Connect with us

LATEST NEWS

ಶಂಕಿತ ಉಗ್ರರ ಜೊತೆ ಲಿಂಕ್ ಶಂಕೆ-ಉಡುಪಿಯ ರಿಹಾನ್ ಶೇಖ್ ಮನೆಯಲ್ಲಿ NIA ತಂಡದಿಂದ ಮಹಜರು

Published

on

ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜತೆ ಲಿಂಕ್ ಇದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್‌ಐಎ ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯಲ್ಲಿರುವ ಫ್ಲಾಟ್‌ ನಲ್ಲಿರುವ ಮನೆ ಮಹಜರು ನಡೆಸಿತು.


ಬೆಂಗಳೂರಿನಿಂದ ಆಗಮಿಸಿದ್ದ ಎನ್ ಐ ಎ ಅಧಿಕಾರಿಗಳ ತಂಡ ಗುರುವಾರ ದಿನ ಪೂರ್ತಿ ಫ್ಲ್ಯಾಟ್ ನಲ್ಲಿ ಮಹಜರು ನಡೆಸಿ ಕೆಲವು ಅಮೂಲ್ಯ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಇದೇ ಸಂದರ್ಭ ರಿಹಾನ್ ಕುಟುಂಬದ ಸದಸ್ಯರನ್ನು ಕೂಡಾ ವಿಚಾರಣೆ ನಡೆಸಿ ಕೆಲವು ಮಾಹಿತಿಗಳನ್ನು ಸಂಗ್ರಹಿಸಿದೆ. ಬಳಿಕ ಸಂಜೆ ಹೊತ್ತಿಗೆ ಶಂಕಿತ ಯುವಕನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

LATEST NEWS

ಬೆಳ್ಳುಳ್ಳಿ ಬೆಲೆ ಗಗನಕ್ಕೇರುತ್ತಿದ್ದರೆ ಇತ್ತ 2 ಕ್ವಿಂಟಾಲ್ ಬೆಳ್ಳುಳ್ಳಿ ಕಳವು..!

Published

on

ದಾವಣಗೆರೆ: ಬೆಳ್ಳುಳ್ಳಿ ಬೆಲೆ ಏರುತ್ತಿರುವ ಕಾರಣ ಬೆಳ್ಳುಳ್ಳಿ ಬೆಳೆಯುವ ರೈತರು ಕೂಡಾ ಸಾಕಷ್ಟು ಖುಷಿಯಲ್ಲಿದ್ದಾರೆ. ಆದರೆ ಕಳ್ಳರ ಕಾಟದಿಂದಾಗಿ ರೈತರ ಖುಷಿಗೆ ತಣ್ಣೀರು ಬಿದ್ದಂತಾಗಿದ್ದು ನಿದ್ದೆ ಬಿಟ್ಟು ಬೆಳೆಯನ್ನು ಕಾಯುವ ಪರಿಸ್ಥಿತಿ ಎದುರಾಗಿದೆ.

ರಾತ್ರಿ ವೇಳೆ ಕಳ್ಳರು ಜಮೀನಿನಿಂದಲೇ ಬೆಳ್ಳುಳ್ಳಿ ಕದ್ದು ಸಾಗಿಸುತ್ತಿದ್ದು, ಇದು ರೈತರ ನಿದ್ದೆಗೆಡಿಸಿದೆ. ಎರಡು ದಿನಗಳ ಹಿಂದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಎರೆಹೊಸಳ್ಳಿ ಗ್ರಾಮದಲ್ಲಿ ಬೆಳ್ಳುಳ್ಳಿ ಕಳ್ಳತನವಾದ ಬಗ್ಗೆ ದೂರು ದಾಖಲಾಗಿದೆ. ಚಂದ್ರಮ್ಮ ಎಂಬ ಮಹಿಳೆಯ ಜಮೀನಿನಲ್ಲಿ ಬೆಳೆದ ಬೆಳ್ಳುಳ್ಳಿಯನ್ನು ಕಳ್ಳರು ಕದ್ದೊಯ್ದಿದ್ದಾರೆ. ಗ್ರಾಮದಲ್ಲಿ ಯಲ್ಲಮ್ಮ ದೇವಿಯ ಜಾತ್ರೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಚಂದ್ರಮ್ಮ ಜಾತ್ರೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಜಮೀನಿನಲ್ಲಿ ಒಣಗಲು ಹಾಕಿದ್ದ ಸುಮಾರು 80 ಸಾವಿರ ರೂಪಾಯಿ ಮೌಲ್ಯದ 2 ಕ್ವಿಂಟಾಲ್ ಬೆಳ್ಳುಳ್ಳಿಯನ್ನು ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ಕಳೆದ ಎರಡು ತಿಂಗಲುಗಳಿಂದ ಬೆಳ್ಳುಳ್ಳಿ ಬೆಲೆ ಏರುತ್ತಾ ಸಾಗಿದ್ದು, ಹೋಲ್‌ಸೇಲ್ ದರ ಕ್ವಿಂಟಾಲ್‌ಗೆ 40 ಸಾವಿರ ರೂ. ತಲುಪಿದ್ರೆ ರಿಟೈಲ್‌ನಲ್ಲಿ ಕಿಲೋಗೆ 500 ರೂ. ಇದೆ. ಇದೀಗ ಬೆಳ್ಳುಳ್ಳಿ ಕಳ್ಳತನ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಪ್ರಕರಣದ ಬಳಿಕ ರೈತರು ಹೊಲದಲ್ಲಿ ಕಣ್ಣಿಗೆ ಎಣ್ಣೆ ಬಿಟ್ಟು ಬೆಳ್ಳುಳ್ಳಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Continue Reading

BANTWAL

ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Published

on

ವಿಟ್ಲ: ಪೆರಾಜೆ, ಮಾಣಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆ. 28 ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪೆರಾಜೆ, ಮಾಣಿ ಇಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಹಾಗೂ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಪ್ರಹ್ಲಾದ್ ಶೆಟ್ಟಿ ಜೆ  ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದು ಹೇಳಿ ಪರೀಕ್ಷಾ ಶಿಬಿರಕ್ಕೆ ಶುಭ ಹಾರೈಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು. ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ, ಅಮಿತಾ ಎಸ್, ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ ಮತ್ತು ಗೈಡ್ ಶಿಕ್ಷಕಿ ಸಪ್ನ, ಅನಿತಾ ಗೌರಿ, ಲೀಲಾರವರು ಸಹಕರಿಸಿದರು. ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು. ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.

Continue Reading

LATEST NEWS

Udupi: ಕೆಟ್ಟು ನಿಂತಿದ್ದ ಲಾರಿಗೆ ಕಾರು ಢಿಕ್ಕಿ-ಕಾರು ಚಾಲಕ ದುರ್ಮರಣ..!

Published

on

ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಮೃತಪಟ್ಟ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂ ಕಚೇರಿಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಾಪು ಪಿ.ಎಸ್.ಐ. ಅಬ್ದುಲ್ ಖಾದರ್, ಕ್ರೈಂ ಪಿ.ಎಸ್.ಐ. ಪುರುಷೋತ್ತಮ್ ಹಾಗೂ ಸಿಬಂದಿ ಮತ್ತು ಹೆದ್ದಾರಿ ಗಸ್ತು ಪಡೆಯವರು ತೆರಳಿ ಅಪಘಾತದಲ್ಲಿ ಸಿಲುಕಿದ್ದ ಕಾರು ಮತ್ತು ಲಾರಿಯನ್ನು ತೆರವುಗೊಳಿಸಿದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending