Tuesday, October 19, 2021

ಮನೆಯಲ್ಲಿ ಜನ 5 ಇದ್ರೂ ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಓಟು..!

ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲಾಗಿತ್ತು. ಆದರೆ, ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಕೇವಲ ಒಂದು ಮತ ಪಡೆದು ನಗೆಪಾಟೀಲುಗೀಡಾದ ಘಟನೆ ನಡೆದಿದೆ.

ತಮಿಳುನಾಡು ಚುನಾವಣಾ ರಾಜಕಾರಣದಲ್ಲೇ ಕೇವಲ ಒಂದು ಮತ ಪಡೆದ ಅಭ್ಯರ್ಥಿ ಎಂಬ ಕುಖ್ಯಾತಿಗೆ ಇದೀಗ ಬಿಜೆಪಿ ಅಭ್ಯರ್ಥಿ ಒಳಗಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಡಿ.ಕಾರ್ತಿಕ್ ಕೊಯಮತ್ತೂರು ಜಿಲ್ಲೆಯ ಪೆರಿಯನೈಕೆನ್ಪಾಳ್ಯಂ ವಾರ್ಡ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಅವರ ಕುಟುಂಬದಲ್ಲಿಯೇ 5 ಜನ ಮತದಾರರಿದ್ದರು ಸಹ ಅವರು ಕೇವಲ ಒಂದೇ ಒಂದು ಮತ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.

ಅದು ಅವರದೇ ಮತ ಎಂದು ಹಲವರು ವ್ಯಂಗ್ಯವಾಡಿದ್ದು ಟ್ವಿಟರ್‌ನಲ್ಲಿ ‘ಸಿಂಗಲ್ ವೋಟ್ ಬಿಜೆಪಿ’ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಈ ಮೂಲಕ ತಮಿಳುನಾಡಿನ ಜನ ತಮ್ಮ ಮನೆಯವನೇ ಅಭ್ಯರ್ಥಿಯಾದರೂ ಬಿಜೆಪಿಗೆ ಮತ ಹಾಕಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ.
ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ ಮೀನಾ ಕಂದಸಾಮಿ ಟ್ವೀಟ್ ಮಾಡಿ, “ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಕೇವಲ ಒಂದು ಮತ ಸಿಕ್ಕಿದೆ. ಇತರರಿಗೆ ಮತ ಹಾಕಲು ನಿರ್ಧರಿಸಿದ ಅವರ ಮನೆಯ ಇತರ ನಾಲ್ಕು ಮತದಾರರ ಬಗ್ಗೆ ನನಗೆ ಹೆಮ್ಮೆ ಇದೆ” ಎಂದಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...