Sunday, November 27, 2022

ಸುರತ್ಕಲ್‌ ಟೋಲ್‌ಗೇಟ್‌ ಹೆಜಮಾಡಿ ಟೋಲ್‌ ಜೊತೆ ವಿಲೀನ-ಟೋಲ್ ದರ ಇನ್ನೂ ದುಬಾರಿ…!

ಮಂಗಳೂರು: ಭಾರಿ ಹೋರಾಟ, ನಿರಂತರ ಪ್ರತಿಭಟನೆಗೆ ಕಾರಣವಾಗಿರುವ ಮಂಗಳೂರು ಹೊರವಲಯದ ಸುರತ್ಕಲ್‌ ಎನ್‌ಐಟಿಕೆ ಸಮೀಪದ ಟೋಲ್‌ಗೇಟ್‌ನ್ನು ಕೊನೆಗೂ ಹೆಜಮಾಡಿ ಟೋಲ್‌ ಪ್ಲಾಝಾ ಜತೆ ವಿಲೀನಗೊಳಿಸಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ.


ಡಿಸೆಂಬರ್‌ 1ರಿಂದ ಈ ಆದೇಶ ಕಾರ್ಯರೂಪಕ್ಕೆ ಬರಲಿದ್ದು, ಟೋಲ್‌ ದರ ಹೆಚ್ಚಾಗಿದೆ. ಟೋಲ್‌ ಸಂಗ್ರಹ ಸಂದರ್ಭ ಕಾನೂನು ಸುವ್ಯವಸ್ಥೆಗೆ ತೊಡಕಾಗದಂತೆ ನೋಡಿಕೊಳ್ಳಬೇಕು ಎಂದು ಉಡುಪಿ ಡಿಸಿಗೆ ಪ್ರಾಧಿಕಾರ ಸೂಚನೆ ನೀಡಿದೆ.

ಟೋಲ್‌ ವಿಲೀನ ಕುರಿತು ಹೆದ್ದಾರಿ ಪ್ರಾಧಿಕಾರ ಗುರುವಾರ ಉಡುಪಿ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದು, ಡಿಸೆಂಬರ್‌ 1ರಿಂದ ಅನ್ವಯವಾಗುವಂತೆ ಮುಕ್ಕ ಟೋಲ್‌ ವಿಲೀನಗೊಂಡಿದ್ದು, ಇದರಿಂದ ನಿರೀಕ್ಷೆಯಂತೆ ಹೆಜಮಾಡಿಯಲ್ಲಿ ಟೋಲ್‌ ಮೊತ್ತ ದುಬಾರಿಯಾಗಲಿದೆ.

ಸುರತ್ಕಲ್‌-ಬಿಸಿ ರೋಡ್‌ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಸಿದ್ದ ಇರ್ಕಾನ್‌ ಪರವಾಗಿ ಹೆದ್ದಾರಿ ಪ್ರಾಧಿಕಾರ ಸುರತ್ಕಲ್‌ನಲ್ಲಿ ಅಳವಡಿಸಿದ್ದ ಎನ್‌ಎಂಪಿ ರೋಡ್‌ ಕನೆಕ್ಟಿವಿಟಿ ರಸ್ತೆಯ ಟೋಲ್‌ ಸಂಗ್ರಹವನ್ನು ಹೆಜಮಾಡಿ ನವಯುಗದ ಕಂಪನಿಯ ಟೋಲ್‌ಗೇಟ್‌ ಜತೆ ವಿಲೀನಗೊಳಿಸಲಾಗಿದೆ.

ಸುರತ್ಕಲ್‌ನ ಸುಂಕ ದರವನ್ನೂ ಹೆಜಮಾಡಿ ಜತೆ ಸೇರ್ಪಡೆ ಮಾಡಲಾಗಿದೆ ಎಂದು ಪತ್ರದಲ್ಲಿ ತಿಳಿಸಿದೆ.ಟೋಲ್‌ ಸಂಗ್ರಹ ಸಂದರ್ಭ ಕಾನೂನು ಸುವ್ಯವಸ್ಥೆಗೆ ತೊಡಕಾಗದಂತೆ ನೋಡಿಕೊಳ್ಳಬೇಕು.

ಒಂದು ವೇಳೆ ಹೆಜಮಾಡಿಯಲ್ಲಿ ವಿಲೀನದ ಬಳಿಕ ಏರಿಕೆಯಾದ ಸುಂಕ ದರಗಳ ಬಳಿಕ ಟೋಲ್‌ ಸಂಗ್ರಹದಲ್ಲಿ ವ್ಯತ್ಯಯ ಉಂಟಾದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜತೆಗಿನ ರಾಜ್ಯ ಸರಕಾರದ ಒಪ್ಪಂದದಂತೆ ನಷ್ಟವನ್ನು ರಾಜ್ಯ ಸರಕಾರ ಭರಿಸಬೇಕಾಗುತ್ತದೆ.

ಉಡುಪಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಾಯ, ನೆರವು, ಪೊಲೀಸ್‌ ಭದ್ರತೆ ಒದಗಿಸಬೇಕು. ಇದು ಡಿಸೆಂಬರ್‌ 1ರ ಮಧ್ಯರಾತ್ರಿಯಿಂದಲೇ ಚಾಲ್ತಿಗೆ ಬರಲಿದೆ ಎಂದು ಉಡುಪಿ ಜಿಲ್ಲಾಡಳಿತಕ್ಕೆ ಬರೆದ ಪತ್ರದಲ್ಲಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಎಚ್‌ಎಸ್‌ ಲಿಂಗೇಗೌಡ ತಿಳಿಸಿದ್ದಾರೆ.

ಸುರತ್ಕಲ್‌ ಟೋಲ್‌ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸುಲಿಗೆ ನಡೆಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಇದು ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ ಎಂದು ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿದ್ದಾರೆ.

ಟೋಲ್‌ ವಿಲೀನಗೊಳಿಸಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಪತ್ರ ಬರೆದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಜನವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಹಾಗಾದರೆ ಏಳು ವರ್ಷ ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂ.ಗೆ ಬೆಲೆಯೇ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...