Connect with us

    DAKSHINA KANNADA

    ಏನಾಶ್ಚರ್ಯ!! ನಾಗರ ಹಾವು ಕಡಿದು ಮಹಿಳೆ ಸಾ*ವು; ಅಂತ್ಯಸಂಸ್ಕಾರದ ವಿಧಿಗೆ ಬಂದು ನೀರು ಕುಡಿದು ಹೋದ ನಾಗರಹಾವು

    Published

    on

    ಮಂಜೇಶ್ವರ : ಜಗತ್ತಿನಲ್ಲಿ ಆಶ್ಚರ್ಯಕರ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಮಂಜೇಶ್ವರದಲ್ಲಿ ವಿಚಿತ್ರ ಘಟನೆಯೊಂದು ಸಂಭವಿಸಿದೆ. ಮಂಜೇಶ್ವರ ತಾಲೂಕಿನ ಕುರುಡುಪದವಿನಲ್ಲಿ ನಾಗರ ಹಾವು ಕಡಿತಕ್ಕೊಳಗಾಗಿ ಮಹಿಳೆಯೋರ್ವರು ಮೃ*ತಪಟ್ಟಿದ್ದರು. ಚೋಮು ಎಂಬವರು ಮೃ*ತಪಟ್ಟ ಮಹಿಳೆ. ಆದ್ರೆ ಇಲ್ಲಿ ಅಚ್ಚರಿಯೊಂದು ನಡೆದಿದೆ.

    ಹೌದು, ಅಂ*ತ್ಯಸಂಸ್ಕಾರದ ವಿಧಿಯ ಕೊನೆಯ ಭಾಗದಲ್ಲಿ ನೀರು ಇಡುವ ಸಂಪ್ರದಾಯ ನಡೆದಿತ್ತು. ವಿಸ್ಮಯವೆಂದರೆ, ಈ ಸಂಪ್ರದಾಯದ ಸಂದರ್ಭದಲ್ಲಿ ಆಗಮಿಸಿದ ನಾಗರ ಹಾವು ಚೊಂಬಿನಲ್ಲಿಟ್ಟಿದ್ದ ನೀರನ್ನು ಕುಡಿದು ತೆರಳಿದೆ. ಮಹಿಳೆಯ ಸಾವಿಗೆ ಕಾರಣವಾದ ನಾಗರ ಹಾವು ಆಕೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದಾರೆ.

    ಅಂತ್ಯಸಂಸ್ಕಾರದ ವಿಧಿ ಕಳೆದ ಮೇಲೆ ಮನೆ ಚಾವಡಿಯಲ್ಲಿ ನೀರು ಇಡುವ ಸಂಪ್ರದಾಯ ಇದೆ. ಅದರಂತೆ ಮನೆ ಚಾವಡಿಯಲ್ಲಿ ಬೂದಿ ಹರಡಿ ಅದರ ನಡುವಿನಲ್ಲಿ ಚೊಂಬುವೊಂದರಲ್ಲಿ ನೀರು ಇಡಲಾಗಿತ್ತು. ಮನೆ ಹಿಂಬದಿ ಬಾಗಿಲು ಭದ್ರ ಪಡಿಸಲಾಗಿತ್ತು. ಮುಂಬಾಗಿಲಿನಲ್ಲಿ ನಾಲ್ಕು ಮಂದಿ ಜನ ಮಲಗಿದ್ದರು. ಆದರೂ ನಾಗರ ಹಾವು ಬಂದು ಚೊಂಬಿನಲ್ಲಿದ್ದ ನೀರನ್ನು ಕುಡಿದು ತೆರಳಿದೆಯಂತೆ. ಹಾವು ಬಂದಿರುವುದಕ್ಕೆ ಸಾಕ್ಷಿ ಎಂಬಂತೆ ಬೂದಿ ಮೇಲೆ ಹರಡಿರುವ ಹಾವಿನ ಗುರುತನ್ನು ತೋರಿಸುತ್ತಾರೆ ಮನೆಯವರು.

    ಇದನ್ನೂ ಓದಿ :  ಭೂಮಿಗೆ ಕಾದಿದೆ ಅಪಾಯ..! ವಿಜ್ಞಾನಿಗಳಿಂದ ಅಧ್ಯಯನ

    ಇದಕ್ಕೂ ಮಿಗಿಲಾದ ವಿಷಯವೇನೆಂದರೆ, ಚೋಮು ಅವರ ಸಾವಿಗೆ ಕಾರಣವಾದ ನಾಗರ ಹಾವನ್ನು ಹಾವು ಹಿಡಿಯುವವರು ಬಂದು ಹಿಡಿದುಕೊಂಡು ಕೊಂಡೊಯ್ದಿದ್ದರು. ಹಾಗಾದರೆ ನೀರು ಕುಡಿಯಲು ಬಂದ ಹಾವು ಯಾವುದು ಎನ್ನುವುದೇ ದೊಡ್ಡ ಪ್ರಶ್ನೆ. ಅದೇನಿದ್ದರೂ, ಸರಳ ಸಜ್ಜನಿಕೆಯ ಚೋಮು ಅವರ ಸಾವಿಗೆ ಜನರು ಮರುಕ ವ್ಯಕ್ತಪಡಿಸುತ್ತಿದ್ದಾರೆ.

