Thursday, December 2, 2021

ಬೆಳ್ತಂಗಡಿ: ಸಹೋದರರ ಮೇಲೆ ತಲವಾರು ದಾಳಿ- ಮೂವರ ಬಂಧನ

ಬೆಳ್ತಂಗಡಿ: ಆಟೊ ರಿಕ್ಷಾ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.


ಘಟನೆಯಲ್ಲಿ ಸಹೋದರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ರಾತ್ರಿಯೇ ಬಂಧಿಸಿದ್ದಾರೆ.

ಗೋವಿಂದೂರು ಶಾಲೆಯ ಬಳಿ ನೆಲ್ಲಿಗುಡ್ಡೆ ನಿವಾಸಿ ಆಟೋ ಚಾಲಕ ಹೈದರ್ ಹಾಗೂ ಆತನ ಅಣ್ಣ ರಫೀಕ್ ದಾಳಿಗೆ ಒಳಗಾದವರರಾಗಿದ್ದಾರೆ.
ತಲವಾರು ದಾಳಿ ನಡೆಸಿ ಕೊಲೆಯತ್ನ ನಡೆಸಿದ ಆರೋಪಿಗಳಾದ ಇದೇ ಪರಿಸರದ ನಿವಾಸಿ ಅಶುತೋಷ್ ಹಾಗೂ ಆತನ ಇಬ್ಬರು ಸಹಚರರನ್ನು ತಡರಾತ್ರಿಯೇ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ರಾತ್ರಿಯ ವೇಳೆ ಹೈದರ್ ಹಾಗೂ ರಫೀಕ್ ತಮ್ಮ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಶುತೋಷ್ ಹಾಗೂ ಇತರ ಇಬ್ಬರು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿರುವುದಾಗಿ ಆರೋಪಿಸಲಾಗಿದೆ.

ಇಬ್ಬರ ಮೇಲೂ ತಲವಾರಿನಿಂದ ದಾಳಿ ನಡೆಸಲಾಗಿದ್ದು, ಚೂರಿಯಿಂದ ಇರಿಯಲಾಗಿದೆ. ಇದರಿಂದ ಹೈದರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಫೀಕ್ ಕೂಡಾ ಗಾಯಗೊಂಡಿದ್ದಾರೆ. ಬೊಬ್ಬೆ ಕೇಳಿ ಸ್ಥಳಿಯರು ಘಟನಾ ಸ್ಥಳಕ್ಕೆ ಧಾವಿಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಳುಗಳಿಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣದ ಆರೋಪಿಗಳಾದ ಅಶುತೋಷ್ ಹಾಗೂ ಆತನ ಸಹಚರರು ಪರಾರಿಯಾಗುವ ಪ್ರಯತ್ನ ನಡೆಸಿದರೂ ಮೂವರನ್ನೂ ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದರೆ.
ಘಟನೆ ನಡೆದ ತಕ್ಷಣವೇ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಗೇರುಕಟ್ಟೆಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...