Tuesday, October 19, 2021

ಕೊರೋನಾ ನಿಯಮ ಉಲ್ಲಂಘಿಸಿದ 150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಮೇಲೆ ಸುಮೊಟೋ ಕೇಸ್‌ ದಾಖಲು

ಹುಬ್ಬಳ್ಳಿ: ಮಾರಕ ಕೊರೋನಾ ವೈರಸ್​​ ನಿಯಮ ಉಲ್ಲಂಘಿಸಿ ನೂತನ ಸಚಿವರಿಗೆ ಅದ್ದೂರಿ ಸ್ವಾಗತ ಮಾಡಿದ 150ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್​​ ದಾಖಲಾಗಿದೆ.

ಆಗಸ್ಟ್​​ 7ರಂದು ಹುಬ್ಬಳ್ಳಿಗೆ ಸಚಿವ ಮುನೇನಕೊಪ್ಪ ಆಗಮಿಸಿದ್ದರು. ಈ ವೇಳೆ ನೂರಾರು ಬಿಜೆಪಿ ಕಾರ್ಯಕರ್ತರು ಮಾಸ್ಕ್​​ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್​​​-19 ನಿಯಮ ಉಲ್ಲಂಘಿಸಿದ್ದರು.

ಹೀಗಾಗಿ ಹುಬ್ಬಳ್ಳಿ ಪೊಲೀಸರು 150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಮೋಟೋ ಕೇಸ್​​ ದಾಖಲಿಸಿಕೊಂಡಿದ್ದಾರೆ.


ಸಚಿವ ಮುನೇನಕೊಪ್ಪರನ್ನು ಕೊರೋನಾ ನಿಮಯ ಗಾಳಿಗೆ ತೂರಿ ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಇವರನ್ನು ಸ್ವಾಗತಿಸಲು ಅಭಿಮಾನಿಗಳು ಮತ್ತು 150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮಾಸ್ಕ್​​ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಜಮಾಯಿಸಿದ್ದಾರೆ.

ಆದ್ದರಿಂದ ಗೋಕುಲ ರಸ್ತೆಯ ಪೊಲೀಸರು ಸುಮೋಟೋ ಕೇಸ್​​ ದಾಖಲಿಸಿಕೊಂಡು, ವಿಚಾರಣೆ ಮುಂದುವರಿಸಿದ್ದಾರೆ.

ಇದೇ ವೇಳೆ ಯಾದಗಿರಿಯ ಜನಾಶೀರ್ವಾದ ಕಾರ್ಯಕ್ರಮದ ಹಿನ್ನೆಲೆ ಯರಗೋಳ ಗ್ರಾಮಕ್ಕೆ ಕೇಂದ್ರ ಸಚಿವ ಖೂಬಾ ಆಗಮಿಸಿದ್ದಾರೆ.

ಈ ವೇಳೆ, ನಾಡಬಂದೂಕು ಸಿಡಿಸಿ ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತವನ್ನ ಕೋರಲಾಗಿದೆ. ಈ ಸುದ್ದಿಯೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...