ಕಾರ್ಕಳ: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾರ್ಕಳದ ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಇಂದು ಅಪರಾಹ್ನ ನಡೆದಿದೆ.
ಮೃತರನ್ನು ಮಹಾರಾಷ್ಟ್ರ ಮೂಲದ ವೈಭವ್ ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಸಹಸವಾರೆ ಕೋಲಾರ ಮೂಲದ ವಿದ್ಯಾರ್ಥಿನಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರಿಬ್ಬರು ಮಂಗಳೂರಿನ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.
ಇವರು ಬೈಕಿನಲ್ಲಿ ಹೊರನಾಡು ದೇವಸ್ಥಾನಕ್ಕೆ ಹೋಗಿದ್ದು, ವಾಪಾಸ್ಸು ಬರುತ್ತಿದ್ದ ವೇಳೆ ಟ್ಯಾಂಕರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರ ಪೈಕಿ ಸವಾರ ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.