Tuesday, October 19, 2021

ತಾಲಿಬಾನಿ ಹೊಸ ರೂಲ್ಸ್‌: ಅನೈತಿಕ ಸಂಬಂಧಕ್ಕೆ ಕಲ್ಲಿನಿಂದ ಹೊಡೆಯುವುದು

ಕಾಬುಲ್​: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಈಗ ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಕಳ್ಳತನ, ಅಕ್ರಮ ಸಂಬಂಧ ಸೇರಿದಂತೆ ಹಲವು ಪ್ರಕರಣಗಳು ಸಾಬೀತಾದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ. ಅದರ ವಿವರ ಇಂತಿದೆ.


ಉದ್ದೇಶಪೂರ್ವಕ ಕೊಲೆ ಮಾಡಿದವನನ್ನ ಹತ್ಯೆ ಮಾಡುವುದು.
ಉದ್ದೇಶರಹಿತ ಕೊಲೆಯಾಗಿದ್ದಲ್ಲಿ ಆತನಿಂದ ದಂಡ ವಸೂಲಿ ಮಾಡುವುದು.
ಕಳ್ಳತನ ಮಾಡಿದವರ ಕೈಗಳನ್ನು ಕತ್ತರಿಸುವುದು.
ಅನೈತಿಕ ಸಂಬಂಧ ಹೊಂದಿದ್ದಲ್ಲಿ ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆಯುವುದು.
ಮಹಿಳೆ ಮತ್ತು ಪುರುಷ ಇಬ್ಬರೂ ಅನೈತಿಕ ಸಂಬಂಧದಲ್ಲಿ ತೊಡಗಿದ್ದರೆ ಅವರನ್ನು ಸಾರ್ವಜನಿಕವಾಗಿ ಹತ್ಯೆಗೈಯ್ಯುವುದು.
ಮೇಲೆ ಹೇಳಿದ ಎಲ್ಲ ಶಿಕ್ಷೆಗಳಿಗೆ ಕನಿಷ್ಟ ಪಕ್ಷ ನಾಲ್ವರು ಸಾಕ್ಷಿಗಳಿರಬೇಕು. ಆ ಸಾಕ್ಷಿಗಳೆಲ್ಲರು ಒಂದೇ ಕತೆಯನ್ನು ಹೇಳಬೇಕು. ಒಂದು ಚೂರು ವ್ಯತ್ಯಾಸವಾದಲ್ಲಿ ಯಾವುದೇ ಶಿಕ್ಷೆ ಇರುವುದಿಲ್ಲ.

ಆದರೆ, ಎಲ್ಲರೂ ಒಂದೇ ಕತೆ ಹೇಳಿದರೆ, ಅದೇ ಸಮಯದಲ್ಲಿ, ಅದೇ ಜಾಗದಲ್ಲಿ ಶಿಕ್ಷೆ ವಿಧಿಸಲಾಗುವುದು. ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ತಪ್ಪಿತಸ್ಥರೆಂದು ಪರಿಗಣಿಸಿದರೆ ಶಿಕ್ಷಿಸಲಾಗುವುದು ಎಂದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...