DAKSHINA KANNADA
ಸುರತ್ಕಲ್ ಟೋಲ್ ಬೂತ್ ಅವಶೇಷ ತೆರವುಗೊಳಿಸದಿದ್ದರೆ ಸರಣಿ ಪ್ರತಿಭಟನೆ- ಮುನೀರ್ ಕಾಟಿಪಳ್ಳ
ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಟೋಲ್ ಗೇಟ್ ಹಲವು ವರ್ಷಗಳ ಸುಧೀರ್ಘ ಹೋರಾಟದ ಬಳಿಕ ಇದೀಗ ಶಾಶ್ವತವಾಗಿ ಮುಚ್ಚಲ್ಪಟ್ಟಿದೆ.
ಸುರತ್ಕಲ್: ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಟೋಲ್ ಗೇಟ್ ಹಲವು ವರ್ಷಗಳ ಸುಧೀರ್ಘ ಹೋರಾಟದ ಬಳಿಕ ಇದೀಗ ಶಾಶ್ವತವಾಗಿ ಮುಚ್ಚಲ್ಪಟ್ಟಿದೆ.
ಆದ್ರೆ ಟೋಲ್ ಬೂತ್ ಅವಶೇಷಗಳು ಮಾತ್ರ ಇನ್ನೂ ಹೆದ್ದಾರಿಯಲ್ಲೇ ಉಳಿದುಕೊಂಡಿದ್ದು ಅಪಘಾತಗಳಿಗೆ ಆಹ್ವಾನ ಕೊಡುತ್ತಿದೆ.
ಕಳೆದ ಏಳೆಂಟು ತಿಂಗಳುಗಳಿಂದ ಅನಾಥವಾಗಿರುವ ಟೋಲ್ ನ ಅವಶೇಷಗಳು ಹೆದ್ದಾರಿಯ ಮಧ್ಯದಲ್ಲೇ ಇರುವ ಕಾರಣ ಅನೇಕ ವಾಹನ ಅಪಘಾತಗಳಿಗೆ ಕಾರಣವಾಗಿದೆ.
ಅಲ್ಲದೆ ಈ ಭಾಗದಲ್ಲಿ ಸರಾಗವಾಗಿ ವಾಹನಗಳ ಸಂಚಾರ ಮಾಡುವುದಕ್ಕೂ ತೊಂದರೆ ಉಂಟಾಗಿದೆ.
ಅಕ್ಕಪಕ್ಕದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಉಪಯೋಗವಿಲ್ಲದೆ ಪಾಳುಬಿದ್ದಿರುವ ನಿರುಪಯೋಗಿ ಟೋಲ್ ಬೂತ್ ಈಗ ಜೀರ್ಣಾವಸ್ಥೆಗೆ ತಲುಪಿದ್ದು ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನ ಸವಾರರ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಬೂತ್ ನ ಛಾವಣಿ, ಬೋರ್ಡ್ ಗಳು ಕಳಚಿ ಬೀಳುವ ರೀತಿ ಅಪಾಯಕಾರಿಯಾಗಿ ನೇತಾಡುತ್ತಿವೆ.
ರಾತ್ರಿ ಕಾಲದ ಪ್ರಯಾಣವಂತೂ ಟೋಲ್ ಬೂತ್ ನ ಪರಿಸರ ಅಪಘಾತಕ್ಕೆ ಆಹ್ವಾನಿಸುವಂತಿದೆ.
ಆದ್ದರಿಂದ ಅಮಾಯಕ ಜೀವಗಳು ಬಲಿಯಾಗುವ ಮುನ್ನ ಈ ಅನಾಥ ಟೋಲ್ ಬೂತಿನ ಅವಶೇಷಗಳಿಗೆ ಮುಕ್ತಿ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಕ್ಷಣವೇ ನಿರುಪಯೋಗಿ ಟೋಲ್ ಬೂತ್ ತೆರವು, ಹೆದ್ದಾರಿ ಗುಂಡಿಗಳನ್ನು ಮುಚ್ಚಲು ಪ್ರಾಧಿಕಾರ ಮುಂದಾಗದಿದ್ದಲ್ಲಿ ಜನಪರ ಸಂಘಟನೆಗಳನ್ನು ಜೊತೆ ಸೇರಿಸಿ ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಸಿದ್ದಾರೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