LATEST NEWS
ತಮಿಳು ಚಿತ್ರ ನಟ, ರಾಜಕಾರಣಿ ವಿಜಯಕಾಂತ್ ಇನ್ನಿಲ್ಲ..!
Published
11 months agoon
By
Adminಚೆನ್ನೈ: ತಮಿಳು ಚಲನ ಚಿತ್ರ ನಟ ಕಮ್ ರಾಜಕಾರಣಿ ವಿಜಯಕಾಂತ್ ಗುರುವಾರ ನಿಧನ ಹೊಂದಿದರು.
ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಇದಾದ ಬಳಿಕ ಉಸಿರಾಟದ ತೊಂದರೆಯಿಂದಾಗಿ ಚೆನ್ನೈನ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಿಎಂಡಿಕೆ ಪಕ್ಷದ ಸ್ಥಾಪಕರಾಗಿದ್ದ ವಿಜಯಕಾಂತ್ ನಿಧನ ಹೊಂದಿದ ಚೆನ್ನೈನ ಎಂಐಒಟಿ ಆಸ್ಪತ್ರೆಯ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಟ ವಿಜಯಕಾಂತ್ 2005 ರಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷವನ್ನು ಸ್ಥಾಪಿಸಿದರು. 2011ರಿಂದ 2016ರವರೆಗೆ ತಮಿಳುನಾಡಿನಲ್ಲಿ ಡಿಎಂಡಿಕೆ ಪ್ರಮುಖ ವಿರೋಧ ಪಕ್ಷವಾಗಿದ್ದು, ವಿಜಯಕಾಂತ್ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. 2006 ರ ಚುನಾವಣೆಯಲ್ಲಿ ವಿಜಯಕಾಂತ್ ಅವರ ಪಕ್ಷ ಡಿಎಂಡಿಕೆ ತಮಿಳುನಾಡಿನ ಎಲ್ಲಾ 234 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದರೆ ವಿಜಯಕಾಂತ್ ಮಾತ್ರ ಚುನಾವಣೆಯಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.
ಉಳಿದ ಎಲ್ಲಾ ಸ್ಥಾನಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳು ಸೋಲನಿಭವಿಸಿದ್ದರು. ಆದರೆ, ಈ ಚುನಾವಣೆಯಲ್ಲಿ ಅವರ ಪಕ್ಷ ಶೇಕಡಾ 8.38 ಮತಗಳನ್ನು ಪಡೆದಿತ್ತು. 2009 ರ ಲೋಕಸಭಾ ಚುನಾವಣೆಯಲ್ಲಿಯೂ ವಿಜಯಕಾಂತ್ ಅವರ ಪಕ್ಷಕ್ಕೆ ಇದೇ ರೀತಿಯ ಪರಿಸ್ಥಿತಿ ಎದುರಾಗಿತ್ತು. ಪಕ್ಷವು ರಾಜ್ಯದ 40 ಲೋಕಸಭಾ ಸ್ಥಾನಗಳ ಪೈಕಿ 39 ರಲ್ಲಿ ಸ್ಪರ್ಧಿಸಿತ್ತು, ಆದರೆ ಒಂದು ಸ್ಥಾನವನ್ನೂ ಗೆಲ್ಲಲಿಲ್ಲ. ಈ ಎರಡೂ ಚುನಾವಣೆಗಳಲ್ಲಿ ವಿಜಯಕಾಂತ್ ಪಕ್ಷ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿಲ್ಲ. 2011 ರಲ್ಲಿ ವಿಜಯಕಾಂತ್ ಅವರ ಪಕ್ಷವು 41 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ 29 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯಲ್ಲಿ ಜಯಲಲಿತಾ ಅವರ ಪಕ್ಷ ಎಐಎಡಿಎಂಕೆ ಹಾಗೂ ಬಳಿಕ ಡಿಎಂಡಿಕೆ ಎರಡನೇ ಪಕ್ಷವಾಗಿ ಹೊರಹೊಮ್ಮಿತು, ವಿಜಯಕಾಂತ್ ವಿರೋಧ ಪಕ್ಷದ ನಾಯಕರಾದರು. ಆದರೆ, ಇದಾದ ನಂತರ 2016 ಮತ್ತು 2021ರ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಅವರ ಪಕ್ಷಕ್ಕೆ ಸಾಧ್ಯವಾಗಲಿಲ್ಲ.
LATEST NEWS
ಮಕ್ಕಳು ಅಪ್ಪ – ಅಮ್ಮನ ಮುಂದೆ ಸುಳ್ಳು ಹೇಳಲು ಮುಖ್ಯ ಕಾರಣಗಳೇನು ಗೊತ್ತಾ ??
Published
8 hours agoon
06/12/2024ಮಕ್ಕಳು ಏನೇ ವಿಷಯಗಳಿದ್ದರೂ ಅದನ್ನು ತಂದೆ – ತಾಯಿಯ ಬಳಿ ಹೇಳಲು ಬಯಸುತ್ತಾರೆ. ಆದರೆ, ಹೀಗೆ ಹೇಳಲು ಬಂದ ಮಕ್ಕಳ ಮೇಲೆ ಕೆಲವೊಮ್ಮೆ ಪೋಷಕರು ರೇಗುವುದುಂಟು. ಮಕ್ಕಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬ ಅರಿವಿಲ್ಲದೆ ಮಾಡುವ ಈ ತಪ್ಪು ಮುಂದೆ ಪೋಷಕರಿಗೇ ಸಮಸ್ಯೆಯಾಗಬಹುದು.
ಅಮ್ಮನ ಅಡುಗೆ ರುಚಿಯ ವಿಚಾರ ಇರಬಹುದು, ಸಹೋದರ ಸಹೋದರಿಯರ ನಡುವಿನ ಜಗಳ ಇರಬಹುದು, ಶಾಲೆಯಲ್ಲಿ ನಡೆದಿರುವ ಅದ್ಯಾವುದೋ ಸಂತಸದ ಅಥವಾ ಬೇಸರದ ಸಂಗತಿ ಇರಬಹುದು, ಪೋಷಕರು ವ್ಯವಧಾನದಿಂದ ಕೇಳಿಸಿಕೊಳ್ಳಬೇಕು. ಅದರ ಬದಲಾಗಿ ಮಕ್ಕಳು ಅದೇನೋ ಹೇಳಲು ಬಂದಾಗ ಅಸಹನೆ, ಸಿಟ್ಟು ಪ್ರದರ್ಶಿಸಿದರೆ ಮಕ್ಕಳ ಮೃದು ಮನಸಿಗೆ ಘಾಸಿ ಉಂಟಾಗುವ ಅಪಾಯ ಇದೆ. ಇದು ಪೋಷಕರನ್ನು ಮೆಚ್ಚಿಸಲು ಅಥವಾ ಗಮನವನ್ನು ತಮ್ಮತ್ತ ಸೆಳೆಯಲು ಮಕ್ಕಳು ಸುಳ್ಳಿನ ದಾರಿ ಹಿಡಿಯಲು ಅವಕಾಶ ಮಾಡಿಕೊಡುವ ಅಪಾಯ ಇದೆ.
ಇನ್ನು ಮಕ್ಕಳೇನೋ ಮಾಡಬೇಕು ಎಂಬ ತುಡಿತವನ್ನು ಪೋಷಕರ ಮುಂದೆ ವ್ಯಕ್ತಪಡಿಸಿದಾಗ ಗದರಿಸಿ ಸುಮ್ಮನಿರುವಂತೆ ಮಾಡುವುದು ಕೂಡ ಅವರ ಭವಿಷ್ಯವನ್ನು ಚಿವುಟಿದಂತೆ. ಇದರಿಂದ ತಮ್ಮ ಕನಸನ್ನು ಪೋಷಕರು ಕಮರಿ ಹಾಕಿದ್ರು ಎಂಬ ಅಸಮಾಧಾನ ಮಕ್ಕಳ ಮನಸಿನ ಮೂಲೆಯಲ್ಲಿ ಕೂತು ಬಿಡುತ್ತದೆ. ಇದು ಮುಂದೆ ಬೆಳೆದು ದೊಡ್ಡವರಾದ ಮಕ್ಕಳಲ್ಲಿ ಪೋಷಕರು ತಮಗೇನು ಮಾಡಿಲ್ಲ ಎಂಬ ಭಾವ ಮೂಡಿಸುವ ಸಾಧ್ಯತೆ ಕೂಡ ಇದೆ. ತಾನು ಮಾಡಬೇಕು ಅಂದುಕೊಂಡಿದ್ದನ್ನು ಮನೆಯಲ್ಲಿ ಸುಳ್ಳು ಹೇಳಿ ಮಾಡಲು ಆರಂಭಿಸಿ ಮುಂದೆ ಸುಳ್ಳು ಹೇಳುವುದನ್ನೇ ಮೈಗೂಡಿಸುವ ಮನಸ್ಥಿತಿಗೆ ಮಕ್ಕಳು ಬರಬಹುದು.
ಹುಟ್ಟಿದ ಮಗುವಿನ ಲಾಲನೆ ಪಾಲನೆ ಮಾಡುವ ಪೋಷಕರು ಮಗುವಿಗೆ ನಡೆಯುವುದರಿಂದ ಹಿಡಿದು ಮಾತನಾಡುವುದು, ತಿನ್ನುವುದು ಎಲ್ಲವನ್ನೂ ಕಲಿಸುತ್ತಾರೆ. ಆದರೆ, ಮಕ್ಕಳು ಬೆಳೆಯುತ್ತಾ ಹೋದಂತೆ ಕೆಲವೊಂದು ಬಾರಿ ಮಕ್ಕಳು ಕೇಳುವ ಪ್ರಶ್ನೆಗಳು, ಮಾಡುವ ಹಠಗಳು, ಹಾಗೂ ಅವರ ಬೇಡಿಕೆಗಳು ಕಿರಿಕಿರಿ ಅನಿಸಿ ಬಿಡುತ್ತದೆ. ಮಕ್ಕಳಿಗೆ ಏನು ಬೇಕು, ಏನು ಬೇಡ ಎಂಬುವುದು ಪೋಷಕರಿಗೆ ಗೊತ್ತಿರುತ್ತದೆಯಾದ್ರೂ ಕೆಲವೊಂದು ವಿಚಾರವನ್ನು ಮಕ್ಕಳಿಗೆ ನವಿರಾಗಿ ವಿವರಿಸಿ ಅರ್ಥೈಸಬೇಕು. ಆದ್ರೆ, ಎಲ್ಲವನ್ನೂ ನವಿರಾಗಿ ನಿರಾಕರಿಸುತ್ತಾ ಹೋದರೆ ನನ್ನ ಹೆತ್ತವರು ನನಗಾಗಿ ಏನೂ ಮಾಡುತ್ತಿಲ್ಲ ಎಂಬ ಭಾವ ಮಕ್ಕಳಲ್ಲಿ ಮೂಡಬಹುದು. ತಮ್ಮ ಕನಸಿಗೆ ಪೋಷಕರೇ ಅಡ್ಡಿ ಎಂಬ ಸಣ್ಣದೊಂದು ಅಸಹನೆ ಇಲ್ಲಿಂದಲೇ ಆರಂಭವಾಗಬಹುದು.
ಸಣ್ಣ ಪ್ರಾಯದಲ್ಲಿ ಮಕ್ಕಳು ದೂರು ಹೇಳುವ ಪ್ರಮುಖ ಕಾರಣಗಳು :
ಗಮನವನ್ನು ತನ್ನತ್ತ ಸೆಳೆಯಲು:
ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಮಕ್ಕಳಿದ್ದು, ಒಬ್ಬರ ಕಡೆ ಹೆಚ್ಚಿನ ಗಮನ ನೀಡುತ್ತಾರೆ ಅಂತ ಮಗುವಿನ ಮನಸಿನಲ್ಲಿ ಮೂಡಿದಾಗ ಗಮನ ತನ್ನತ್ತ ಸೆಳೆಯಲು ಸುಳ್ಳು ದೂರುಗಳನ್ನು ಹೇಳಲು ಆರಂಭಿಸುತ್ತಾರೆ. ಇದು ಶಾಲೆಯಲ್ಲೂ , ಕುಟುಂಬ ಸದಸ್ಯರ ಮುಂದೆಯೂ ನಡೆಯುವ ಮೂಲಕ ಪೋಷಕರನ್ನು ಮುಜುಗರಕ್ಕೆ ಸಿಲುಕಿಸಬಹುದು. ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ಮನೋಭಾವನೆಯಿಂದ ಮಕ್ಕಳು ಸಣ್ಣ ಸಣ್ಣ ವಿಚಾರಗಳಲ್ಲೂ ಜಗಳ ಆಡುವುದು, ಸುಳ್ಳು ಹೇಳುವುದು ಮಾಡಬಹುದು. ಇಂತಹ ವಿಚಾರ ಬಂದಾಗ ಮಕ್ಕಳ ಜಗಳವನ್ನು ನಾಜೂಕಾಗಿ ಪರಿಹರಿಸಬೇಕು.
ಅಸಹನೆ , ಸಿಟ್ಟು, ಜಗಳ , ದೂರುಗಳು ಇವುಗಳನ್ನು ನಿರ್ಲಕ್ಷ್ಯ ಮಾಡಬೇಡಿ.
