Saturday, November 26, 2022

ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಕ್ ಗುಣಮುಖವಾದ ತಕ್ಷಣ ಪೊಲೀಸ್ ವಶಕ್ಕೆ: ಎನ್ ಶಶಿ ಕುಮಾರ್..!

ಮಂಗಳೂರು: ನಗರದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಂಕಿತ ಉಗ್ರ ಶಾರೀಕ್ ಚಿಕಿತ್ಸೆ ಮುಂದುವರೆದಿದೆ. ಆತ ಗುಣಮುಖ ಆದ ತಕ್ಷಣ ಪೊಲಿಸ್ ವಶಕ್ಕೆ ಪಡೆಯಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.


ಮಾದ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಪುರುಷೋತ್ತಮರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.ಅವರೊಂದಿಗೆ ಕುಟುಂಬ ಸದಸ್ಯರೂ ಇದ್ದಾರೆ.

ಆದರೆ ಶಂಕಿತ ಶಾರೀಕ್​ನಲ್ಲಿ ಬಹಳಷ್ಟು ಮಹತ್ವದ ಮಾಹಿತಿ ಇರುವುದರಿಂದ ಉತ್ತ‌ಮ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಸದ್ಯ ಆತ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ವಿಚಾರಣೆಗಾಗಿ ಪ್ರಶ್ನೆ ಮಾಡಲು ಸಾಧ್ಯವಾಗುತ್ತಿಲ್ಲ.

ಆತನ ಆರೋಗ್ಯದ ಬಗ್ಗೆ ವೈದ್ಯರು ಸ್ಪಷ್ಟವಾಗಿ ಏನೂ ಹೇಳಿಲ್ಲ. ಆತ ಯಾವಾಗ ಪ್ರಶ್ನೆಗೆ ಉತ್ತರ ನೀಡಲು ಶಕ್ತನಾಗುತ್ತಾನೆ ಎಂಬುದನ್ನು ಗಮನಿಸಿ ವಶಕ್ಕೆ ಪಡೆಯುತ್ತೇವೆ ಎಂದು ತಿಳಿಸಿದರು.

ಜೊತೆಗೆ ಚಾಲಕ ಪುರುಷೋತ್ತಮ ಅವರಿಗೆ ಪರಿಹಾರ ನೀಡುವ ಬಗ್ಗೆ ಈಗಾಗಲೇ ತಹಶೀಲ್ದಾರ್ ಬಂದು ಮಾಹಿತಿ ಪಡೆದು ತೆರಳಿದ್ದಾರೆ.

ಜಿಲ್ಲಾಧಿಕಾರಿಯವರು ಸರ್ಕಾರದೊಂದಿಗೆ ಮಾತನಾಡಿ ಈ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...