ವ್ಯಾಂಕೋವರ್: ಕೆನಡಾದಲ್ಲಿ ಬಿಸಿಲಿನ ಝಳ ವಿಪರೀತವಾಗಿ ಏರಿಕೆ ಕಂಡಿದ್ದು, ಬುಧವಾರ 49.5 ಡಿಗ್ರಿ ಸೆಲ್ಶಿಯಸ್‌ಗೆ ತಲುಪುವ ಮೂಲಕ ಗರಿಷ್ಠ ಮಟ್ಟ ದಾಖಲಿಸಿದೆ. ಈ ಬಿಸಿಲಿನ ಧಗೆಗೆ 134 ಬಲಿಯಾಗಿದ್ದಾರೆ.
ರಾಷ್ಟ್ರದಲ್ಲಿ ಬಿರುಬಿಸಿಲು ಹೆಚ್ಚಾಗಿದ್ದು, ವ್ಯಾಂಕೋವರ್ ನಗರದಲ್ಲಿ ಶುಕ್ರವಾರದಿಂದ ಈಚೆಗೆ ಇದ್ದಕ್ಕಿದ್ದಂತೆ ಕನಿಷ್ಠ 134 ಮಂದಿ ಮೃತಪಟ್ಟಿದ್ದಾರೆ ಎಂದು ನಗರ ಪೊಲೀಸ್ ಇಲಾಖೆ ಮತ್ತು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ತಿಳಿಸಿದೆ. ಬ್ರಿಟಿಷ್ ಕೊಲಿಂಬಿಯಾದ ಲಿಟ್ಟನ್‌ನಲ್ಲಿ ಉಷ್ಣಾಂಶವು 49.5 ಡಿಗ್ರಿ ಸೆಲ್ಶಿಯಸ್‌ಗೆ ಏರಿಕೆಯಾಗಿದ್ದು, ಇದುವರೆಗಿನ ಗರಿಷ್ಠ ತಾಪಮಾನ ಇದಾಗಿದೆ ಎಂದು ಕೆನಡಾದ ಹವಾಮಾನ ಇಲಾಖೆ ವರದಿ ಮಾಡಿದೆ. ವ್ಯಾಂಕೋವರ್‌ನಲ್ಲಿ ಇದುವರೆಗೆ ಇಷ್ಟು ತಾಪಮಾನ ಏರಿಕೆಯಾಗಿರಲಿಲ್ಲ. ಇಷ್ಟೊಂದು ಕೆಟ್ಟ ಅನುಭವ ಯಾವತ್ತೂ ಆಗಿರಲಿಲ್ಲ. ಇಂತಹ ಉಷ್ಣಾಂಶವನ್ನು ನೋಡಿಯೇ ಇಲ್ಲ. ಸಾಕಷ್ಟು ಮಂದಿ ಬಿಸಿಲಿನ ತಾಪಕ್ಕೆ ಇದ್ದಕ್ಕಿದ್ದಂತೆ ಮೃತರಾಗುತ್ತಿರುವುದು ಬೇಸರವನ್ನುಂಟು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾಗತಿಕವಾಗಿ ದಶಕದಲ್ಲಿ 2019 ಅತ್ಯಂತ ಹೆಚ್ಚು ಉಷ್ಣಾಂಶ ಹೊಂದಿದ್ದ ವರ್ಷ ಎಂದು ಗುರುತಿಸಲಾಗಿದೆ. ಕಳೆದ ಐದು ವರ್ಷಗಳಲ್ಲಿ ತಾಪಮಾನವು ಗಣನೀಯ ಏರಿಕೆ ಕಂಡುಬಂದಿದೆ.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.