Connect with us

LATEST NEWS

ತಲಕಾವೇರಿ ಬೆಟ್ಟಕುಸಿತ ಇನ್ನೂ ಪತ್ತೆಯಾಗದ ಅರ್ಚಕರ ಕುಟುಂಬ -ಶೋಧ ಕಾರ್ಯಕ್ಕೆ ಅಡ್ಡಿಯಾದ ಮಳೆ

Published

on

ಮಡಿಕೇರಿ : ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಪತ್ತೆಗೆ ತೀವ್ರ ಶೋಧ ಕಾರ್ಯ ಇಂದು ಕೂಡ ಮುಂದುವೆದಿದೆ. ಆದರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ನಿನ್ನೆ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರೂ ದಟ್ಟ ಮಂಜು ಮತ್ತು ಮಳೆ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.


ಇಂದು ಎನ್‌ ಡಿ ಆರ್‌ ಎಫ್ ತಂಡ ಮುಂಜಾನೆಯಿಂದಲೇ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. ಮಣ್ಣಿನ ತೆರವಿಗೆ ಜೆಸಿಬಿ ಮತ್ತು ಹಿಟಾಚಿಗಳ ನೆರವನ್ನು ಪಡೆಯಲಾಗತ್ತಿದ್ದು ಕೊಡಗು ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ ಸೇರಿದಂತೆ ಹಿರಿಯ ಅಧಿಕಅರಿಗಳು ಸ್ಥಳದಲ್ಲೇ ಮೊಕ್ಕಂ ಹೂಡಿದ್ದು, ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.


ರಾಜ್ಯ ಸಚಿವರುಗಳಾದ ಸೋಮಣ್ಣ ಮತ್ತು ಆರ್ ಆಶೋಕ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸುಮಾರು 5 ಎಕರೆ ಪ್ರದೇಶದಲ್ಲಿ ಕುಸಿದ ಮಣ್ಣು ಹರಡಿದಿದ್ದು ಇದರಲ್ಲಿ ತಲಕಾವೇರಿ ದೇವಸ್ಥಾನದ ಅರ್ಚಕರಾದ ನಾರಾಯಣ ಆಚಾರ್, ಪತ್ನಿ ಶಾಂತ ಆಚಾರ್, ಅವರ ಸಹೋದರ ಆನಂದ ತೀರ್ಥ ಸ್ವಾಮಿ , ಸಹಾಯಕ ಅರ್ಚಕರಾದ ಪವನ್ ಮತ್ತು ಬಂಟ್ವಾಳ ರವಿ ಕಿರಣ್ ಸಿಲುಕಿರುವ ಸಾಧ್ಯತೆಗಳಿದ್ದರೂ ಬದುಕಿ ಉಳಿದಿರುವ ಸಾದ್ಯತೆ ತೀರ ಕಡಿಮೆ ಎನ್ನಲಾಗಿದೆ.

ಕಾವೇರಿ ಅಮ್ಮನ ಮಡಿಲು ಬಿಟ್ಟು ಬರಲಾರೆ ಎಂದಿದ್ದ ಅರ್ಚಕರು..!?


ಕಳೆದ ಮಳೆಗಾಲದಲ್ಲಿ ಬೃಹ್ಮಗಿರಿ ಬೆಟ್ಟದ ಈ ಭಾಗದಲ್ಲಿ ಕೊಂಚ ಮಟ್ಟಿನ ಕುಸಿತ ಉಂಟಾಗಿತ್ತು. ಮತ್ತು ಬೆಟ್ಟ ಬಿರುಕು ಬಿಟ್ಟಿತ್ತು. ಆಗ ಬೆಟ್ಟದ ತಪ್ಪಲಿನಲ್ಲಿ ಮನೆ ಮಾಡಿದ್ದ ಪ್ರಧಾನ ಅರ್ಚಕರಾದ ನಾರಾಯಣಾಚಾರ್ ಅವರನ್ನು ಸ್ಥಳ ತೆರವು ಮಾಡಲು ಹಿತೈಷಿಗಳು , ಅಧಿಕಾರಿಗಳು ಮನವಿ ಮಾಡಿದ್ದರು ಎನ್ನಲಾಗಿದೆ.

ಆದರೆ ಕಾವೇರಮ್ಮನ ಮಡಿಲು ಬಿಟ್ಟು ಎಲ್ಲಿಗೂ ಹೋಗಲಾರೆ ಎಂದಿದ್ದರು ನಾರಾಯಣ ಆಚಾರ್. ಇದೀಗ ಭೂಕುಸಿತದಿಂದ ಸಮಾಧಿಯಾದ ಮನೆಯೊಳಗೆ ಪ್ರಧಾನ ಅರ್ಚಕರಾದ ನಾರಾಯಣಾಚಾರ್ ಮತ್ತು ಕುಟುಂಬ ಸಿಲುಕಿಕೊಂಡಿದೆ. ಈ ಮಧ್ಯೆ ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅವರ ಕಾರಿನ ಅವಶೇಷಗಳು ಕೆಲ ಮನೆ ಸಾಮಗ್ರಿಗಳು, ಕೆಲ ಜಾನುವಾರುಗಳ ಅವಶೇಷಗಳು ದೊರಕಿವೆ ಎಂಬ ಮಾಹಿತಿ ಲಭ್ಯವಾಗಿದೆ.

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending