Thursday, March 23, 2023

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.

ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.

ಈ ಬಗ್ಗೆ ಉದಯಕುಮಾರ್ ಎಂಬವರು ನೀಡಿದ ದೂರಿನ ಮೇರೆಗೆ ಹರ್ಷಿತ್ ಎಂಬಾತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರ್ಷಿತ್ ಎಂಬಾತ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿದ್ದ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ ನಾನು ಪಾಝಿಲ್ ಕೊಲೆ ಆರೋಪಿ ಆಗಿದ್ದು, ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ.

ನನಗೆ ಧನ ಸಹಾಯ ನೀಡಬೇಕು ಎಂದು ವಿನಂತಿಸಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದರು ಎಂದು ತಿಳಿದು ಬಂದಿದೆ.

ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ.

ಇದಕ್ಕೆ ಉದಯ್ ರವರು ಒಪ್ಪದ ಕಾರಣ ಹರ್ಷಿತ್ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...