Connect with us

BANTWAL

ಪತ್ನಿ ಆತ್ಮಹತ್ಯೆ ಬಗ್ಗೆ ಸಂಶಯ- ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಠಾಣೆ ಮೆಟ್ಟಲೇರಿದ ಪತಿ..!

Published

on

ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.

ಬಂಟ್ವಾಳ : ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.

ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14 ರಂದು ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ.

ಇಲ್ಲಿನ ನಿವಾಸಿ ಸತೀಶ್ ಪಿ. ಎಂಬವರ ಪತ್ನಿ ಬೀನಾ ಸಿ. ಎಂಬವರು ಕಳೆದ ಫೆಬ್ರವರಿ ತಿಂಗಳ 14 ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ನಡೆದ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್ ಪೋನ್ ಇದ್ದು ಆಕೆಯ ಮೊಬೈಲ್ ಪೋನ್ ಕಾಲಿನ ಕೆಳಗಡೆ ಬಿದ್ದಕೊಂಡಿದ್ದುದರಿಂದ ಆತ್ಮಹತ್ಯೆಯು ವ್ಯವಸ್ಥಿತ ಸಂಚು ಎಂಬ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ಮೃತ ಮಹಿಳೆಯ ಪತಿಯು ಮಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದರು,

ಈ ಸಂದರ್ಭ ಅವಿವಾಹಿತ ಯುವಕನೋರ್ವನ ಪರಿಚಯವಾಗಿ ಆತನೊಂದಿಗೆ ಸಲುಗೆಯಿದ್ದ ಇದ್ದಿರುವುದು ತಿಳಿದು ಬಂದಿದೆ.

ಯುವಕ ತನ್ನ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ, ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುವ 10 ದಿನಗಳ ಮೊದಲು ಸ್ನೇಹಿತನ ಮೊಬೈಲ್‌ನಿಂದ ಆಕೆಯ ತಾಯಿಗೆ ಕರೆ ಮಾಡಿ ನಿಮ್ಮ ಮಗಳು ಆತ್ಮಹತ್ಯೆಗೆ ಪ್ರಯತ್ನ ಮಾಡುತ್ತಿದ್ದಾಳೆ ಎಂದು ತಿಳಿಸಿದ್ದು ಆ ದಿನ ಬೀನಾ ಅವರನ್ನು ಅವರ ತಾಯಿ ವಿಚಾರಿಸಿದಾಗ ಯುವಕ ತನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುರುವುದಾಗಿ ತಿಳಿಸಿದ್ದಳು.

ಮಹಿಳೆ ಆತ್ಮಹತ್ಯೆ ಮಾಡಿಕೊಂಡ ದಿನವೂ ಯುವಕ ತಾಯಿಗೆ ಪೋನ್ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಳೆ ಎಂದು ತಿಳಿಸಿದ್ದಾನೆ.

ಘಟನೆಯ ಬಳಿಕ ಮನೆಯನ್ನು ಶೋಧಿಸಿದಾಗ ಯುವಕನ ಬ್ಯಾಂಕ್ ಪಾಸ್ ಪುಸ್ತಕ ಸಹಿತ ಅನುಮಾನಸ್ಪದ ವಸ್ತುಗಳು ಮನೆಯಲ್ಲಿ ದೊರೆತ್ತಿದ್ದು ಮಹಿಳೆಯ ಸಾವಿನ ಹಿಂದೆ ಸಂಶಯ ಇದ್ದು ಆತ್ಮಹತ್ಯೆಗೆ ಯುವಕ ಪ್ರಚೋದನೆ ನೀಡಿದ್ದಾನೆ ಎನ್ನುವ ಆರೋಪವನ್ನು ಮೃತ ಮಹಿಳೆಯ ಪತಿ ಮಾಡಿದ್ದಾರೆ.

ಘಟನೆ ನಡೆದು ಸುಮಾರು 20 ದಿನಗಳ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

BANTWAL

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

Published

on

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

Continue Reading

BANTWAL

ಬಂಟ್ವಾಳ: ನೇತ್ರಾವತಿ ನದಿಯ ದೋಣಿಯ ಅಂಬಿಗ ನಾಪತ್ತೆ

Published

on

ಬಂಟ್ವಾಳ: ನೇತ್ರಾವತಿ ನದಿಯ ದೋಣಿಯ ಅಂಬಿಗ ಬರಿಮಾರು ಕಡವಿನಬಾಗಿಲು ನಿವಾಸಿ ದಿವಾಕರ ನಾಪತ್ತೆಯಾಗಿದ್ದಾರೆ.

ದಿವಾಕರ ಅವರು ಸುಮಾರು 30 ವರ್ಷಗಳಿಂದ ಅಂಬಿಗನಾಗಿ ಕೆಲಸ ಮಾಡುತ್ತಿದ್ದು, ಇವರು ನುರಿತ ಈಜುಗಾರರಾಗಿದ್ದರು. ಬರಿಮಾರು-ಸರಪಾಡಿಗೆ ದೋಣಿ ಮೂಲಕ ಸಂಪರ್ಕ ಸೇತುವೆಯಾಗಿ ಇವರು ಪ್ರತಿದಿನ ಕೆಲಸ ಮಾಡುತ್ತಿದ್ದರು.

ಜ.3 ರ ಶುಕ್ರವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಬರಿಮಾರಿನಿಂದ ಸರಪಾಡಿಗೆ ಹೋಗಿ ಅಲ್ಲಿನ ಅಂಗಡಿಯೊಂದರಿಂದ ಮನೆಗೆ ತರಕಾರಿ ಪಡೆದು, ವಾಪಸ್ ತೆರಳಿದ್ದು, 11 ಗಂಟೆ ವೇಳೆ ದೋಣಿ ಬರಿಮಾರು ಕಡವಿನ ಬಾಗಿಲಿನಲ್ಲಿ ತೇಲಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ದಿವಾಕರ ಅವರು ಕಾಣಿಸಿದ ಕಾರಣ ಅವರ ಪತ್ನಿ ಸರಪಾಡಿಯ ಅಂಗಡಿಯ ಮೂಲಕ ಮಾಲೀಕರಿಗೆ ಫೋನ್ ಮಾಡಿ ವಿಚಾರಿಸಿದ್ದರು.

ಬರಿಮಾರು ಕಡವಿನ ಬಾಗಿಲಿನಲ್ಲಿ ಹಸಿಹುಲ್ಲು ಕಟ್ಟು, ಮೊಬೈಲ್, ಚಪ್ಪಲಿ ಕಂಡು ಬಂದಿದೆ. ದಿವಾಕರ ಅವರಿಗೆ ಮೂರ್ಛೆ ರೋಗವಿದ್ದು, ಈ ಹಿಂದೆ ಕೂಡಾ ನದಿ ಬದಿಯಲ್ಲಿ ಬಿದ್ದ ಘಟನೆ ನಡೆದಿತ್ತು. ಇವತ್ತು ಕೂಡಾ ಮೂರ್ಛೆ ರೋಗ ಭಾದಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಸ್ಥಳೀಯರು ನದಿ ಸುತ್ತಮುತ್ತ ಹುಡುಕಾಟ ನಡೆಸುತ್ತಿದ್ದು, ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

Continue Reading

BANTWAL

ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಂದ ಕಳಚಿ ಬಿದ್ದ ಡೀಸೆಲ್ ಟ್ಯಾಂಕ್

Published

on

ವಿಟ್ಲ: ಇಲ್ಲಿನ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಜ.2ರ ಗುರುವಾರದಂದು ನಡೆದಿದೆ.

ಸರಕಾರಿ ಬಸ್ಸೊಂದು ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸಂದರ್ಭ ಬಸ್ ನಿಂದ ಡಿಸೇಲ್ ಟ್ಯಾಂಕ್‌ ಹೆದ್ದಾರಿಗೆ ಕಳಚಿ ಬಿದ್ದಿದ್ದು, ತತ್ ಕ್ಷಣ ಬಸ್‌ ಸಂಚಾರ ಸ್ಥಗಿತಗೊಂಡಿದೆ.ಈ ನಡುವೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬದಲಿ ಬಸ್ಸಿನ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಯಿತು. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಈ ಘಟನೆ ಸಂಭವಿಸಿದ ಎಂದು ಸಾರ್ವಜನಿಕರು ದೂರಿದ್ದಾರೆ.

Continue Reading

LATEST NEWS

Trending

Exit mobile version