ವೇಳೆ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.

ಈ ವೇಳೆ ಅವಾಚ್ಯ ಶಬ್ದಗಳ ಬಳಕೆ ಕೂಡ ಆಗಿತ್ತು ಎಂದು ಆರೋಪಿಸಲಾಗಿದ್ದು, ಇದು ಡಿಕೆ ಶಿವಕುಮಾರ್ ಅವರು ಕೋಪಗೊಳ್ಳಲು ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಅಂದಿನ ಸಚಿವ ಡಿಕೆ ಶಿವಕುಮಾರ್ ಮೆಸ್ಕಾಂ ಎಂಡಿ ಮೂಲಕ ಅಂದಿನ ಸುಳ್ಯ ಪ್ರಭಾರ ಎಇಇ ಹರೀಶ್ ನಾಯಕ್ ಅವರಿಂದ ಸಾಯಿ ಗಿರಿಧರ್ ವಿರುದ್ಧ ಪೊಲೀಸರಿಗೆ ದೂರು ನೀಡಿಸಿದ್ದರು.

ಈ ಪ್ರಕರಣ ಸಂಬಂಧ ಬೆಳ್ಳಾರೆ ಪೊಲೀಸರು ಗಿರಿಧರ್ ರೈ ಅವರನ್ನು ಬಂಧಿಸಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...