ಮಂಗಳೂರು: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಅದರಂತೆ ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಎಸ್.ಅಂಗಾರ ಹಾಗೂ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಉತ್ತರಕನ್ನಡ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗಿನಿಂದ ಉಸ್ತುವಾರಿ ಸಚಿವ ನೇಮಕವಾಗಿರಲಿಲ್ಲ. ಈ ಹಿಂದೆ ಸಚಿವ ಅಂಗಾರ ದಕ್ಷಿಣ ಕನ್ನಡ, ಕೋಟಾ ಕೊಡಗು ಹಾಗೂ ಉಡುಪಿಯ ಗೆ ಕೋವಿಡ್ ಉಸ್ತುವಾರಿ ಸಚಿವರಾಗಿ ಸುನೀಲ್ ಕುಮಾರ್ ಅವರನ್ನು ನೇಮಿಸಿದ್ದರು.