Connect with us

    LATEST NEWS

    ಕಂದಹಾರ್‌ ಜಿಲ್ಲೆ ತಾಲೀಬಾನ್ ವಶದಲ್ಲಿ: ರಾಯಭಾರಿ ಕಚೇರಿ ಮುಚ್ಚಿದ ಭಾರತ

    Published

    on

    ಕಾಬುಲ್: ಸರ್ಕಾರಿ ಪಡೆಗಳೊಂದಿಗೆ ಭೀಕರ ಕಾದಾಟ ನಡೆಸಿದ ತಾಲೀಬಾನ್ ಪಡೆಗಳು ಅಫ್ಗಾನಿಸ್ತಾನದ ಪ್ರಮುಖ ಪ್ರಾಂತ್ಯ ಎನಿಸಿದ ಕಂದಹಾರ್ ಜಿಲ್ಲೆಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಕಂದಹಾರ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ 50 ರಾಜತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಮುಂದಾಗಿದೆ ಎಂದು ತಿಳಿದುಬಂದಿದೆ.

    ಆಫ್ಗಾನಿಸ್ತಾನದ ಪಶ್ಚಿಮ ಭಾಗದ ಬಹುತೇಕ ಭಾಗವನ್ನು ವಶಪಡಿಸಿಕೊಂಡಿರುವ ತಾಲಿಬಾನ್‌, ದಕ್ಷಿಣ ಭಾಗದ ಪ್ರದೇಶಗಳನ್ನೂ ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿರುವ ಬೆನ್ನಲ್ಲೇ ಭಾರತ ತನ್ನ ರಾಯಭಾರಿ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚುವ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಇಂಡೊ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಭಾರತೀಯ ರಾಜತಾಂತ್ರಿಕರು, ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು ವಾಪಸ್ ಕರೆತರಲು ಭಾರತೀಯ ವಾಯುಪಡೆಯ ವಿಶೇಷ ವಿಮಾನವನ್ನು ಶನಿವಾರ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ

    ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕಳೆದ ಮಂಗಳವಾರವಷ್ಟೇ ಕಂದಹಾರ್‌ ಮತ್ತು ಮುಜಾರ್‌-ಎ-ಷರೀಫ್‌ನಲ್ಲಿರುವ ಕಾನ್ಸುಲೇಟ್ ಕಚೇರಿಗಳನ್ನು ಮುಚ್ಚುವ ಯೋಜನೆ ಇಲ್ಲ ಎಂದು ಹೇಳಿತ್ತು. ಆಫ್ಗಾನಿಸ್ತಾನದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಅಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆಯ ವಿಷಯವನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಗುರುವಾರವಷ್ಟೇ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ತಿಳಿಸಿದ್ದರು.

    ಕಳೆದ ಏಪ್ರಿಲ್ ತಿಂಗಳಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅಫ್ಗಾನಿಸ್ತಾನದಿಂದ ಅಮೆರಿಕ ಪಡೆಗಳನ್ನು ಹಿಂಪಡೆಯುವ ಘೋಷಣೆ ಮಾಡಿದ ನಂತರ ತಾಲೀಬಾನ್​ ದಾಳಿ ಹೆಚ್ಚಾಗಿದೆ. ಅಮೆರಿಕ ಪಡೆಗಳು ಅಫ್ಗನ್​ನಿಂದ ಹೊರನಡೆಯುವ ಪ್ರಕ್ರಿಯೆ ಅಂತಿಮಘಟ್ಟಕ್ಕೆ ಬರುತ್ತಿದ್ದಂತೆಯೇ ತಾಲೀಬಾನ್ ಗ್ರಾಮೀಣ ಪ್ರದೇಶಗಳನ್ನು ವಶಪಡಿಸಿಕೊಳ್ಳುವುದಕ್ಕೆ ಮುಂದಾಗಿದೆ.

    ಶಾಂತಿ ಸ್ಥಾಪನೆ ಉದ್ದೇಶದಿಂದ ಎರಡು ದಶಕಗಳಿಂದ ಅಫ್ಘಾನಿಸ್ತಾನದಲ್ಲಿ ನೆಲೆಯೂರಿದ್ದ ಅಮೆರಿಕ ಮತ್ತು ಅದರ ಮಿತ್ರ ಪಡೆಗಳು ಕಾಬೂಲ್ ಸಮೀಪದ ಬಾರ್ಗಾಮ್ ವಾಯುನೆಲೆ ತೊರೆದ ಎರಡು ದಿನಗಳಲ್ಲಿ ತಾಲೀಬಾನ್ ಮೇಲುಗೈ ಸಾಧಿಸಿದೆ.

    ಅಮೆರಿಕ ಪಡೆಗಳು ವಾಪಸ್ಸಾಗುತ್ತಿದ್ದಂತೆಯೇ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಸರಣಿ ದಾಳಿ ನಡೆಸಿದ್ದು, ಕಂದಹಾರ್ ಜಿಲ್ಲೆಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಇದರಂತೆ ಕಂದಹಾರ್​ ದಕ್ಷಿಣದ ಪಂಜ್ವಾಯಿ ಜಿಲ್ಲೆ ಕೂಡ ತಾಲೀಬಾನ್ ಹಿಡಿತಕ್ಕೆ ಸಿಕ್ಕಿದೆ.

    ಪಂಜ್ವಾಯಿ ಜಿಲ್ಲೆಯನ್ನು ತನ್ನ ಸುಪರ್ದಿಗೆ ಪಡೆದುಕೊಳ್ಳಲು ತಾಲೀಬಾನ್ ಬಹುಕಾಲದಿಂದ ಪ್ರಯತ್ನಿಸುತ್ತಿತ್ತು. ಪಂಜ್ವಾಯಿ ನಗರವು ತಾಲೀಬಾನ್ ವಶಕ್ಕೆ ಹೋದ ಹಿನ್ನೆಲೆಯಲ್ಲಿ ಅಲ್ಲಿಂದ ಸಾವಿರಾರು ಕುಟುಂಬಗಳು ಹೊರ ನಡೆಯತ್ತಿವೆ. ಪಂಜ್ವಾಯಿ ನಗರದಲ್ಲಿ ಶೀಘ್ರದಲ್ಲಿಯೇ ಇಸ್ಲಾಮಿಕ್ ಷರಿಯಾ ಕಾನೂನನ್ನು ತಾಲೀಬಾನ್ ಜಾರಿ ಮಾಡಬಹುದು ಎಂಬ ಆತಂಕ ವ್ಯಕ್ತವಾಗಿದೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮತ್ತು ರಾಜ್ಯಪಾಲರ ಕಚೇರಿ ಕಟ್ಟಡವನ್ನು ತಾಲೀಬಾನ್ ವಶಪಡಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಪಂಜ್ವಾಯಿ ಜಿಲ್ಲೆಯು ತಾಲೀಬಾನ್​ ಹಿಡಿತಕ್ಕೆ ಸಿಕ್ಕ ಬಗ್ಗೆ ಕಂದಹಾರ್ ಪ್ರಾದೇಶಿಕ ಆಡಳಿತ ಮಂಡಳಿಯು ಸರ್ಕಾರಿ ಪಡೆಗಳನ್ನು ಹೊಣೆಯಾಗಿಸಿದೆ. ಅಮೆರಿಕ ಪಡೆಗಳು ಅಫ್ಗಾನಿಸ್ತಾನದಿಂದ ಹೊರ ನಡೆಯುವ ಪ್ರಕ್ರಿಯೆ ಆರಂಭವಾದ ನಂತರ ಸರ್ಕಾರಿ ಪಡೆಗಳು ಉದ್ದೇಶಪೂರ್ವಕವಾಗಿಯೇ ಯುದ್ಧಭೂಮಿಯಿಂದ ಹಿಂದೆ ಸರಿದವು ಎಂದು ಆಡಳಿತ ಮಂಡಳಿಯು ಆರೋಪಿಸಿದೆ. ಅಫ್ಗಾನಿಸ್ತಾನದ 421 ಜಿಲ್ಲೆಗಳ ಪೈಕಿ 100 ಜಿಲ್ಲೆಗಳನ್ನು ತಾಲೀಬಾನ್ ನಿಯಂತ್ರಿಸುತ್ತಿದೆ. ಕಂದಹಾರ್​ ಪ್ರಾಂತ್ಯದಲ್ಲಿ ತಾಲೀಬಾನ್ ವಶಕ್ಕೆ ಹೋದ ಐದನೇ ಜಿಲ್ಲೆಯಿದು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending