ಆಧ್ಯಾತ್ಮದಲ್ಲಿ ಉನ್ನತ ಸಾಧನೆಗೈದಿದ್ದ ತಪೋವನಿ ಮಾತಾಜಿ ವಿಧಿವಶ;
Tapovani Mataji who has achieved great spirituality; has passed away
ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟಿದ್ದ ಅಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆಗೈದಿದ್ದ ತಪೋವನಿ ಮಾತಾಜಿ ಯಾನೆ ಸುಭದ್ರಾ ಮಾತಾಜಿ ಗುರುವಾರ ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಸುಮಾರು 89 ವರ್ಷ ವಯಸ್ಸಾಗಿತ್ತು. ಮಾತಾಜಿಯವರರು ಮೂಲತಃ ಉಡುಪಿಯ ಪಂದುಬೆಟ್ಟಿನವರಾಗಿದ್ದು, ಮೂಲ ಹೆಸರು ವಾರಿಜಾಕ್ಷಿ.
ಬಾಲ್ಯದಲ್ಲೇ ಅಧ್ಯಾತ್ಮದ ಸೆಳೆತಕ್ಕೆ ಒಳಗಾಗಿದ್ದ ಮಾತಾಜಿಯವರು ಉಡುಪಿಯ ಮಠ ಮತ್ತು ದೇವಾಲಯದ ಪರಿಸರದಲ್ಲೇ ಭಜನೆ ಪ್ರವಚನ ಸತ್ಸಂಗ ಮೊದಲಾದವುಗಳಲ್ಲಿ ಭಾಗಿಯಾಗುತ್ತಿದ್ದರು.
ಮುಂದೆ ಪೇಜಾವರ ಶ್ರೀಗಳಲ್ಲಿ ಅವರು ಮಂತ್ರೋಪದೇಶ ಪಡೆದು ಅಧ್ಯಾತ್ಮ ಸಾಧನೆಗಾಗಿ ಸುಮಾರು 50-60 ವರ್ಷಗಳ ಹಿಂದೆ ಬಹಳ ಕಷ್ಟ ಪಟ್ಟು ಉತ್ತರದ ಹಿಮಾಲಯ ಸೇರಿದ್ದರು.
ತಪೋವನೀ ಮಾ ನಿಧನಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ . ಉಡುಪಿ ಕೃಷ್ಣ ಮತ್ತು ತಮ್ಮ ಗುರುಗಳಲ್ಲಿ ಅನನ್ಯ ಶ್ರದ್ಧೆ ಭಕ್ತಿ ಯನ್ನು ಹೊಂದಿದ್ದ ಮಾತಾಜಿಯವರು ಕಠೋರ ಅಧ್ಯಾತ್ಮ ತುಡಿತದಿಂದ ಮಾಡಿದ ಸಾಧನೆ ಎಲ್ಲರಿಗೂ ಮಾದರಿ.ಅವರ ಆತ್ಮಕ್ಕೆ ಶ್ರೀ ಕೃಷ್ಣನು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ . ಕೇಂದ್ರದ ಮಾಜಿ ಮಂತ್ರಿ ಉಮಾ ಭಾರತಿ , ಭಾಸ್ಕರ ಮಯ್ಯ ಎಂ, ಪೇಜಾವರ ಮಠದ ದಿವಾನ ರಘುರಾಮಾಚಾರ್ಯ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶಾಮಲಾ ಕುಂದರ್ , ವಾಸುದೇವ ಭಟ್ ಪೆರಂಪಳ್ಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ .