Connect with us

    DAKSHINA KANNADA

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಮಾ*ದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿ ಬಂಧನ

    Published

    on

    ಮಂಗಳೂರು :  ‘ಡ್ರ*ಗ್ಸ್ ಫ್ರಿ ಮಂಗಳೂರು’ ಅಭಿಯಾನದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಗೋವಾದಿಂದ ಮಂಗಳೂರಿಗೆ ಮತ್ತು ಕೇರಳಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ದಸ್ತಗಿರಿ ಮಾಡಿದ್ದಾರೆ. ಆತನಿಂದ 73 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂ*ಜಾ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಕೇರಳದ ಕೋಝಿಕೋಡ್‌ ಜಿಲ್ಲೆಯ ಕಂದಲಾಡ್‌ ಗ್ರಾಮದ ಕುನ್ನು ಹೌಸ್‌ ನಿವಾಸಿ ಶಮೀರ್‌ ಪಿ.ಕೆ. ಬಂಧಿತ  ಆರೋಪಿ. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಬಪ್ಪನಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರೊಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ ಹೈಡ್ರೋವಿಡ್‌ ಗಾಂ*ಜಾ ಪತ್ತೆಯಾಗಿದೆ.

    ಆರೋಪಿಯಿಂದ 73 ಲಕ್ಷ ರೂಪಾಯಿ ಮೌಲ್ಯದ 738 ಗ್ರಾಂ ಹೈಡ್ರೋವಿಡ್ ಗಾಂ*ಜಾ, ಕೇರಳ ನೋಂದಣಿಯ ಕೆಂಪು ಬಣ್ಣದ ಹುಂಡೈ ಕಂಪೆನಿಯ ಕಾರು ಮತ್ತು ಮೊಬೈಲ್ ಫೋನ್ ಸೇರಿದಂತೆ ಒಟ್ಟು 80,10,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೈಡ್ರೋವಿಡ್ ಗಾಂ*ಜಾವನ್ನು ವಿದೇಶದಿಂದ ತಂದಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

    ಇದನ್ನೂ ಓದಿ : ದರ್ಶನಕ್ಕೆ ಪಾಸ್‌ ಸಿಗದಿದ್ದಕ್ಕೆ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!

    ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್ ಎಂ., ಪಿಎಸ್ಐ  ಶರಣಪ್ಪ ಭಂಡಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

    DAKSHINA KANNADA

    ವೆನ್ಲಾಕ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ; ಸಾ*ವಿನಲ್ಲೂ ಸಾರ್ಥಕತೆ ಮೆರೆದ ಶಿವಮೊಗ್ಗದ ಮಹಿಳೆ

    Published

    on

    ಮಂಗಳೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ  ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಿತು.

    ಮೈಸೂರಿನ ಅಪೋಲೋ ಆಸ್ಪತ್ರೆಗೆ ರೇಖಾ ಯಕೃತ್, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಣ್ಣುಗಳ ಕಾರ್ನಿಯಾವನ್ನು  ಝೀರೋ ಟ್ರಾಫಿಕ್ ಮೂಲಕ ಕೊಂಡೊಯ್ಯಲಾಯಿತು.

    ಶಿವಮೊಗ್ಗ ರಾಗಿಗುಡ್ಡ ನಿವಾಸಿ,  ರೇಖಾ (41) ಅಂಗಾಂಗ ದಾನ ಮಾಡಿರುವ ಮಹಿಳೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೇಖಾ ಅಸ್ವಸ್ಥಗೊಂಡಿದ್ದರು. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಜ.6 ರಂದು ದಾಖಲಿಸಲಾಗಿತ್ತು. ಆದರೆ, ಬ್ರೈನ್ ಡೆಡ್ ಆದ ಹಿನ್ನೆಲೆ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದರು.

    ಇದನ್ನೂ ಓದಿ : ದಂಪತಿ ಹಾಗೂ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಶ*ವ ಪತ್ತೆ!

    ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿರೋದು ವಿಶೇಷ.

    Continue Reading

    DAKSHINA KANNADA

    ಮಂಗಳೂರು : ತಣ್ಣೀರು ಬಾವಿ ಬೀಚ್ ಪ್ರವಾಸಿಗರಿಗೆ ವಿಶೇಷ ಸೌಲಭ್ಯಗಳು

    Published

    on

    ಮಂಗಳೂರು : ನಗರದ ತಣ್ಣೀರು ಬಾವಿ ಬೀಚ್‌ ಅಭಿವೃದ್ಧಿ ಕೆಲಸಗಳು ‘ಒನ್ ನೇಷನ್ ಒನ್ ಡೆಸ್ಟಿನೇಷನ್’ ಯೋಜನೆಯಡಿ ಪೂರ್ಣಗೊಳಿಸಲಾಗಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ತಣ್ಣೀರು ಬಾವಿ ಬೀಚ್‌ನಲ್ಲಿ 7.59 ಕೋಟಿ ರೂ. ಅನುದಾನವನ್ನು ವಿವಿಧ ಕಾಮಗಾರಿಗೆ ನೀಡಿತ್ತು. ಅಂತೆಯೇ ಪುಣೆ ಮೂಲದ ಬಿವಿಜಿ ಇಂಡಿಯಾ ಲಿಮಿಟೆಡ್‌ ಎಂಬ ಕಂಪನಿಯು 7.56 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು, ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಹಿಲನ್ ಈ ಕುರಿತು ಮಾಹಿತಿ ನೀಡಿದ್ದಾರೆ.

    ಲಭ್ಯವಿರುವ ಸೌಲಭ್ಯಗಳ ಪಟ್ಟಿ :

    ತಣ್ಣೀರು ಬಾವಿ ಬೀಚ್‌ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಬೀಚ್‌ಗೆ ಬರುವ ಪ್ರವಾಸಿಗರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಗದಿ ಮಾಡುವ ಪ್ರವೇಶ ಶುಲ್ಕವನ್ನು ವಸೂಲಿ ಮಾಡುವ ಅವಕಾಶವನ್ನು ಟೆಂಡರ್ ಪಡೆದವರಿಗೆ ನೀಡಲಾಗುತ್ತದೆ. ಸದ್ಯ ಬೀಚ್ ನಿರ್ವಹಣೆ ಮಾಡುವ ಗುತ್ತಿಗೆ ಅವಧಿ ಅಂತ್ಯವಾಗಿದೆ. ಆದ್ದರಿಂದ ಹೊಸ ಟೆಂಡರ್ ಆಹ್ವಾನಿಸಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇಷ್ಟು ದಿನ ತಣ್ಣೀರು ಬಾವಿ ಬೀಚ್‌ಗೆ ತೆರಳುವ ಪ್ರವಾಸಿಗರಿಗೆ ಮರ ಗಿಡಗಳ ಉದ್ಯಾನವನ ಪ್ರಮುಖ ಆಕರ್ಷಣೆಯಾಗಿತ್ತು. ಸಸಿಹಿತ್ಲು, ಪಣಂಬೂರು ಬೀಚ್‌ಗೆ ಹೋಲಿಕೆ ಮಾಡಿದರೆ ಇಲ್ಲಿ ಹೆಚ್ಚಿನ ಆಕರ್ಷಣೆಗಳು, ಸೌಲಭ್ಯಗಳು ಇಲ್ಲ ಎಂಬ ಆರೋಪವಿತ್ತು. ಆದ್ದರಿಂದ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಬೇಕಾದ ಸೌಲಭ್ಯಗಳನ್ನು ಕೈಗೊಳ್ಳಲಾಗಿದೆ.

    ಬೀಚ್ ಆವರಣದಲ್ಲಿ ಆಹಾರ ಮಳಿಗೆಗಳು, ಸಮುದ್ರ ವೀಕ್ಷಣೆ ಮಾಡಲು ಫ್ರೇಮ್ ಮುಂತಾದ ಕಾಮಗಾರಿಗಳನ್ನು ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಡಿ ಮಾಡಲಾಗುತ್ತಿದೆ. ಬೀಚ್‌ನಲ್ಲಿ ಬಿದಿರು ಮನೆಗಳು ನಿರ್ಮಾಣವಾಗಿದ್ದು, ಪ್ರವಾಸಿಗರಿಗೆ ವಿಶೇಷ ಅನುಭವವನ್ನು ನೀಡಲಿವೆ. ಬೀಚ್‌ನಲ್ಲಿ ಹುಲ್ಲಿನ ಕೊಡೆಗಳ ಕೆಳಗೆ ಕುಳಿತು ಸಮುದ್ರ ವೀಕ್ಷಣೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಬೀಚ್ ಕಸ ನಿರ್ವಹಣೆಗೆ ಘನತ್ಯಾಜ್ಯ ನಿರ್ವಹಣೆ ಘಟಕ, ಶೌಚಾಲಯಗಳ ನಿರ್ವಹಣೆ, ಬಟ್ಟೆ ಬದಲಾಯಿಸುವ ಕೊಠಡಿ, ಬಿದಿರಿನ ತಾತ್ಕಾಲಿಕ ಮನೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಬೀಚ್‌ನಲ್ಲಿ ಒದಗಿಸಲಾಗಿದೆ. ಜೊತೆಗೆ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಥಮ ಚಿಕಿತ್ಸೆ ಕೊಠಡಿ, ಸಿಸಿಟಿವಿ ಕ್ಯಾಮರಾ ನಿಯಂತ್ರಣ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಬೀಚ್ ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

