ಮಂಗಳೂರು : ಮಂಗಳೂರು ಹೊವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಇತ್ತೀಚೆಗೆ ಹತ್ಯೆಯಾಗಿದ್ದ ಫಾಝಿಲ್ ಸಹೋದರ ಸಂಚರಿಸುತ್ತಿದ್ದ ವಾಹನ ಮತ್ತು ಇನ್ನೊಂದು ವಾಹನ ಪರಸ್ಪರ ತಾಗಿದ್ದರಿಂದ ಇತ್ತಂಡಗಳ ನಡುವೆ ಮಾತಿನ ಚಕಮಕಿ ಉಂಟಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.