Thursday, August 11, 2022

ಸಿಸಿಬಿ ಎಎಸ್ ಐ ಎಂದು ಫೋಸ್ ನೀಡಿ ಸಸ್ಪೆಂಡ್ ಆದ ಪೊಲೀಸ್ ಹೆಡ್ ಕಾನ್ಸ್ಟೇಬಲ್..!

ಮಂಗಳೂರು: ಹಾಸನದಲ್ಲಿ ರೇವ್ ಪಾರ್ಟಿ ಆಯೋಜಿಸಿ ಸಿಕ್ಕಿಬಿದ್ದಿರುವ ಮಂಗಳೂರಿನ ನಾರ್ಕೋಟಿಕ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶ್ರೀಲತಾ ಅವರನ್ನು ಮಂಗಳೂರು ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ. ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರೀಲತಾ ವಿರುದ್ಧ ಹಾಸನದ ಆಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಆನಂತರ ಹಾಸನ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಆರೋಪಿಗಳನ್ನು ತನಿಖೆ ನಡಸಲಾಗಿತ್ತು.

ತನಿಖೆ ವೇಳೆ ಶ್ರೀಲತಾ ಮತ್ತು ಆಕೆಯ ಮಗ ಅತುಲ್,ಎಸ್ಟೇಟ್ ಮಾಲೀಕ ಗಗನ್ ಜೊತೆ ವಾರದ ಮೊದಲಿನಿಂದಲೇ ನಿರಂತರ ಸಂಪರ್ಕದಲ್ಲಿದ್ದುದು ಸಾಬೀತಾಗಿತ್ತು


.ಅಲ್ಲದೆ, ರೇವ್ ಪಾರ್ಟಿ ನಡೆಸುವುದಕ್ಕೆ ಸ್ಥಳೀಯ ಪೊಲೀಸರ ಅನುಮತಿಯೂ ಬೇಕಾಗಿ ಬರಲ್ಲ.
ಮಂಗಳೂರು ಸಿಸಿಬಿಯಲ್ಲಿ ತಾನು ಎಎಸ್ಐ ಆಗಿದ್ದು ಪ್ರಭಾವ ಹೊಂದಿದ್ದೇನೆ ಎಂದು ಎಸ್ಟೇಟ್ ಮಾಲೀಕನಿಗೆ ಭರವಸೆ ತುಂಬಿದ್ದಳು ಅನ್ನೋ ವಿಚಾರವೂ ತನಿಖೆಯಲ್ಲಿ ಬಯಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕಮಿಷನರ್ ಶಶಿಕುಮಾರ್, ಹಾಸನ ಎಸ್ಪಿ ನೇತೃತ್ವದಲ್ಲಿ ನಡೆದಿರುವ ತನಿಖೆಯಲ್ಲಿ ಲೋಪವಾಗಿರುವುದು ಕಂಡುಬಂದಿದೆ.

ಸದ್ಯಕ್ಕೆ ಕರ್ತವ್ಯದಿಂದ ಅಮಾನತು ಮಾಡಿದ್ದೇವೆ. ಒಟ್ಟು ಘಟನೆ ಬಗ್ಗೆ ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಿಸಿ, ತನಿಖೆ ನಡೆಸಲಾಗುವುದು.

ಆ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.ಎ.10ರಂದು ಹಾಸನದ ಆಲೂರು ಠಾಣೆ ವ್ಯಾಪ್ತಿಯ ಹೊಂಗರವಳ್ಳಿ ಎಂಬ ನಿಗೂಢ ತಾಣದಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಮಂಗಳೂರು ಮತ್ತು ಬೆಂಗಳೂರಿನ ಅತಿ ಹೆಚ್ಚು ಮಂದಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ವಿಚಾರ ತಿಳಿದ ಹಾಸನ ಪೊಲೀಸರು ನಸುಕಿನಲ್ಲಿ ದಾಳಿ ಮಾಡಿ, 131 ಮಂದಿಯನ್ನು ವಶಕ್ಕೆ ಪಡೆದಿದ್ದರು.

ಈ ವೇಳೆ, ಸಾಕಷ್ಟು ಮಾದಕ ದ್ರವ್ಯಗಳು, ಡ್ರಗ್ಸ್ ಮಾತ್ರೆಗಳು, ಗಾಂಜಾ, ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ವೇಳೆ, ಮಂಗಳೂರಿನ ಲೇಡಿ ಪೊಲೀಸ್ ಶ್ರೀಲತಾ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.

ಆದರೆ, ಪಾರ್ಟಿ ಆಯೋಜನೆ ಮಾಡಿದ್ದ ಶ್ರೀಲತಾ ಮಗ ಅತುಲ್ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದಾನೆ.

 

LEAVE A REPLY

Please enter your comment!
Please enter your name here

Hot Topics

ಆ.14 ರಂದು ಮಂಗಳೂರು ಪುರಭವನದಲ್ಲಿ ನಾಟಕ ಪ್ರದರ್ಶನ ಮತ್ತು ಮೆಗಾ ಮ್ಯಾಜಿಕ್

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.14 ರ ಭಾನುವಾರ ಸಂಜೆ 5 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು...

ತೊಕ್ಕೊಟ್ಟು ಕಾಪಿಕಾಡಿನಲ್ಲಿ ಬೈಕಿಗೆ ಕಾರು ಡಿಕ್ಕಿ : ಸವಾರರಿಗೆ ಗಾಯ – ಕಾರು ಕಮರಿಗೆ ..!

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್...

ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾhttp://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್...