    Continue Reading

    DAKSHINA KANNADA

    ಕರಾವಳಿ : ಏರುಪೇರಾಗುತ್ತಿರುವ ಹವಮಾನ ; ಹೆಚ್ಚುತ್ತಿರುವ ಕಾಯಿಲೆ

    Published

    on

    ಕರಾವಳಿ :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನದಲ್ಲಿ ಏರುಪೇರಾಗುತ್ತಿದೆ. ಮುಂಜಾನೆ ಚಳಿ, ಮಧ್ಯಾಹ್ನ ಬಿಸಿಲು ಕಾಣಿಸಿ ಕೊಂಡು ವೈರಲ್ ಕಾಯಿಲೆಗಳಿಗೆ ವೇದಿಕೆಯಾಗುತ್ತಿದೆ. ಡಿಸೆಂಬ‌ರ್, ಜನವರಿಯಲ್ಲಿ ಚಳಿಗಾಲ ಸಾಮಾನ್ಯವಾಗಿ ಆರಂಭವಾಗುತ್ತದೆ. ಆದರೆ ಈ ಬಾರಿ ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಚಳಿ ತುಸು ಹೆಚ್ಚು ಕಾಣಿಸಿಕೊಳ್ಳುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆರೋಗ್ಯ ಇಲಾಖೆ ಕೂಡ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಿಕೊಳ್ಳಿ ಎಂದು ಮಾಹಿತಿ, ಜಾಗೃತಿ ನೀಡುತ್ತಿದ್ದರೂ, ಪದೇ ಪದೆ ಚಳಿಯಿಂದಾಗಿ ಶೀತ, ಜ್ವರ, ಕೆಮ್ಮು, ಅಸ್ತಮಾದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ವೈದ್ಯರ ಬಳಿಗೆ ಹೋಗಿ ಔಷಧ ಪಡೆದುಕೊಳ್ಳುವವರ ಸಂಖ್ಯೆಯೂ ಹೆಚ್ಚಳಗೊಂಡಿದೆ.

    ಪರೀಕ್ಷೆ ಜತೆಗೆ ಕಾಯಿಲೆಗಳ ಚಿಂತೆ :

    ಜನವರಿ ತಿಂಗಳಲ್ಲಿ ಬಹಳಷ್ಟು ಶಾಲಾ-ಕಾಲೇಜುಗಳಲ್ಲಿ ಪರೀಕ್ಷಾ ಸಮಯ ಆದರೆ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಉದ್ದೇಶದಿಂದ ಶಾಲೆಗೆ ಹಾಜರಾಗುತ್ತಿದ್ದಾರೆ. ಮಕ್ಕಳಿಂದ ಮಕ್ಕಳಿಗೆ ಜ್ವರ ಹರಡುವ ಪ್ರಮೇಯ ಹೆಚ್ಚಾಗಿರುವುದರಿಂದ ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆಗೆ ಸೂಚನೆ ರವಾನಿಸುವ ಕೆಲಸ ಮಾಡಿದೆ.

    ಕರಾವಳಿಯಲ್ಲಿ ಚಳಿ ಇಳಿಕೆ ಸಾಧ್ಯತೆ :

    ಉತ್ತರ ಭಾರತದಿಂದ ಬೀಸುತ್ತಿರುವ ಗಾಳಿ ಕಡಿಮೆಯಾಗಿ ಬಂಗಾಳಕೊಲ್ಲಿ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಮಾಣ ಜಾಸ್ತಿಯಾಗುವ ಕಾರಣ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಉಂಟಾಗಲಿದೆ. ಇದರಿಂದ ಚಳಿ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಜ.13ರಂದು ಕರಾವಳಿ, ಮಲೆನಾಡು ಭಾಗದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬಳಿಕ ಚಳಿಯ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದ್ದು, ವಾತಾವರಣ ದಲ್ಲಿ ತೇವಾಂಶ ಇದ್ದರೆ ಚಳಿ ಕಡಿಮೆಯಾಗಬಹುದು. ಆದರೆ ಒಣಹವೆ ಇದ್ದರೆ ಮಾತ್ರ ಚಳಿ ಏರಿಕೆಯಾಗಲಿದೆ. ಕೆಲವು ದಿನಗಳಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮುಂಜಾನೆ ಕನಿಷ್ಠ ತಾಪಮಾನ ಇಳಿಕೆಯಾಗಿ 20-21 ಡಿ.ಸೆ. ಆಸುಪಾಸಿನಲ್ಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಇನ್ನೂ 1-2 ಡಿ.ಸೆ.ನಷ್ಟು ಇಳಿಕೆಯಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿ ಮುಂಜಾನೆ 8-9 ಗಂಟೆಯವರೆಗೂ ಚಳಿ ಅನುಭವವಾಗುತ್ತಿದೆ. ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆ ಸಹಿತ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಶೀತ ಗಾಳಿ ಬೀಸುವ ಎಚ್ಚರಿಕೆ ನೀಡಿದ್ದು, ಕನಿಷ್ಢ ತಾಪಮಾನ ವಾಡಿಕೆಗಿಂತ ಇನ್ನೂ 2-4 ಡಿ.ಸೆ. ವರೆಗೆ ಕಡಿಮೆಯಾಗುವ ಸಾಧ್ಯತೆಯಿದೆ.

    Continue Reading

    LATEST NEWS

    Trending