9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!
Published
5 years agoon
By
Admin9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!
ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
2009ರಲ್ಲಿ ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪುರಾತನ ದೇಗುಲದಲ್ಲಿ ಅಗಾಧ ಪ್ರಮಾಣದ ಅತ್ಯಮೂಲ್ಯ ಸಂಪತ್ತು ಬಹಿರಂಗವಾಗಿತ್ತು.
ಅದಾದ ಬಳಿಕ ‘ಅನಂತ’ ಸಂಪತ್ತಿನ ದೇಗುಲ ಯಾರಿಗೆ ಸೇರಬೇಕು ಎಂಬುದು ವಿವಾದದ ಗೂಡಾಗಿತ್ತು. ಪದ್ಮನಾಭ ದೇವಸ್ಥಾನದ ನಿಧಿ ಕೋಣೆಗಳನ್ನು ತೆರೆಯಲು ಬಲವಾಗಿ ವಿರೋಧಿಸಿದವರಲ್ಲಿ ಟ್ರಾವಂಕೋರ್ ರಾಜಮನೆತನದವರು ಪ್ರಮುಖರು.
ರಾಜಮನೆತನದವರು ಈ ದೇವಸ್ಥಾನವನ್ನು ತಮ್ಮ ಖಾಸಗಿ ಸ್ವತ್ತೆಂಬಂತೆ ವರ್ತಿಸುತ್ತಿದ್ದಾರೆಂದು ಕೆಲ ವಲಯಗಳಲ್ಲಿ ಅಸಮಾಧಾನವಿತ್ತು.
1991ರಲ್ಲೇ ಟ್ರಾವಂಕೋರ್ನ ಕೊನೆಯ ರಾಜ ಸಾವನ್ನಪ್ಪಿದ್ದಾರೆ. ಈಗ ಅವರ ಕುಟುಂಬಸ್ಥರಿಗೆ ದೇವಸ್ಥಾನದ ನಿರ್ವಹಣೆ ಮುಂದುವರಿಸುವುದು ಸಮಂಜಸವಲ್ಲ.
ದೇವಸ್ಥಾನ ನಿರ್ವಹಣೆಗೆ ಮಂಡಳಿ ರಚಿಸಬೇಕೆಂದು ಕೆಲ ಭಕ್ತರು ಬೇಡಿಕೆ ಇಟ್ಟಿದ್ದರು.
ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದು, 9 ವರ್ಷಗಳ ಬಳಿಕ ಸುಪ್ರೀಂಕೋರ್ಟ್ ಟ್ರಾವಂಕೂರ್ ರಾಜಮನೆತದ ಪರವಾಗಿ ತೀರ್ಪು ಪ್ರಕಟಿಸಿದ್ದು, ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿಕೊಟ್ಟಿದೆ.
You may like
DAKSHINA KANNADA
ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್ಪಾಸ್ ಗೆ ಉರುಳಿದ ವಾಹನ; ಹಲವರಿಗೆ ಗಾಯ
Published
13 hours agoon
17/01/2025By
NEWS DESK3ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.
ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು
ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
DAKSHINA KANNADA
ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ
Published
13 hours agoon
17/01/2025By
NEWS DESK4ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.
ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.
FILM
ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ
Published
14 hours agoon
17/01/2025By
NEWS DESK3ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.
ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.
ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.
ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.
ಇದನ್ನೂ ಓದಿ: ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್
ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್ಕಂಫರ್ಟ್ ಫೀಲ್ ಮಾಡಿಕೊಂಡರಂತೆ.
ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.
LATEST NEWS
ಮೂರನೇ ದಾಖಲೆ ಬರೆದ ಉಡುಪಿಯ ಕಲಾವಿದ; ವರ್ಲ್ಡ್ ರೆಕಾರ್ಡ್ ಸೇರಿದ ಅಪೂರ್ವ ಕಲಾಕೃತಿ
ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್
ತಾವೇ ಮಾರಾಟ ಮಾಡಿದ್ದ ಬಸ್ಸನ್ನು ಕದ್ದು ತಂದು ಸಿಕ್ಕಿ ಬಿದ್ದ ಅಪ್ಪ -ಮಗ!
ಉಳ್ಳಾಲ : ಬಂದೂಕು ತೋರಿಸಿ ಬ್ಯಾಂಕ್ ದರೋಡೆ; ನಗ, ನಗದು ದೋಚಿ ಪರಾರಿಯಾದ ಖದೀಮರು
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಲ್ಲಿ ಡಬಲ್ ಧಮಾಕ
ದ.ಕ : ಪ್ರತ್ಯೇಕ ಅಪ*ಘಾತ ಪ್ರಕರಣ; ಇಬ್ಬರು ಬೈಕ್ ಸವಾರರು ಸಾ*ವು
Trending
- BIG BOSS7 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- BIG BOSS5 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS4 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS4 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?