ಮಕ್ಕಳು ಪದೇಪದೇ ಸಿಟ್ಟಾಗುವುದು, ಅಸಹನೆಯಿಂದ ಒಂಟಿಯಾಗಿ ಕೂರುವುದು, ಸ್ನೇಹಿತರ ಜೊತೆ ಜಗಳ ಮಾಡುವುದು, ದೂರುಗಳನ್ನು ಹೇಳಿಕೊಂಡು ಬರುತ್ತಾರೆ ಅಂದ್ರೆ ನಿರ್ಲಕ್ಷ್ಯ ಮಾಡಬೇಡಿ. ಯಾಕೆಂದರೆ ಇದು ಯಾಕಾಗಿ ಹೀಗೆ ಎಂಬುವುದನ್ನು ಮೊದಲು ತಮ್ಮಲ್ಲೇ ಪ್ರಶ್ನೆ ಮಾಡಿಕೊಳ್ಳಿ. ಪೋಷಕರಾಗಿ ತಮ್ಮಿಂದೇನು ತಪ್ಪಾಗಿಲ್ಲ ಎಂದರೆ ಒಂದು ಬಾರಿ ತಜ್ಞ ವೈದ್ಯರನ್ನು ಸಂಪರ್ಕಿಸಿ.
LATEST NEWS
ಉಡುಪಿ : ಶೀರೂರು ಪರ್ಯಾಯಕ್ಕೆ ಬಾಳೆ ಮುಹೂರ್ತ ಸಂಪನ್ನ
Published
9 hours agoon
06/12/2024By
NEWS DESK4ಉಡುಪಿ : ಪ್ರಥಮ ಬಾರಿಗೆ ಉಡುಪಿ ಶ್ರೀಕೃಷ್ಣಮಠದ ಪರ್ಯಾಯ ಪೀಠ ಏರಲಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಇಂದು ಬಾಳೆ ಮುಹೂರ್ತ ನೆರವೇರಿಸಿದರು. ಪೂರ್ಣ ಪ್ರಜ್ಞ ಕಾಲೇಜು ಬಳಿಯ ಶೀರೂರು ಮಠದ ತೋಟದಲ್ಲಿ ಭಾವಿ ಪರ್ಯಾಯ ಶ್ರೀಗಳು ಬಾಳೆ ಸಸಿ ನೆಟ್ಟರು.
ಮುಹೂರ್ತಕ್ಕೂ ಮುನ್ನ ಕೃಷ್ಣ, ಮುಖ್ಯ ಪ್ರಾಣ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಶ್ರೀಗಳು ಶೀರೂರು ಮಠ, ಅನಂತೇಶ್ವರ, ಚಂದ್ರಮೌಳೀಶ್ವರನ ದರ್ಶನ ಪಡೆದರು. ಮೆರವಣಿಗೆಯಲ್ಲಿ ಬಾಳೆ ಗಿಡಗಳನ್ನು ಹೊತ್ತು ಸಾಗಿ ಮುಹೂರ್ತ ಕಾರ್ಯ ನೆರವೇರಿಸಲಾಯಿತು.
ಇದನ್ನೂ ಓದಿ : ಸೊಸೈಟಿಯಿಂದ ಹಣ ಡ್ರಾ ಮಾಡಿ ನಾಪತ್ತೆಯಾಗಿದ್ದ ವ್ಯಕ್ತಿಯ ಶ*ವ ಪತ್ತೆ!
ಈ ಬಾಳೆಯ ಎಲೆಗಳನ್ನು ಬಳಸಿಕೊಂಡು ಪರ್ಯಾಯ ಅವಧಿಯಲ್ಲಿ ಅನ್ನದಾಸೋಹ ಕಾರ್ಯ ನಡೆಯಲಿದೆ. ಇನ್ನು ಒಂದು ವರ್ಷಗಳ ಕಾಲ ಶೀರೂರು ಶ್ರೀ ದೇಶಾದ್ಯಂತ ತೀರ್ಥಕ್ಷೇತ್ರಗಳ ಸಂದರ್ಶನ ಮಾಡಲಿದ್ದಾರೆ.
LATEST NEWS
ಮಂಗಳೂರು: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ
Published
9 hours agoon
06/12/2024By
NEWS DESK2ಮಂಗಳೂರು: ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ(ಡಿ.6) ನಡೆದಿದೆ.
ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನ ರೇಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಬಳಿಕ ಪಾಂಡೇಶ್ವರ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.