Connect with us

LATEST NEWS

ಮಂಗಳೂರಿನ ‘ಸ್ವಾಭಿಮಾನದ ನಡಿಗೆ’ಗೆ ಸರ್ವಪಕ್ಷ ಬೆಂಬಲ: ಜಾತಿ-ಧರ್ಮ ಮೀರಿ ಬರಲಿದೆ ಜನಸಾಗರ

Published

on

ಮಂಗಳೂರು: ಗಣರಾಜ್ಯೋತ್ಸವ ದಿನದಂದು ಬ್ರಹ್ಮಶ್ರಿ ನಾರಾಯಣ ಗುರುಗಳ ಸ್ತಬ್ಥ ಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ದ ಸದ್ಯ ಕರಾವಳಿಗರ ನೆತ್ತರು ಕುದಿಯುವಂತೆ ಮಾಡಿದೆ.


ಹೀಗಾಗಿ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗೌರವ ನೀಡುವ ಸಲುವಾಗಿ ಬಿಲ್ಲವ ನೇತಾರ ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ನಾಳೆ ಬೃಹತ್ ಸ್ವಾಭಿಮಾನಿ ನಡಿಗೆ ನಗರದಲ್ಲಿ ನಡೆಯಲಿದ್ದು, ಇದಕ್ಕೆ ಅಗತ್ಯ ಇರುವ ಎಲ್ಲಾ ಸಿದ್ದತೆಗಳು ಅಂತಿಮ ಹಂತದಲ್ಲಿದೆ.
ಕಂಕನಾಡಿ ಗರೋಡಿ ಕ್ಷೇತ್ರದಿಂದ ಸಂಜೆ 3.30ಕ್ಕೆ ಕುದ್ರೋಳಿ ಕ್ಷೇತ್ರದವರೆಗೆ ನಡೆಯುವ ಈ ನಡಿಗೆಯಲ್ಲಿ ಅಖಂಡ ಸಂಖ್ಯೆಯಲ್ಲಿ ಜಾತಿ-ಧರ್ಮ-ಮೇಲು ಕೀಳು ಎಂಬ ಭಾವನೆಯನ್ನು ಬದಿಗಿಟ್ಟು ಜನ ಸೇರುವ ಸಾಧ್ಯತೆ ಇದೆ.
ಈ ನಡಿಗೆಯಲ್ಲಿ ವಿವಿಧ ಬಿಲ್ಲವ ಸಂಘಟನೆಗಳು ವಿವಿಧ ತಾಲೂಕುಗಳಿಂದ ಭಾಗವಹಿಸಲಿವೆ, ಜೊತೆಗೆ ವಿಶ್ವ ಹಿಂದೂ ಪರಿಷತ್, ಬಿರುವೆರ್ ಕುಡ್ಲ ಸಂಘಟನೆ, ಹಾಗೂ ವಿವಿಧ ಜನಪರ, ದಲಿತ ಹಿಂದುಳಿದ ಸಂಘಟನೆಗಳು ಈ ನಡಿಗೆಯಲ್ಲಿ ಹೆಜ್ಜೆ ಹಾಕಲಿವೆ.


ಇದರ ಜೊತೆಗೆ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪಕ್ಷಗಳು ನಡಿಗೆಯನ್ನು ಬೆಂಬಲಿಸಿದ್ದು ಜಾಥಾ ಮತ್ತು ನಡಿಗೆಯನ್ನು ಹಮ್ಮಿಕೊಂಡಿವೆ.

ಇನ್ನು ಎಡ-ಜಾತ್ಯಾತೀತ ಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಗಳು ನಾರಾಯಣ ಗುರುಗಳ ಭಾವ ಚಿತ್ರಕ್ಕೆ ಗೌರವ ಸಲ್ಲಿಸಿ ಸಂಜೆ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿಗಳ ಕಚೇರಿವರಗೆ ಜಾಥ ನಡೆಸಿ ನಾರಾಯಣ ಗುರುಗಳಿಗೆ ಗೌರವ ಸೂಚಿಸಲಿದ್ದಾರೆ.

ಬಿಜೆಪಿ ಸರಕಾರದಿಂದೂ ನಡಿಗೆ ಬೆಂಬಲ ಇದೆ ಎಂದು ಈಗಾಗ್ಲೇ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.

ಜೊತೆಗೆ ನಾಳಿನ ನಡಿಗೆ ಯಾವುದೇ ಪಕ್ಷ ಅಥವ ರಾಜಕೀಯಕ್ಕೆ ಸಂಬಂಧ ಪಡದೇ ಘೋಷಣೆಗಳನ್ನು ಕೂಗದೇ ಒಂದೇ ಜಾತಿ,ಒಂದೇ ಮತ, ಒಂದೆ ಮತ ಎಂಬ ಧ್ಯೇಯವನ್ನು ಅಳವಡಿಸಿಕೊಂಡು ಹಮ್ಮಿಕೊಳ್ಳಲಾಗಿದೆ.


ಜೊತೆಗೆ ಸಂಪೂರ್ಣ ಮೌನ ಮೆರವಣಿಗೆಯಾಗಿದ್ದು, ನಡಿಗೆಯಲ್ಲಿ ಕೇವಲ ಹಳದಿ ಶಾಲಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.

ಕಾಂಗ್ರೆಸ್ ನ ಕೆ.ಪಿ.ಸಿ.ಸಿ ಅಧ್ಯಕ್ಷ, ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಕೂಡ ನಾಳಿನ ನಡಿಗೆಯಲ್ಲಿ ಭಾಗಿಯಾಗಲಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆಯುವ ಜಾಥ ಬೆಳಿಗ್ಗೆ 8 ಗಂಟೆಗೆ ಗರೋಡಿ ಕ್ಷೇತ್ರದಿಂದ ಪಂಪ್ ವೆಲ್, ನಂತೂರು, ಕುಲಶೇಖರ, ಬೈತುರ್ಲಿ, ನೀರು ಮಾರ್ಗ್, ವಾಮಂಜೂರು, ಗುರುಪುರ, ಕೈಕಂಬ, ಸುಂಕದಕಟ್ಟೆ,

ಬಜ್ಪೆ, ಕಾವೂರು, ಕೂಳೂರು, ಪಣಂಬೂರು, ಮೀನ ಕಳಿಯ, ಸುರತ್ಕಲ್, ಕುಳಾಯಿ, ನಂತೂರು, ಕಲೆಕ್ಟರ್ ಗೇಟ್, ಜ್ಯೋತಿ, ಹಂಪನಕಟ್ಟೆ ಸಿಗ್ನಲ್, ಕೆಎಸ್, ರಾವ್ ರಸ್ತೆ, ಪಿ.ವಿ ಎಸ್ ರಸ್ತೆ, ಎಂ.ಜಿ ರಸ್ತೆ ಯಾಗಿ ಬಂದು 4 ಗಂಟೆಗೆ ಉರ್ವಾ ಸ್ಟೋರ್ ಮೈದಾನದಿಂದ ಕಾಲ್ನಡಿಗೆಯಲ್ಲಿ ಕುದ್ರೋಳಿ ದೇವಸ್ಥಾನಕ್ಕೆ ಬಂದು ಕಾರ್ಯಕ್ರಮ ಸಮಾಪನವಾಗಲಿದೆ.

ಒಟ್ಟಿನಲ್ಲಿ ನಾಳಿನ ನಡಿಗೆ ಎಲ್ಲಾ ಪಕ್ಷ , ಹಿಂದೂಪರ ಸಂಘಟನೆ, ಸೇರಿದಂತೆ ವಿವಿಧ ಹಿಂದುಳಿದ ಜಾತಿ ಸಂಘಟನೆಗಳು ಸ್ವಾಭಿಮಾನಿ ನಡಿಗೆಯಲ್ಲಿ ಭಾಗಿಯಾಗಿ ಒಂದೇ ಜಾತಿ ಒಂದೇ ಧರ್ಮ ಮತ್ತು ಒಂದೇ ದೇವರು ಎಂಬ ಸಮಾನತೆಯ ಧ್ಯೇಯ ವಾಕ್ಯವನ್ನು ಜಗತ್ತಿಗೆ ಸಾರಿದ ನಾರಾಯಣ ಗುರುಗಳಿಗೆ ಈ ಐತಿಹಾಸಿಕ ಜಾಥಾ ಮೂಲಕ ಗೌರವ ಸಲ್ಲಿಕೆಯಾಗಲಿದೆ.

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

Published

on

ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್‌ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

havamana

ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್‌ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.

ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:

ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್‌ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

Trending