Connect with us

BANTWAL

ವಿಟ್ಲದಲ್ಲಿ ಬಾಲಕ-ಬಾಲಕಿಯರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Published

on

ವಿಟ್ಲ: ದ.ಕ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ 14 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟ ಒಕ್ಕೆತ್ತೂರು ಶಾಲೆಯಲ್ಲಿ ನಡೆಯಿತು.


ಕಾರ್ಯಕ್ರಮವನ್ನು ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಉದ್ಘಾಟಿಸಿ, ಮಾತನಾಡಿ ಒಕ್ಕೆತ್ತೂರು ಸರಕಾರಿ ಶಾಲೆಯೂ ಖಾಸಗಿ ಶಾಲೆಗಳನ್ನು ಮೀರಿಸುವಂತೆ ಅಭಿವೃದ್ಧಿ ಹೊಂದುತ್ತಿದೆ. ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಜತೆಗೆ ಅವರನ್ನು ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರಕುವಂತೆ ಮಾಡುತ್ತಿದೆ ಎಂದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮೊಹಮ್ಮದ್ ಹಾರೀಸ್ ಸಿ.ಎಚ್ ಮಾತನಾಡಿ ಶಿಕ್ಷಕರ, ದಾನಿಗಳ, ಸಮಿತಿ ಸದಸ್ಯರ ಸಂಪೂರ್ಣ ಸಹಕಾರದಿಂದ ಶಾಲೆ ಉತ್ತಮವಾಗಿ ಮೂಡಿ ಬರುತ್ತಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಲು ಅವರ ಪ್ರಯತ್ನ ಕಾರಣವಾಗಿದೆ ಎಂದರು.


ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್, ಪಟ್ಟಣ ಪಂಚಾಯತ್ ಸದಸ್ಯ ಡೀಕಯ್ಯ, ಪ್ರಾಥಮಿಕ ಶಿಕ್ಷಣ ಸಂಘದ ಅಧ್ಯಕ್ಷರು ಶಿವಪ್ರಸಾದ್ ಶೆಟ್ಟಿ, ಕರ್ನಾಟಕ ರಾಜ್ಯ ಸರ್ಕಾರ ನೌಕರಿ ಸಂಘದ ಅಧ್ಯಕ್ಷ ಉಮಾನಾಥ ರೈ,

ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ ಜಯರಾಮ್, ದಕ್ಷಿಣ ಕನ್ನಡ ಜಿಲ್ಲಾ ಸಂಘದ ಉಪಾಧ್ಯಕ್ಷ ನವೀನ್, ವಲಯದ ನೊಡೆಲ್ ಅಧಿಕಾರಿ ರಾಜೇಂದ್ರ ರೈ, ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷರು ನಾರಾಯಣ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ಶಶಿಕಾಂತ್, ಶುಭಲಕ್ಮಿ, ಯತೀಶ್, ಮುದರ,

ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್,ಸುನೀತ ರಾವ್, ಅಶ್ರಫ್ ಒಕ್ಕೆತ್ತೂರು, ಸಂಘದ ಪ್ರತಿನಿಧಿ ಇಸ್ಮಾಯಿಲ್ ಮಾಜಿ ಎಸ್ ಡಿ ಎಮ್ ಸಿ ಅಧ್ಯಕ್ಷ ಎಂ.ಕೆ ಮೂಸಾ ಉಪಸ್ಥಿತರಿದ್ದರು.

BANTWAL

ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

Published

on

ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.

ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 

ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ

ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :

ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

Published

on

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.

ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ! 

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending