Wednesday, June 16, 2021

ಹೆಚ್ಚುತ್ತಿರುವ ಕೊರೊನಾ ವಿರುದ್ಧ ನಮ್ಮ ಹೋರಾಟ ನಿರಂತರ  ಮೂಡಬಿದಿರೆ ಜೈನ ಮಠದ ಸ್ವಾಮೀಜಿ ಹೇಳಿಕೆ..!

ಮೂಡಬಿದಿರೆ:ಕೊರೊನಾ ಲಾಕ್ ಡೌನ್ ಸಂಧರ್ಭದಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ , ಮೂಡುಬಿದಿರೆಯ ಜೈನ ಮಠದ   ಸ್ವಸ್ತಿಶ್ರೀ  ಡಾ. ಚಾರುಕೀರ್ತೀ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ.

ಇಡೀ ಜಗತ್ತಿನಲ್ಲಿ ಕೊರೊನಾ ಮಹಾಮಾರಿಯ 2ನೇ ಅಲೆ ರುದ್ರತಾಂಡವವಾಡುತ್ತಿದೆ.ಇದರಿಂದ ಪ್ರತಿಯೊಬ್ಬರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಅನಿವಾರ್ಯತೆ ಇದೆ.

ಯಾರು ಕೂಡ ಧೃತಿ ಗೆಡದೆ, ಕೊರೊನಾ ವೈರಸನ್ನು ಹಿಮ್ಮೆಟಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ವೃದ್ಧಿಸಿಕೊಂಡು ಜೀವನ ನಡೆಸಬೇಕಾಗಿದೆ.

ಭಾರತೀಯರಾದ ನಾವು ಜಾತಿ-ಧರ್ಮಗಳನ್ನು ಮರೆತು ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ.  ಸಾಧ್ಯವಾದಷ್ಟು ಮನೆಯಲ್ಲಿಯೇ ಇದ್ದುಕೊಂಡು ನಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳುವ ಹಾಗೆ ನೋಡಿಕೊಳ್ಳೊಣ.

ಸರಕಾರ ಸೂಚಿಸಿರುವ ಕೊವೀಡ್ ಗೈಡ್ ಲೈನ್ಸ್ ಎಲ್ಲರೂ ತಪ್ಪದೆ  ಪಾಲನೆ ಮಾಡಿ ಎಂದು ನಾಡಿನ ಜನತೆಗೆ ಸ್ವಾಮೀಜಿ ಕಿವಿ ಮಾತು ಹೇಳಿದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...