Connect with us

    LATEST NEWS

    ಮುಂದಿನ ವರ್ಷ ರಿಪಬ್ಲಿಕ್‌ ಪರೇಡ್‌ಗೆ ಆಧ್ಯಾತ್ಮ ಎಂಬ ವಿಷಯ ಕೊಟ್ಟರೆ ನಾರಾಯಣ ಗುರುವಿನ ಸ್ತಬ್ಧಚಿತ್ರ ಕಳುಹಿಸುತ್ತೇವೆ: ಸಚಿವ ಸುನೀಲ್‌

    Published

    on

    ಮಂಗಳೂರು: ಮುಂದಿನ ವರ್ಷ ಗಣರಾಜ್ಯೋತ್ಸವದ ಪರೇಡ್‌ಗೆ ಆಧ್ಯಾತ್ಮ ಎಂಬ ವಿಷಯ ಕೊಟ್ಟರೆ ಬ್ರಹ್ಮರ್ಷಿ ನಾರಾಯಣ ಗುರುವಿನ ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ದ.ಕ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.


    ನಗರದ ಕುದ್ರೋಳಿಯಲ್ಲಿರುವ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ನಂತರ ಮಾಧ್ಯಮವರ ಪ್ರಶ್ನೆಗೆ ಉತ್ತರಿಸಿದ ಅವರು,

    ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕೇಂದ್ರ ಸರ್ಕಾರದ ಸಮಿತಿ ಅಮೃತಮಹೋತ್ಸವ ಎಂಬ ವಿಷಯದ ಸ್ತಬ್ದಚಿತ್ರ ಕಳುಹಿಸಲು ಹೇಳಿತ್ತು.

    ಮುಂದಿನ ವರ್ಷ ಯಾವ ಆಯಾಮದಲ್ಲಿ ಸ್ತಬ್ಥಚಿತ್ರ ಕಳುಹಿಸಬೇಕು ಎಂಬುವುದನ್ನು ಕೇಂದ್ರ ಸರಕಾರದ ಸಮಿತಿ ತೀರ್ಮಾನಿಸುತ್ತದೆ. ಮುಂದಿನ ವರ್ಷ ಪ್ರವಾಸೋದ್ಯಮ, ಅರಣ್ಯ ಹೀಗೆ ವಿಷಯ ನೀಡಿದರೆ ಅದಕ್ಕೆ ತಕ್ಕುದಾದ ಸ್ತಬ್ಧಚಿತ್ರ ಕಳುಹಿಸುತ್ತೇವೆ. ಆಧ್ಯಾತ್ಮ ಎಂಬ ವಿಷಯ ಕೊಟ್ಟರೆ ನಾರಾಯಣ ಗುರು ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ಹೇಳಿದರು.


    ಈ ಬಾರಿಯ ನಾರಾಯಣ ಗುರು ಟ್ಯಾಬ್ಲೋ ವಿಚಾರವನ್ನು ಕೇರಳ ಸರ್ಕಾರ ರಾಜಕೀಯಗೊಳಿಸಿದೆ. ನಾರಾಯಣ ಗುರುಗಳನ್ನು ಬಿಜೆಪಿ ರಾಜಕಾರಣಕ್ಕೆ ಈ ಹಿಂದೆಯೂ ಬಳಸಿಲ್ಲ.

    ಮುಂದೆಯೂ ಬಳಸಲ್ಲ. ಕಾಂಗ್ರೆಸ್‌ ಇದನ್ನು ರಾಜಕೀಯಗೊಳಿಸಿರಬಹುದು. ಅವರ ಆದರ್ಶಗಳನ್ನು ಸರ್ಕಾರದ ಕಾರ್ಯಕ್ರಮಗಳಲ್ಲಿ ಬಳಸುತ್ತೇವೆ.


    ಲೇಡಿಹಿಲ್‌ ಸರ್ಕಲ್‌ಗೆ ಶೀಘ್ರ ಕಾನೂನಾತ್ಮಕ ನಾಮಕರಣ
    ಲೇಡಿಹಿಲ್‌ ಸರ್ಕಲ್‌ಗೆ ನಾರಾಯಣ ಗುರು ಹೆಸರಿಡಬೇಕು ಎನ್ನುವುದು ಬಿಜೆಪಿಯ ಮಹಾನಗರ ಪಾಲಿಕೆಯ ನಿರ್ಣಯ. ಅದು ನಮ್ಮ ಬದ್ಧತೆ. ಇದರಲ್ಲಿ ರಾಜಕಾರಣ ಇಲ್ಲ. ಕಾನೂನು ಬದ್ದವಾಗಿ ಆಗಬೇಕು ಎನ್ನುವುದು ಶಾಸಕ,

    ಕಾರ್ಪೋರೇಟರ್‌ಗಳ ಅಭಿಪ್ರಾಯ. ಇದು ಅಂತಿಮ ಹಂತದಲ್ಲಿದೆ. ಇದರ ಮೊದಲೇ ಬೋರ್ಡ್ ಹಾಕಿದರೆ ನಮ್ಮ ಆಕ್ಷೇಪ ಏನಿಲ್ಲ. ಅತ್ಯಂತ ಶೀಘ್ರವಾಗಿ ಅಧಿಕೃತವಾಗಿ ನಾಮಕರಣ ಮಾಡುತ್ತೇವೆ ಎಂದರು.

    ಈ ವೇಳೆ ಶಾಸಕರದಾದ ವೇದವ್ಯಾಸ್‌ ಕಾಮತ್‌, ಉಮನಾಥ್‌ ಕೋಟ್ಯಾನ್‌, ಡಾ. ಭರತ್‌ ಶೆಟ್ಟಿ ಮತ್ತಿತರರಿದ್ದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!

    Published

    on

    ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್‌ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನೇ ಪ್ರಶ್ನೆ ಮಾಡಿದೆ. ಸಿಎಂ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೋರ್ಟ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ ವಿಶ್ವನಾಥನ್‌ ಅವರ ಪೀಠವು ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.

    ಸಾಂವಿಧಾನಕವಾಗಿ ಉನ್ನತ ಹುದ್ದೆಯಲ್ಲಿ ಇರುವ ವ್ಯಕ್ತಿಯಾಗಿ ಈ ರೀತಿ ಕೋಟ್ಯಾಂತರ ಜನರ ಭಾವನೆ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಬಾರದು ಎಂದು ಪೀಠ ಹೇಳಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ವಿಚಾರವಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೋರಿ ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೇವರನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನಿರೀಕ್ಷಿಸುವುದಾಗಿ ಪೀಠ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.

    Continue Reading

    LATEST NEWS

    ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವು

    Published

    on

    ಮಂಗಳೂರು: ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.

    ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃ*ತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃ*ತಪಟ್ಟಿದ್ದರು ಎನ್ನಲಾಗಿದೆ. ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Continue Reading

    DAKSHINA KANNADA

    ಕಾರ್ಕಳದಲ್ಲಿ ಭೀಕರ ಅಪಘಾತ; ತಂದೆ ಸಹಿತ ಮೂರು ಮಕ್ಕಳ ದುರ್ಮರಣ

    Published

    on

    ಕಾರ್ಕಳ : ಕಾರ್ಕಳ – ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು (ಸೆ.30) ಭೀಕರ ಅಪಘಾತ ಸಂಭವಿಸಿದೆ. ಮಿನಿ ಲಾರಿ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.


    ವೇಣೂರಿನಿಂದ ನಲ್ಲೂರು ಕಡೆಗೆ ಬರುತ್ತಿದ್ದ ಬೈಕ್‌ಗೆ ಕಾರ್ಕಳದಿಂದ ಗುರುವಾಯನಕೆರೆಯತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
    ಬೈಕ್ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದರು. ತಂದೆ ಸುರೇಶ್ ಆಚಾರ್ಯ (36), ಮಕ್ಕಳಾದ ಸಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಮೃತಪಟ್ಟವರು. ತಾಯಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending