Connect with us

    DAKSHINA KANNADA

    ತುಳುನಾಡನ್ನು ಹಾಡಿ ಹೊಗಳಿದ ಸುನಿಲ್ ಶೆಟ್ಟಿ.. ಮಾವನ ಪೋಸ್ಟನ್ನು ರಿ ಪೋಸ್ಟ್‌ ಮಾಡಿ ಗಮನ ಸೆಳೆದ ಕೆ.ಎಲ್ ರಾಹುಲ್

    Published

    on

    ಮಂಗಳೂರು: ಬಾಲಿವುಡ್ ನಟ ಸುನಿಲ್ ಶೆಟ್ಟಿ ತುಳುನಾಡನ್ನು ಹಾಡಿ ಹೊಗಳಿದ್ದಾರೆ.  ಇನ್ಸ್ಟಾಗ್ರಾಮ್ ಖಾತೆಯಲ್ಲಿ ತುಳುನಾಡು ಎಷ್ಟು ಸುಂದರ ಅನ್ನೋ ರೀತಿಯಲ್ಲಿ ಬರೆದು ಪೋಸ್ಟ್ ಮಾಡಿದ್ದರು. ಇದೀಗ ಆ ಪೋಸ್ಟ್ ಅನ್ನು ಅಳಿಯ ಕೆ.ಎಲ್ ರಾಹುಲ್ ರಿ ಪೋಸ್ಟ್ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ.

    sunil shetty, rahul

    ಸುನಿಲ್ ಶೆಟ್ಟಿ ಕರಾವಳಿ ಮೂಲದವರಾಗಿದ್ದು ಇಲ್ಲಿನ ಆಚಾರ, ವಿಚಾರಗಳನ್ನು ಗೌರವಿಸುತ್ತಾರೆ. ಯಾವುದೇ ಭೂತಕೋಲ, ಧಾರ್ಮಿಕ ಕಾರ್ಯಕ್ರಮಗಳನ್ನು ತಪ್ಪಿಸಿಕೊಳ್ಳದೆ ತಪ್ಪದೆ ಹಾಜರಿರುತ್ತಾರೆ. ಇತ್ತೀಚೆಗೆ ಬಪ್ಪನಾಡಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಸುನಿಲ್ ಶೆಟ್ಟಿ ಭಾಗವಹಿಸಿದ್ದರು. ಮುಂಬೈನಲ್ಲಿ ನೆಲೆಕಂಡಿದ್ದರೂ ಸುನಿಲ್ ಶೆಟ್ಟಿ ಕರಾವಳಿ ಬಗ್ಗೆ ಹೆಚ್ಚು ಅಭಿಮಾನ, ಪ್ರೀತಿ ಇಟ್ಟುಕೊಂಡಿದ್ದಾರೆ.

    ಮಗಳು ಆಥಿಯಾ ಶೆಟ್ಟಿಯನ್ನು ಕನ್ನಡದ ಹುಡುಗ ಕೆ.ಎಲ್ ರಾಹುಲ್‌ ಗೆ ಕೊಟ್ಟು ವಿವಾಹ ಮಾಡಿಕೊಡುವುದರೊಂದಿಗೆ ಕರುನಾಡಿನ ಬಾಂಧವ್ಯವನ್ನು ಮುಂದುವರಿಸಿದ್ದಾರೆ. ಇನ್ನು ಕೆ.ಎಲ್ ರಾಹುಲ್ ಕೂಡಾ ದೈವ ಭಕ್ತರಾಗಿದ್ದು, ಆಗಾಗ ಕರಾವಳಿ ಭಾಗದ ದೇವಸ್ಥಾನಗಳಿಗೆ  ಭೇಟಿ ಕೊಡುತ್ತಾರೆ.

    Read More..; ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮುಲ್ಕಿಯ ಜನಾರ್ಧನ ದೇವಸ್ಥಾನಕ್ಕೆ ಭೇಟಿ

    ಇದೀಗ ಸುನಿಲ್ ಶೆಟ್ಟಿ ಇನ್ಸ್ಟಾಗ್ರಾಮ್ ನಲ್ಲಿ ತುಳುನಾಡಿನ ಕುರಿತು ಬರೆದು ಹಾಕಿದ್ದಾರೆ. ತುಳುನಾಡು ಬಹಳ ಸುಂದರವಾಗಿದೆ. ‘ನಾನು ಹೋಟೆಲ್‌ಗೆ ಹೋಗಿದ್ದಾಗ.. ವೈಟರ್‌ಅನ್ನು ಧಣಿ ಎಂದು ಕರೆದೆ.. ಆ ವೇಳೆ ನನ್ನ ಬಳಿ ಬಂದು ಹೇಳಿ ಧಣಿ ಎಂದು ಕೇಳಿದ್ರು..ಈಗ ನಾವಿಬ್ಬರೂ ಕೂಡಾ ಶ್ರೀಮಂತರಲ್ಲ. ಒಂದು ಅಂಗಡಿ ಹೋದೆ..ಅಂಗಡಿಯವರನ್ನು ಅಣ್ಣಾ ಎಂದು ಕರೆದೆ..ಅವರು ಮರುತ್ತರಿಸಿ ಹೇಳಿ ಅಣ್ಣಾ ಎಂದು ಹೇಳಿದ್ರು. ಅಸಲಿಗೆ ನಾವು ಸಹೋದರರಲ್ಲ. ಮೀನಿನ ಮಾರ್ಕೆಟ್‌ ಗೆ ಹೋದಾಗ ಅವರನ್ನು ಅಮ್ಮಾ ಎಂದು ಕರೆದರೆ ಅವರು ಹೇಳಿ ಮಗು ಎಂದು ಹೇಳುತ್ತಾರೆ. ಅಸಲಿಗೆ ಅವರು ನನ್ನ ತಾಯಿ ಅಲ್ಲ. ಎಲ್ಲದಕ್ಕಿಂತಲೂ ಹೆಚ್ಚಾಗಿ ಇದು ನಮ್ಮ ತುಳುನಾಡಿನ ಶ್ರೀಮಂತ  ಸಂಸ್ಕೃತಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

    BELTHANGADY

    ಅನಂತಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕೊಕ್ಕಡ ಸತ್ಯನಾರಾಯಣ ತೋಡ್ತಿಲ್ಲಾಯ

    Published

    on

    ಬೆಳ್ತಂಗಡಿ:  ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ಧ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.

    ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿ ಪುತ್ರರಾಗಿದ್ದಾರೆ. ಹಿಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
    ಅವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಲವು ವರ್ಷಗಳ ಕಾಲ ಪೂಜಾ ಸೇವೆಯನ್ನು ಸಲ್ಲಿಸಿದ್ದರು.

    Read More..; ದೇವಸ್ಥಾನದ ಗೋಶಾಲೆಯಿಂದ ಗೋ ಕಳವಿಗೆ ಯತ್ನ..!

    ಪಾಲಾಲೆ ದಿ. ಸತೀಶ ಯಡಪಡಿತ್ತಾಯರಲ್ಲಿ ವೇದ ಅಭ್ಯಾಸವನ್ನು ಮಾಡಿದ್ದ ಸತ್ಯನಾರಾಯಣ ತೋಡ್ತಿಲ್ಲಾಯರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಪೂಜಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ನಿ ಸ್ನೇಹ ಹಾಗೂ ಪುತ್ರ ಸೌರಭ್ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.

    ಅಕ್ಕರ ದೇಸಿ ಸಮುದಾಯ ಸಂಘವು ಸತ್ಯನಾರಾಯಣರವರ ನೇಮಕಕ್ಕೆ ಶಿಫಾರಸು ಮಾಡಿತ್ತು. ಕೊಕ್ಕಡದ ಎಡಪಡಿತ್ತಾಯ, ಬಾಳ್ತಿಲ್ಲಾಯ, ಶಬರಾಯ, ಉಪ್ಪಾರ್ಣ, ತೋಡ್ತಿಲ್ಲಾಯ ಕುಲದ ಸದಸ್ಯರಿಗೆ ಈ ಹಿಂದಿನಿಂದಲೂ ಶ್ರೀಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುವ ಹಕ್ಕು ಇದೆ.

    Continue Reading

    DAKSHINA KANNADA

    ಪುತ್ತೂರಿನಲ್ಲಿ ಭೀಕರ ಅಪಘಾತ; ಇಬ್ಬರು ಸಾ*ವು

    Published

    on

    ಪುತ್ತೂರು : ಆಕ್ಟಿವಾ- ಬೊಲೆರೋ-ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾ*ತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ.

    ಲೋಕೇಶ್(48), ರವೀಂದ್ರ(57) ಮೃತಪಟ್ಟವರು. ಮೃತರು  ಸೋಮವಾರಪೇಟೆಯ ತ್ಯಾಗತೂರಿನವರು. ಮೃತ ರವೀಂದ್ರ ಅವರು ಟ್ಯಾಂಕರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಮಂಗಳೂರಿನ ಬಾಡಿಗೆ ರೂಂ ನ್ನು ಖಾಲಿ ಮಾಡಿ ಮಡಿಕೇರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

    ಇದನ್ನೂ ಓದಿ : ನಕಲಿ ವೈದ್ಯನಿಂದ ಭ್ರೂಣ ಹ*ತ್ಯೆ ..! ತನಿಖೆ ವೇಳೆ ವೈದ್ಯನ ಕರಾಳ ಮುಖ ಬಯಲು..!!

    ಆಕ್ಟಿವಾಗೆ ಆಲ್ಟೋ ಡಿ*ಕ್ಕಿ ಹೊಡೆದು ಬಳಿಕ ಮುಂಭಾಗದಲ್ಲಿದ್ದ ಬೊಲೆರೋ ಡಿ*ಕ್ಕಿ ಹೊಡೆದು ಈ ದುರಂ*ತ ನಡೆದಿದೆ. ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿ..!

    Published

    on

    ಮಂಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ(ಜೂ.16) ಕಮ್ಮಾಜೆ-ಕಾಗುಡ್ಡೆ ಬಳಿ ನಡೆದಿದೆ.

    Read More..; ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾ*ವು

    ಬಿಸಿರೋಡು-ಪೊಳಲಿ ಮಂಗಳೂರು ಸಂಚರಿಸುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರವಿವಾರವಾದ ಕಾರಣ ಬಸ್ಸಿನಲ್ಲಿ ಕೇವಲ ಇಬ್ಬರೇ ಪ್ರಯಾಣಿಕರಿದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಬಸ್‌ ಬಿಸಿ ರೋಡಿನಿಂದ ಕೊಳತ್ತಮಜಲಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending