ರಾ.ಹೆ 66ರಲ್ಲಿ ಕಾರು ಟ್ಯಾಂಕರ್ ನಡುವೆ ಭೀಕರ ಅಪಘಾತ; ಕಾರು ಸಂಪೂರ್ಣ ಜಖಂ..!
ಉಡುಪಿ: ಕಾರು ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಕಾರು ಸಂಪೂರ್ಣ ಜಖಂಗೊಂಡ ಘಟನೆ , ಉಡುಪಿ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾರು ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದಾಗ, ಉಡುಪಿ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಗೊಂಡಿದ್ದು, ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪ್ರಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ..