Connect with us

DAKSHINA KANNADA

ಸುಮಂತ್ ನಿಗೂಢ ಸಾವಿನ ಸಂಶಯ: ಸಮಗ್ರ ತನಿಖೆಗೆ ಒತ್ತಾಯ-ಅಂಬೇಡ್ಕರ್ ಯುವ ಸೇನೆ

Published

on

ಮೂಲ್ಕಿ: ಹಳೆಯಂಗಡಿ ಸಮೀಪದ ತೋಕೂರು ನಿವಾಸಿ ಸುಮಂತ್ (19)ನಿಗೂಢ ಸಾವಿನ ಬಗ್ಗೆ ಕಾಪು ತಾಲೂಕು ಅಂಬೇಡ್ಕರ್ ಯುವ ಸೇನೆ ಸಂಶಯ ವ್ಯಕ್ತ ಪಡಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.

ಅಂಬೆಡ್ಕರ್ ಯುವ ಸೇನೆ ಕಾಪು ತಾಲೂಕು ಅಧ್ಯಕ್ಷ ಲೋಕೇಶ್ ಪಡುಬಿದ್ರೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಂತ್‌ ಅವರು ನೀರಿಗೆ ಬಿದ್ದು ಅಥವಾ ನದಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿರುವ ಸಾಧ್ಯತೆ ಇಲ್ಲ. ಬದಲಾಗಿ ಇದೊಂದು ವ್ಯವಸ್ಥಿತ ಕೊಲೆ ಪ್ರಕರಣ ಎಂಬ ಸಂಶಯವಿದೆ. ಪೋಲೀಸರು ಈ ಬಗ್ಗೆ ತನಿಖೆ ನಡೆಸಿ ಮೃತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡ ಬೇಕು ಎಂದು ಒತ್ತಾಯಿಸಿದರು.

ಅಜ್ಜಿ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದ ಸುಮಂತ್‌ ನಾಪತ್ತೆಯಾದ ಬಗ್ಗೆ ಸೆ. 15 ರಂದು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರ ಬಳಿ ಕುಟುಂಬಸ್ಥರು ವಿಚಾರಿಸಿದಾಗ ಸುಮಂತ್‌ ಅಲ್ಲಿ ಇದ್ದಾನೆ, ಇಲ್ಲಿ ಇದ್ದಾನೆ, ಹುಲಿ ವೇಷದವರ ಜತೆಗಿದ್ದಾನೆ ಎಂದೆಲ್ಲಾ ಹೇಳಿ ಅವರನ್ನು ವಾಪಸ್‌ ಕಳುಹಿಸುತ್ತಿದ್ದರು.

ಸೆ. 24 ರಂದು ಹಳೆಯಂಗಡಿಯ ಕೊಪ್ಪಲ ಕರಿತೋಟದ ಆಣೆಕಟ್ಟು ಎಂಬಲ್ಲಿ ನದಿ ದಡದಲ್ಲಿ ಸುಮಂತ್‌ ನ ಬಟ್ಟೆ, ಚಪ್ಪಲಿ ಹಾಗೂ ಮೊಬೈಲ್ ಫೋನ್‌ ಪತ್ತೆಯಾಗಿತ್ತು. ಮುಲ್ಕಿ ಪೊಲೀಸರು ಈ ವಸ್ತುಗಳನ್ನು ವಶಕ್ಕೆ ಪಡೆದು ತನಿಖೆ ತೀವ್ರಗೊಳಿಸಿದ್ದರು. ಸೆ. 25 ರಂದು ಅಂಬೇಡ್ಕರ್ ಯುವ ಸೇನೆಯ ಪದಾಧಿಕಾರಿಗಳು ಮುಲ್ಕಿ ಪೊಲೀಸರನ್ನು ಸಂಪರ್ಕಿಸಿ ವಿಚಾರಣೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲು ಸಂಘಟಕರು ವಿನಂತಿಸಿದಾಗ ಎಸ್.ಐ. ಯವರು ಇನ್ನು 2 ದಿನಗಳಲ್ಲಿ ಸುಮಂತ್‌ ನನ್ನು ನಿಮ್ಮ ಮುಂದೆ ತಂದು ನಿಲ್ಲಿಸುವುದಾಗಿ ಭರವಸೆ ನೀಡಿದ್ದರು.

ಬಳಿಕ ನಾವು ಈ ಬಗ್ಗೆ ಪಣಂಬೂರಿನಲ್ಲಿ ಎಸಿಪಿ ಅವರಿಗೂ ಮನವಿ ಸಲ್ಲಿಸಿದ್ದೆವು ಎಂದು ವಿವರಿಸಿದರು. 16 ದಿನಗಳ ಹಿಂದೆ ನಾಪತ್ತೆಯಾದ ಸುಮಂತ್ ಮೃತದೇಹವು ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪಾವಂಜೆ ಬಳಿ ನದಿಯಲ್ಲಿ ಪತೆಯಾಗಿದೆ. 9 ದಿನಗಳ ಹಿಂದೆ ಆತನ ಬಟ್ಟೆ, ಚಪ್ಪಲಿ, ಮೊಬೈಲ್ ನದಿ ದಂಡೆಯಲ್ಲಿ ಲಭ್ಯವಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರೇಕೆ ನದಿಯಲ್ಲಿ ಮುಳುಗುಗಾರರನ್ನು ಬಳಸಿ ಪರಿಶೀಲನೆ ನಡೆಸಿಲ್ಲ? ಇದು ಪೊಲೀಸರ ನಿರ್ಲಕ್ಷವಲ್ಲವೇ? ಮೃತ ಸುಮಂತ್ ಅನುಭವೀ ಈಜುಗಾರ ಹಾಗೂ ಮುಳುಗುಗಾರ. ಆಳ ನೀರಿನಲ್ಲಿ ಕಪ್ಪೆ ಚಿಪ್ಪು ತೆಗೆಯುವ ಕಾಯಕ ಮಾಡುತ್ತಿದ್ದನು. ಹಾಗಾಗಿ ಆತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಸಾಧ್ಯತೆ ಕಡಿಮೆ. ಆತನ ಬಟ್ಟೆ ಸಿಕ್ಕಿದ ಜಾಗದಲ್ಲಿ ಕೇವಲ ಸೊಂಟ ಮಟ್ಟದ ನೀರು ಇದ್ದು ಆತ ಅಲ್ಲಿ ಸಾಯಲು ಸಾಧ್ಯವಿಲ್ಲ ಎಂದು ತಿಳಿಸಿದರು. ಆದ್ದರಿಂದ ಈ ಶಂಕಾಸ್ಪದ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಮಾತ್ರವಲ್ಲದೆ ಆ ಬಡ ಕುಟುಂಬಕ್ಕೆ ಪರಿಹಾರವನ್ನು ದೊರಕಿಸಿ ಕೊಡ ಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಅಂಬೇಡ್ಕರ್ ಯುವ ಸೇನೆಯ ಗೌರವಾಧ್ಯಕ್ಷ ಕೃಷ್ಣ ಬಂಗೇರ, ಮೂಲ್ಕಿ ತಾಲೂಕು ಶಾಖೆ ಅಧ್ಯಕ್ಷ ಶ್ರೀಪತಿ ಕೆರೆಕಾಡು, ಕಾರ್ಯದರ್ಶಿ ವಸಂತ ಪಾದೆಬೆಟ್ಟು, ಹಳೆಯಂಗಡಿ ಶಾಖಾ ಅಧ್ಯಕ್ಷ ಗಣೇಶ್ ಹಳೆಯಂಗಡಿ, ಸುಮಿತ್ರಾ ಉಪಸ್ಥಿತರಿದ್ದರು.

 

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending