Home ಪ್ರಮುಖ ಸುದ್ದಿ ಕೊರೊನಾ ಲಾಕ್ ಡೌನ್ ಟೈಮಲ್ಲಿ ಕಾಲಿವುಡ್ ನ ಗ್ಲಾಮರಸ್ ನಟಿ ಮಾಡಿದ್ದೇನು.?

ಕೊರೊನಾ ಲಾಕ್ ಡೌನ್ ಟೈಮಲ್ಲಿ ಕಾಲಿವುಡ್ ನ ಗ್ಲಾಮರಸ್ ನಟಿ ಮಾಡಿದ್ದೇನು.?

ಕೊರೊನಾ ಲಾಕ್ ಡೌನ್ ಟೈಮಲ್ಲಿ ಕಾಲಿವುಡ್ ನ ಗ್ಲಾಮರಸ್ ನಟಿ ಮಾಡಿದ್ದೇನು.?

ಕೊರೊನಾ ಲಾಕ್ಡೌನ್ ಸಮಯವನ್ನು ಕೆಲವು ನಟ-ನಟಿಯರು ತಮ್ಮ ಕುಟುಂಬದ ಜೊತೆಗೆ ಕಳೆಯುತ್ತಿದ್ದಾರೆ.

ಕೆಲವರು ಸಾಮಾಜಿಕ ಜಾಲತಾಣದಲ್ಲಿ ಲಾಕ್ಡೌನ್ನಲ್ಲಿ ಏನು ಮಾಡುತ್ತಿದ್ದೇವೆ ಎಂದು ಶೇರ್ ಮಾಡುತ್ತಾ ಅಭಿಮಾನಿಗಳಿಗೆ ಅಪ್ಡೇಟ್ ಕೊಡುತ್ತಿದ್ದಾರೆ.

ಆದರೆ ತಮಿಳು ನಟಿಯೊಬ್ಬರು ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡೋದ್ರಲಿ ಬ್ಯುಸಿಯಾಗಿದ್ದಾರೆ. ತಮಿಳು ನಟಿ ಕೀರ್ತಿ ಪಾಂಡಿಯನ್ ಟ್ರ್ಯಾಕ್ಟರ್ ಓಡಿಸುತ್ತಾ, ಹೊಲ ಉಳುಮೆ ಮಾಡುತ್ತಾ, ತಮ್ಮ ಲಾಕ್ಡೌನ್ ಅವಧಿಯನ್ನು ಎಂಜಾಯ್ ಮಾಡುತ್ತಿದ್ದಾರೆ.

ಹೊಲದಲ್ಲಿ ಕೆಲಸ ಮಾಡುತ್ತಾ ಲಾಕ್ಡೌನ್ ಸಮಯ ಕಳೆಯುತ್ತಿರುವ ನಟಿ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ.

‘ಮತ್ತೆ ಕೃಷಿಯನ್ನು ಪ್ರಾರಂಭಿಸಿದ್ದೇನೆ’ ಎಂದು ಕ್ಯಾಪ್ಷನ್ ಜೊತೆಗೆ ಕ್ವಾರಂಟೈನ್, ಫಾರ್ಮಿಂಗ್ ಎಂದು ಹ್ಯಾಶ್ ಟ್ಯಾಗ್ ಹಾಕಿ ಟ್ವಿಟ್ಟರ್, ಇನ್ಸ್ ಟಾಗ್ರಾಮ್ ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

ಮಲಯಾಳಂನಿಂದ ತಮಿಳಿಗೆ ರಿಮೇಕ್ ಆಗುತ್ತಿರುವ ‘ಹೆಲನ್’ ಸಿನಿಮಾದಲ್ಲಿ ಕೀರ್ತಿ ಪಾಂಡಿಯನ್ ಸದ್ಯ ನಟಿಸುತ್ತಿದ್ದಾರೆ.

ಕೀರ್ತಿ ತಂದೆ ಅರುಣ್ ಪಾಂಡಿಯನ್ ಕೂಡ ನಟರಾಗಿದ್ದು, ಸಾಕಷ್ಟು ತಮಿಳಿನ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ತಮಿಳು ಮಾತ್ರವಲ್ಲದೇ ಕನ್ನಡ, ತೆಲುಗು ಸಿನಿಮಾಗಳಲ್ಲಿ ಕೂಡ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಹಲವು ಚಿತ್ರಗಳನ್ನು ನಿರ್ಮಾಣ ಕೂಡ ಮಾಡಿದ್ದಾರೆ.

ಕೀರ್ತಿ ಅವರು ಪಕ್ಕಾ ಹಳ್ಳಿ ಹುಡುಗಿಯಂತೆ ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡುತ್ತಿರುವ ವಿಡಿಯೋ ನೋಡಿದ ಅಭಿಮಾನಿಗಳು ಫಿದಾ ಆಗಿದ್ದು, ಕೀರ್ತಿ ಅವರ ಹಳ್ಳಿ ಹುಡುಗಿ ಅವತಾರಕ್ಕೆ ಮನಸೋತಿದ್ದಾರೆ.

- Advertisment -

RECENT NEWS

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ...

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ ಬೆಂಗಳೂರು: ಹಲವಾರು ದಿಟ್ಟ ಕ್ರಮಗಳಿಂದ ಸರಕಾರವನ್ನು ಹಲವು ಬಾರಿ ಎದುರು ಹಾಕಿಕೊಂಡಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು...