DAKSHINA KANNADA
ಪಣಂಬೂರು ಕಡಲ ಕಿನಾರೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ-ಸಂಸದ ನಳಿನ್ ಚಾಲನೆ
ಮಂಗಳೂರು: ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವವಹಾರಗಳ ಸಚಿವಾಲಯ , ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಪಣಂಬೂರು ಕಡಲ ಕಿನಾರೆಯಲ್ಲಿ ಸ್ವಚ್ಛ್ ಸಾಗರ್ ಅಭಿಯಾನದ ಸ್ವಚ್ಛತಾ ಕಾರ್ಯಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ವಿಶ್ವ ಸ್ವಚ್ಛತಾ ದಿನದ ಅಂಗವಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿಶೇಷವಾಗಿ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.
ಸ್ವಚ್ಛಸಾಗರ ಅಭಿಯಾನದ ಹಿನ್ನೆಲೆಯಲ್ಲಿ ಕೋಸ್ಟ್ಗಾರ್ಡ್ ವಿಶೇಷ ಆಸಕ್ತಿಯನ್ನು ವಹಿಸಿ ಈ ಕೆಲಸ ಕಾರ್ಯವನ್ನು ಮಾಡಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ನುಡಿದರು. ಪದ್ಮಶ್ರೀ ಪುರಸ್ಕೃತ , ಅಕ್ಷರ ಸಂತ ಹರೇಕಳ ಹಾಜಬ್ಬ ಸ್ವಚ್ ಭಾರತ್ ಅಭಿಯಾನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಇಂಡಿಯನ್ ಕೋಸ್ಟ್ ಗಾರ್ಡ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಸ್ಕೌಟ್ಸ್ ಗೈಡ್ಸ್, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ, ಮಂಗಳೂರು ನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮೊದಲಾದವರು ಭಾಗವಹಿಸಿದ್ದರು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.