Wednesday, October 5, 2022

ಅವಿವಾಹಿತೆಗೂ ಗರ್ಭಪಾತದ ಅವಕಾಶ ಕಲ್ಪಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು..!

ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ.

ನವದೆಹಲಿ: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠವು, ಅವಿವಾಹಿತೆ ಪರೀಕ್ಷಿಸಲು ಇಬ್ಬರು ವೈದ್ಯರ ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸಲು ಏಮ್ಸ್‌ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ಎಂಟಿಪಿ ಕಾಯ್ದೆಯ ಸೆಕ್ಷನ್ 3(2)(ಡಿ) ಅಡಿಯಲ್ಲಿ ಮಂಡಳಿ ರಚಿಸಬೇಕು. ಆಕೆಯ ಜೀವಕ್ಕೆ ಅಪಾಯ ಆಗದಂತೆ ಗರ್ಭಪಾತ ಮಾಡಬೇಕು ಎಂದು ಆದೇಶಿಸಿತು.ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯು ಅವಿವಾಹಿತೆಯೂ ಒಳಗೊಳ್ಳುವಂತೆ ಪತಿಗೆ ಬದಲಾಗಿ ʼಪಾರ್ಟ್ನರ್‌ʼ ಎಂಬ ಪದ ಬಳಸಿದೆ ಎಂದು ಪೀಠವು ಹೇಳಿದೆ.

ಒಮ್ಮತದ ಸಂಬಂಧದಿಂದ ಗರ್ಭಧರಿಸಿದ್ದ 25 ವರ್ಷದ ಅವಿವಾಹಿತೆಯೊಬ್ಬರು ದೆಹಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತನಗೆ ಬೇಡವಾದ 24 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು.

ಆದರೆ ಜು.16 ಅನುಮತಿ ನಿರಾಕರಿಸಿ ಕೋರ್ಟ್‌ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವಿವಾಹಿತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, 20-24 ವಾರಗಳ ಭ್ರೂಣದ ಗರ್ಭಪಾತಕ್ಕೆ ವಿಧವೆ ಅಥವಾ ವಿಚ್ಛೇದಿತ ಮಹಿಳೆಗೂ ಅನುಮತಿಸಲಾಗಿದೆ.

ಆದರೆ ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅನಪೇಕ್ಷಿತ ದೃಷ್ಟಿಕೋನ ಹೊಂದಿದೆ ಎಂದು ಕೋರ್ಟ್‌ ಹೇಳಿತು. ಅಲ್ಲದೇ ಈ ಕಾನೂನು ನಿಯಮಗಳ ವ್ಯಾಖ್ಯಾನ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್ ಜಾರಿ ಮಾಡಿತು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...