ಸೆ.28 ರವರೆಗೂ ಇಎಂಐ ಮುಂದೂಡಿಕೆ – ಸುಪ್ರೀಂ ಕೋರ್ಟ್ ಮಹತ್ವದ ಆದೇಶ..!
ನವದೆಹಲಿ : ಸಾಲದ ಕಂತು ಮರುಪಾವತಿ ಯೋಜನೆಯನ್ನು ಸೆಪ್ಟೆಂಬರ್ 28ನೇ ತಾರೀಕಿನವರೆಗೂ ಮುಂದೂಡಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಈ ಸಂಬಂಧ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್, ಎಲ್ಲಾ ವೈಯಕ್ತಿಕ ಮತ್ತು ಕಾರ್ಪೊರೇಟ್ ಸಾಲಗಾರರಿಗೆ ಇನ್ನೂ 18 ದಿನ ಅಂದರೆ ಸೆಪ್ಟೆಂಬರ್ 28 ರವರೆಗೂ ಸಾಲದ ಕಂತುಗಳ ಪಾವತಿಗೆ ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದೆ.
ಈ ಹಿಂದೆಯೇ ಕೊರೋನಾ ಲಾಕ್‌ಡೌನ್ ನಂತರ ಜನಸಾಮಾನ್ಯರ ಆರ್ಥಿಕ ಸಂಕಷ್ಟ ಗಮನದಲ್ಲಿಟ್ಟುಕೊಂಡ ರಿಸರ್ವ್ ಬ್ಯಾಂಕ್ ಮಾರಾಟೋರಿಯಂ ಸ್ಕೀಮ್‌ಆ.31ರವರೆಗೆ ವಿಸ್ತರಿಸಿತ್ತು.
ಇದರ ಅವಧಿ ಮುಗಿದ ನಂತರ ಮೊರಾಟೋರಿಯಂ ಅವಧಿ ವಿಸ್ತರಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಮೊರಾಟೋರಿಯಂ ಸ್ಕೀಂ ಅನ್ನು ಇನ್ನೂ ಎರಡು ವರ್ಷಗಳವರೆಗೆ ಮುಂದೂಡಲು ಅವಕಾಶವಿದೆ ಎಂದು ಕೇಂದ್ರ ಸರಕಾರವೇ ತಿಳಿಸಿರುವುದು ಸಾಲಗಾರರಲ್ಲಿ ಸಂತಸ ಮೂಡಿಸಿತ್ತು.
ಈ ಸಂಬಂಧ ಹಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದರ ಕುರಿತು ಈಗ ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಸೆ.28 ರವರೆಗೂ ಅವಧಿ ವಿಸ್ತರಿಸಿದೆ.
ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ. ಅವರು ಕನ್ನಡ ಸಿನಿಮಾ, ಧಾರವಾಹಿ ಹಾಗೂ ರಂಗಭೂಮಿಯಲ್ಲಿ ನಟಿಸಿದ್ದರು.
ಸರಿಗಮ ವಿಜಿ ಅವರ ಮೂಲ ಹೆಸರು ವಿಜಯ್ ಕುಮಾರ್. ಆದರೆ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡಿದ್ದು ಹೇಗೆ ಎನ್ನುವ ಕುತೂಹಲ ಹಲವರಲ್ಲಿ ಇದೆ.
‘ಸರಿಗಮ ವಿಜಿ’ ಎಂದೇ ಕರೆಯಲ್ಪಡುವ ನಟ ವಿಜಯ್ ಕುಮಾರ್ (76) ಅವರು ಬುಧವಾರ (ಜ.15) ನಿಧ*ನರಾದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಶ್ವಾಸಕೋಶದ ಸೋಂಕು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ವಾರದ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 9:45ರ ಸುಮಾರಿಗೆ ಅವರು ನಿಧ*ನ ಹೊಂದಿದ್ದಾರೆ.
ಬೆಂಗಳೂರಿನ ವಿಮಾನಪುರದಲ್ಲಿ (ಎಚ್ಎಎಲ್ ಪ್ರದೇಶ) ಜನಿಸಿದ ವಿಜಯ್ ಕುಮಾರ್, ನಾಟಕದ ನಂಟು ಇಟ್ಟುಕೊಂಡು ಸಿನಿಮಾಲೋಕ ಪ್ರವೇಶಿಸಿದವರು. ‘ಬೆಳುವಲದ ಮಡಿಲಲ್ಲಿ’ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ, ನಟನಾಗಿ ಮೊದಲ ಹೆಜ್ಜೆ ಇಟ್ಟ ಅವರು ಎನ್ ಜಿಇಎಫ್ ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ದುಡಿದವರು. ಈ ಅವಧಿಯಲ್ಲೇ ಅವರು ‘ಸಂಸಾರದಲ್ಲಿ ಸರಿಗಮ’ ಎಂಬ ನಾಟಕ ಬರೆದರು.
ಇದು ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ, ಹೈದರಾಬಾದ್, ಚೆನ್ನೈ, ದೆಹಲಿಗಳಲ್ಲಿಯೂ ಆ ನಾಟಕ ಪ್ರದರ್ಶನವಾಗಿತ್ತು. ಸುಮಾರು 1390 ಪ್ರದರ್ಶನಗಳಲ್ಲಿ ‘ಸಂಸಾರದಲ್ಲಿ ಸರಿಗಮ’ ನಾಟಕ ಕಂಡಿತ್ತು. ಇದೇ ಕಾರಣಕ್ಕೆ ವಿಜಿ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡು ಸರಿಗಮ ವಿಜಿ ಎಂದೇ ಜನಪ್ರಿಯರಾದರು.
ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದ ವಿಜಿ ಅವರು, ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ.
ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂ*ಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃ*ತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದರು. ಹಾಸ್ಯ ಪಾತ್ರಗಳಲ್ಲಿ ಸರಿಗಮ ವಿಜಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ತೆಲುಗು ವಿಜ್ಞಾನ ಸಮಿತಿ ನೀಡುವ ‘ಶ್ರೀ ಕೃಷ್ಣದೇವರಾಯ ಪುರಸ್ಕಾರ’, ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.
ಮಹಾಲಕ್ಷೀ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ನಾಳೆ ಬೆಳಿಗ್ಗೆ 10 ಗಂಟೆವರೆಗೆ ಪಾರ್ಥಿ*ವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆ ಅಂ*ತ್ಯಕ್ರಿಯೆ ನಡೆಯಲಿದೆ.