    DAKSHINA KANNADA

    ಕಡಬ : ಕಾರು – ಬೈಕ್ ನಡುವೆ ಅಪಘಾ*ತ; ಸವಾರ ಸಾ*ವು

    Published

    on

    ಕಡಬ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃ*ತಪಟ್ಟಿರುವ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಹಳೆ ಸ್ಟೇಷನ್ ನಿವಾಸಿ, ಕಡಬ ಸಿ.ಎ. ಬ್ಯಾಂಕ್ ಮಾಜಿ ಉದ್ಯೋಗಿ ಹಸೈನಾರ್(57) ಮೃ*ತ ಬೈಕ್ ಸವಾರ.

    ಹಸೈನಾರ್ ತನ್ನ ಮನೆಯಿಂದ ಕಡಬ ಕಡೆಗೆ ಸಾಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀ*ರ ಗಾ*ಯಗೊಂಡ ಹಸೈನಾರ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.

    ಇದನ್ನೂ ಓದಿ : 200 ಅಡಿ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್; 30 ಕ್ಕೂ ಅಧಿಕ ಮಂದಿ ಸಾವು

    ಅಪಘಾ*ತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ವೊಂದರ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

     

     

    Continue Reading

    BANTWAL

    ಅಕ್ರಮ ಮರಳು ಅಡ್ಡೆಗೆ ದಾಳಿ; 20 ಬೋಟ್ ವಶಕ್ಕೆ

    Published

    on

    ಬಂಟ್ವಾಳ: ತುಂಬೆ, ಮಾರಿಪಳ್ಳ ಭಾಗದ ನೇತ್ರಾವತಿ ನದಿಯಲ್ಲಿ ದೋಣಿ ಮೂಲಕ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಶುಕ್ರವಾರ ದ.ಕ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ದ.ಕ ಜಿಲ್ಲಾಧಿಕಾಗಳ ಆದೇಶದಂತೆ 20 ಬೋಟ್‌ಗಳನ್ನು ವಶಪಡಿಸಿಕೊಂಡಿದ್ದರು. ಅಧಿಕಾರಿಗಳ ದಾಳಿಯ ವೇಳೆ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರು ಪಲಾಯನಗೈದಿದ್ದಾರೆಂದು ವರದಿಯಾಗಿದೆ.


    ದೋಣಿಗಳನ್ನು 4ರಂತೆ ಜೋಡಸಿಕೊಂಡು 5 ತಂಡಗಳ ಮೂಲಕ ನದಿಯಲ್ಲೇ ಮಂಗಳೂರಿನ ಅಡ್ಯಾರ್‌ವರೆಗೆ ಸಾಗಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಬೋಟ್‌ನಲ್ಲಿ ಯಾವುದೇ ರೀತಿಯ ಮರಳು ಪತ್ತೆಯಾಗಿಲ್ಲ. ಮರಳುಗಾರಿಕೆಲ್ಲಿ ತೊಡಗಿದ್ದವರು ಯಾರು, ಬೋಟ್‌ಗಳು ಯಾರಿಗೆ ಸಂಬಂಧಟ್ಟದ್ದು ಎಂಬುವುದರ ಕುರಿತು ಅಧಿಕಾರಿಗಳ ತನಿಖೆಯ ಬಳಿಕ ತಿಳಿದುಬರಬೇಕಷ್ಟೇ.
    ಸಾಕಷ್ಟು ಸಮಯದಿಮದ ಕೇಳಿ ಬರುತ್ತಿದ್ದ ಆರೋಪ:
    ದೋಣಿಗಳ ಸಹಾಯದಿಂದ ನದಿಯಲ್ಲಿ ಉತ್ತರ ಭಾರತದ ಕಾರ್ಮಿಕರನ್ನು ಬಳಸಿಕೊಂಡು ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಅರೋಪ ಸಾಕಷ್ಟು ಸಮಯದಿಂದ ಕೇಳಿ ಬರುತ್ತಿದ್ದವು. ಈ ಹಿನನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ದಾಳಿ ನಡೆಸಿ ಆಕ್ರಮವನ್ನು ಮಟ್ಟ ಹಾಕುವಂತೆ ಗಣಿ ಇಲಾಖೆಗೆ ಆದೇಶವನ್ನು ನೀಡಿದ್ದರು.
    ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ. ಭಟ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಹಿರಿಯ ಭೂ ವಿಜ್ಞಾನಿ ಗಿರಿಶ್ ಮೋಹನ್, ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ಧನ್ ಜೆ., ಗ್ರಾಮಕರಣಿಕರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

    Continue Reading

    DAKSHINA KANNADA

    ಕುಳಾಯಿ : ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಅಂಚೆ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ: ಹರೀಶ್ ಕೆ ಪೂಜಾರಿ

    Published

    on

    ಕುಳಾಯಿ :ಮಹಿಳಾ ಮಂಡಲ (ರಿ.) ಕುಳಾಯಿ ಮತ್ತು ಯುವವಾಹಿನಿ(ರಿ. )ಪಣಂಬೂರು-ಕುಳಾಯಿ ಘಟಕದ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ ಇದರ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಆಧಾರ್ ನೋಂದಣಿ ಹಾಗೂ ತಿದ್ದುಪಡಿ,ಪಾನ್ ಕಾರ್ಡ್, ಪಾಸ್ ಪೊರ್ಟ್, ಅಪಘಾತ ವಿಮಾ ಹಾಗೂ ಅಂಚೆ ಉಳಿತಾಯ ಯೋಜನೆಯ ಶಿಬಿರವು ಮಹಿಳಾ ಮಂಡಲ ಕುಳಾಯಿ ಇದರ ಸಭಾಂಗಣದಲ್ಲಿ 2.10.2024ರಂದು ಬುಧವಾರ ಜರಗಿತು.


    ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ ಪೂಜಾರಿ ದೀಪ ಬೆಳಗಿಸಿ ನೆರವೇರಿಸಿದರು. ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಪ್ರಯುಕ್ತ, ಕುಳಾಯಿ ಪರಿಸರದ ಜನರಿಗೆ ಅಂಚೆ ಇಲಾಖೆಯಿಂದ ದೊರೆಯುವ ಸೌಲಭ್ಯವನ್ನು ಆಯೋಜಿಸಿದ್ದು, ಕುಳಾಯಿ ವ್ಯಾಪ್ತಿಯ ಎಲ್ಲರಿಗೂ ಇದರ ಪ್ರಯೋಜನ ಸಿಗುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾದ ಪಿ ಸಂತೋಷ್ ಐತಾಳ್ ವಕೀಲರು ಈ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ, ಕಾರ್ಯಕ್ರಮದ ಬಗ್ಗೆ ತಾನೇ ರಚಿಸಿದ ಕವನವನ್ನು ರಚಿಸಿ ಹಾಡುವ ಮೂಲಕ ಶುಭ ಹಾರೈಸಿದರು. ಹಿರಿಯ ಅಂಚೆ ಅಧೀಕ್ಷಕರಾದ ಶ್ರೀ ಎಂ ಸುಧಾಕರ ಮಲ್ಯ ಅಂಚೆ ಇಲಾಖೆಯಿಂದ ದೊರೆಯುವ ಸೇವೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮಂಡಲ ಕುಳಾಯಿ ಇದರ ಅಧ್ಯಕ್ಷೆ ಶ್ರೀಮತಿ ರೇವತಿ ನವೀನ್ ವಹಿಸಿ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಕುಳಾಯಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾದ ಶೇಖರ್ ದೇವಾಡಿಗ, ಉತ್ತರ ಉಪ ವಿಭಾಗದ ಅಂಚೆ ನಿರೀಕ್ಷಕರಾದ ಪ್ರದೀಪ್ ಭಂಡಾರಿ, ಕಾರ್ಯಕ್ರಮದ ಸಂಚಾಲಕಿ ಶ್ರೀಮತಿ ಯಶಸ್ವಿನಿ,ಮಹಿಳಾ ಮಂಡಲದ ಕಾರ್ಯದರ್ಶಿ ಕುಮಾರಿ ವಾಣಿ ಉಪಸ್ಥಿತರಿದ್ದರು.ಕುಳಾಯಿ ವ್ಯಾಪ್ತಿಯ 200 ಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.


    ಕಾರ್ಯಕ್ರಮವನ್ನು ಯುವವಾಹಿನಿ(ರಿ) ಪಣಂಬೂರು-ಕುಳಾಯಿ ಘಟಕದ ಮಾಜಿ ಅಧ್ಯಕ್ಷರುಗಳಾದ ಸುರೇಶ್ ಪೂಜಾರಿ ಸಂಯೋಜಿಸಿ, ಸಂಜೀವ ಸುವರ್ಣ ಮತ್ತು ರಾಜೇಶ್ವರಿ ನಿರೂಪಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಮನಿಷಾ ರೂಪೇಶ್ ವಂದಿಸಿದರು.

    Continue Reading

    LATEST NEWS

    Trending