Connect with us

LATEST NEWS

ಆರ್ಟಿಕಲ್ 370 ರದ್ದತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

Published

on

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಸೋಮವಾರ ತೀರ್ಪು ಪ್ರಕಟಿಸಿತು. ಆರ್ಟಿಕಲ್‌ 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರ ‘ದುರುದ್ದೇಶಪೂರಿತ’ ಎಂಬುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು. ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ಕೇಂದ್ರವು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 23 ಅರ್ಜಿಗಳ ಮೇಲೆ ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ತನ್ನ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿತು. ರಾಷ್ಟ್ರಪತಿ ಆಳ್ವಿಕೆ ಸಮಯದಲ್ಲಿ ಕೇಂದ್ರದಿಂದ ಯಾವುದೇ ಬದಲಾಯಿಸಲಾಗದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಅರ್ಜಿದಾರರ ವಾದವನ್ನೂ ಈ ಸಂದರ್ಭದಲ್ಲಿ ಸಿಜೆಐ ತಿರಸ್ಕರಿಸಿದರು.

”ರಾಷ್ಟ್ರಪತಿ ಆಳ್ವಿಕೆ ಸಂದರ್ಭದಲ್ಲಿ ರಾಜ್ಯದ ಪರವಾಗಿ ಕೇಂದ್ರವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ” ಎಂದು ಸಿಜೆಐ ಚಂದ್ರಚೂಡ್ ತಮ್ಮ ತೀರ್ಪನ್ನು ಓದುವಾಗ ಹೇಳಿದರು. 370 ನೇ ವಿಧಿಯು ತಾತ್ಕಾಲಿಕ ನಿಬಂಧನೆಯಾಗಿದೆ ಎಂದು ಬಣ್ಣಿಸಿದರು. “ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯ ವಿಸರ್ಜನೆಯ ನಂತರವೂ ಆರ್ಟಿಕಲ್ 370 ಅಸ್ತಿತ್ವದಲ್ಲಿಲ್ಲ ಎಂದು ಅಧಿಸೂಚನೆಯನ್ನು ಹೊರಡಿಸಲು ಆರ್ಟಿಕಲ್ 370 (3) ರ ಅಡಿಯಲ್ಲಿ ರಾಷ್ಟ್ರಪತಿಗಳ ಅಧಿಕಾರವು ಅಸ್ತಿತ್ವದಲ್ಲಿದೆ” ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು, ಸಂವಿಧಾನ ಸಭೆಯ ಶಿಫಾರಸು ರಾಷ್ಟ್ರಪತಿಗಳ ಮೇಲೆ ಬದ್ಧವಾಗಿಲ್ಲ. ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯು ತಾತ್ಕಾಲಿಕ ಸಂಸ್ಥೆಯಾಗಿದೆ ಎಂದು ಅವರು ಹೇಳಿದರು. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯವನ್ನಾಗಿ ಆದಷ್ಟು ಬೇಗ ಮರುಸ್ಥಾಪನೆ ಮಾಡಬೇಕೆಂದು ಸೂಚಿಸಿದರು. ಜಮ್ಮು-ಕಾಶ್ಮೀರ ರಾಜ್ಯವು ಸಾರ್ವಭೌಮತ್ವದ ಯಾವುದೇ ಅಂಶವನ್ನು ಉಳಿಸಿಕೊಂಡಿಲ್ಲ. ಇದು ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ. 370 ನೇ ವಿಧಿ ಅಸಮ್ಮಿತ ಸಂಯುಕ್ತ ವ್ಯವಸ್ಥೆಯ ಲಕ್ಷಣವಾಗಿದೆ ಮತ್ತು ಸಾರ್ವಭೌಮತ್ವವಲ್ಲ”ಎಂದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

DAKSHINA KANNADA

ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ

Published

on

ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.

3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.


ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.


ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Continue Reading

LATEST NEWS

Trending